ಕಾಂಗ್ರೆಸ್‌ನಿಂದ ಆರೋಗ್ಯ ಹಸ್ತ ಕಾರ್ಯಕ್ರಮ
Team Udayavani, Aug 7, 2020, 11:40 AM IST
ಕೊರಟಗೆರೆ: ಕರುನಾಡಿನ 6025 ಗ್ರಾಪಂಗಳಿಗೆ ಕಾಂಗ್ರೆಸ್ ನಿಂದ 12050 ಜನ ಡಿಜಿಟಲ್ ವಾರಿಯರ್ಸ್ ನೇಮಕ ಮಾಡಿ ಗ್ರಾಮೀಣ ಪ್ರದೇಶದ ಜನತೆಯ ಆರೋಗ್ಯ ತಪಾಸಣೆಗಾಗಿ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಡಾ.ಜಿ. ಪರಮೇಶ್ವರ್ ಜನುಮ ದಿನದಂದೇ ಕೊರಟಗೆರೆ ಕ್ಷೇತ್ರ ದಿಂದ ಚಾಲನೆ ನೀಡಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ವಕ್ತಾರ ಮುರಳೀಧರ ಹಾಲಪ್ಪ ತಿಳಿಸಿದರು.
ಪಟ್ಟಣದ ಹೊರವಲಯದ ಭೈಲಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಡಾ.ಜಿ.ಪರಮೇಶ್ವರ್‌ರ 69ನೇ ಹುಟ್ಟು ಹಬ್ಬದ ಪ್ರಯುಕ್ತ ಕೊರಟಗೆರೆ ಡಾ.ಜಿ. ಪರಮೇಶ್ವರ್ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ಆಟೋಚಾಲಕ ಮತ್ತು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣಾ ಕಾರಕ್ರಮದಲ್ಲಿ ಮಾತನಾಡಿದರು. ಕೊರಟಗೆರೆ ಕ್ಷೇತ್ರದ ಪ್ರತಿ ಗ್ರಾಪಂಗಳಿಗೆ ತಲಾ ಇಬ್ಬರು ಸ್ವಯಂ ಸೇವಕರ ತಂಡದಿಂದ ಪ್ರತಿಮನೆ ಆರೋಗ್ಯ ತಪಾಸಣೆ ಆ.15 ರಿಂದ ಪ್ರಾರಂಭವಾಗಲಿದೆ ಎಂದರು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಟಿ. ವೆಂಕಟೇಶ್, ಕೋವಿಡ್ ದಿಂದ ವಿಶ್ವ ಮತ್ತು ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಕುಸಿದಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ನಿರುದ್ಯೋಗ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆ ಬಡಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಪಟ್ಟಣದ ಆಟೋ ಚಾಲಕರು, ಪಪಂ ಪೌರ ಕಾರ್ಮಿಕರು ಮತ್ತು ರೆಡ್‌ಕ್ರಾಸ್ ಸ್ವಯಂ ಸೇವಕರು ಸೇರಿದಂತೆ 70 ಜನರಿಗೆ ಆಹಾರ ಕಿಟ್ ವಿತರಿಸಲಾಯಿತು. ಪಪಂ ಸದಸ್ಯರಾದ ಓಬಳರಾಜು, ನರಸಿಂಹಪ್ಪ, ಪಪಂ ಮಾಜಿ ಸದಸ್ಯ ಲೋಕೇಶ್, ತುಮ ಕೂರು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಚಾಲಕ ವೆಂಕಟೇಶ್‌ಬಾಬು, ಮಧುಗಿರಿ ಯುಕ್ತ ಫೌಂಡೇಷನ್ ಅಧ್ಯಕ್ಷ ದಿಲೀಪ್, ಕಾಂಗ್ರೆಸ್ ಮುಖಂಡರಾದ ಏರ್‌ಟೆಲ್ ಗೋಪಿ, ಕೆಎಲ್‌ಎಂ ಮಂಜು, ರಿಜಾÌನ್, ಲಕ್ಷ್ಮೀಕಾಂತ, ಕೃಷ್ಣ, ಪವನ್, ನಟರಾಜು, ರಾಜೇಶ್, ದಿಪೀಕಾ, ನವೀನ್, ಮುರಳಿ, ನಾಗೇಶ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.