ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
Team Udayavani, Mar 25, 2024, 10:02 PM IST
ತುಮಕೂರು: ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾರಣಕ್ಕೆ ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದೆ ಎಂದು ಮಾಜಿ ಸಚಿವ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.
ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಅವಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ. ಕಾಂಗ್ರೆಸ್‌ನವರು ಕೆಲವು ವಿಷಯಗಳನ್ನು ತಿರುಚುತ್ತಾರೆ. ಹೆಗಡೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಹೇಳಿಲ್ಲ, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಆದರೆ ಅವರು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬ ಭಾವನೆ ಮೂಡಿದೆ.
ಪುಣ್ಯಾತ್ಮ ಡಾ| ಬಿ.ಆರ್.ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟಿದ್ದಾರೆ. ಈ ಸಂವಾದದಲ್ಲಿಯೂ ಸಂವಿಧಾನ ಪುಸ್ತಕ ನೀಡಿದ್ದೀರಿ, ನಾನು ಸಂವಿಧಾನದ ಆಶಯದಂತೆ ನಡೆಯುತ್ತೇನೆ ಎಂದು ವಿ. ಸೋಮಣ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.