ನಿರ್ವಾಹಕನ ಮೇಲೆ ಹಲ್ಲೆ : ಆರೋಪಿ ಬಂಧನ
Team Udayavani, Dec 10, 2018, 3:49 PM IST
ಕುಣಿಗಲ್ : ಬಸ್‌ನಲ್ಲಿ ಜಗಳ ಮಾಡಬೇಡಿ ಎಂದು ಬುದ್ಧಿ ಹೇಳಿದ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ವ್ಯಕ್ತಿಯೋರ್ವ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಣಿಗಲ್ ಘಟಕದ ಸಾರಿಗೆ ಬಸ್ ನಿರ್ವಾಹಕ ಧನಂಜಯ್ಯ ಗಾಯಗೊಂಡವರು.
ಮೈಸೂರಿನಿಂದ ತುಮಕೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹುಲಿಯೂರು ದುರ್ಗ ಬಸ್ ನಿಲ್ದಾಣ ಬಳಿ ನಿಲ್ಲಿಸಿದಾಗ ಸಂತೇಮಾವತ್ತೂರು ಗ್ರಾಮದ ಮಂಜುನಾಥ್ ಸೇರಿದಂತೆ ಆತನ ಜತೆಯಲ್ಲಿ ಐದು ಮಂದಿ ಬಸ್‌ಗೆ ಹತ್ತಿಕೊಂಡರು. ಆದರೆ, ಬಸ್‌ನಲ್ಲಿ ಆ ಐದು ಮಂದಿ ಜಗಳವಾಡುತ್ತಿದ್ದರು.
ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಜಗಳವಾಡಬೇಡಿ ಎಂದು ನಿರ್ವಾಹಕ ಧನಂಜಯ್ಯ ಬುದ್ಧಿವಾದ ಹೇಳಿದ್ದರು. ಇದರಿಂದ ಕೆರಳಿದ ಮಂಜುನಾಥ್ ನಿರ್ವಾಹಕನೊಂದಿಗೆ ಜಗಳಕ್ಕೆ ಇಳಿದು ಬಳಿಕ ಕುಣಿಗಲ್ ಹುಚ್ಚಮಾಸ್ತಿಗೌಡ ವೃತ್ತದ ಬಳಿ ಬಸ್ ನಿಲ್ಲಿಸಿ ಪ್ರಯಾಣಿಕರಿಗೆ
ಧನಂಜಯ್ಯ ಚಿಲ್ಲರೆ ನೀಡುತ್ತಿರಬೇಕಾದರೆ ಆರೋಪಿ ಮಂಜುನಾಥ ಕಬ್ಬಿಣದ ಕೊಕ್ಕೆಯಿಂದ ಕುತ್ತಿಗೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಗಾಯಗೊಂಡ ನಿರ್ವಾಹಕನನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಲೆ ಮರೆಸಿಕೊಂಡಿದ್ದ ಆರೋಪಿ ಮಂಜುನಾಥನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.