ಹಲ್ಲೆ: ನಾಳೆ ತುಮಕೂರು ಬಂದ್
ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಐದು ಮಂದಿ ಆರೋಪಿಗಳ ಬಂಧನ
Team Udayavani, Oct 21, 2021, 3:13 PM IST
ತುಮಕೂರು: ಭಜರಂಗದಳದ ಜಿಲ್ಲಾ ಸಂಚಾಲಕರ ಮೇಲೆ, ಒಂದು ಸಂಘಟನೆಯ ಜನರು ನಡೆಸಿರುವ ಮಾರಾಣಾಂತಿಕ ಹಲ್ಲೆಯನ್ನು ಖಂಡಿಸಿ ಅ.22 ರಂದು ತುಮಕೂರು ಬಂದ್‌ಗೆ ವಿಶ್ವ ಹಿಂದೂ ಪರಿ ಷತ್ ಕರೆ ನೀಡಿದೆ ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಿ.ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಅ.19ರ ಸಂಜೆ 4.30ರ ಸುಮಾರಿಗೆ ನಡೆದ ಗುಬ್ಬಿ ಗೇಟ್ ಸರ್ಕಲ್ ಸಮೀಪ ನಡೆದ ಘಟನೆಯಲ್ಲಿ ಹಿಂದೂಪರ ಸಂಘಟನೆಯಾದ ಭಜರಂಗದಳದ ತುಮಕೂರು ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಮತ್ತು ಕಿರಣ್ ಎಂಬುವವರ ಮೇಲೆ ಒಂದು ಸಮು ದಾಯದ ಜನರು ನಡೆಸಿರುವ ಮಾರಾಣಾಂತಿಕ ಹಲ್ಲೆಯನ್ನು ಖಂಡಿಸಿ, ಅ.22ರಂದು ತುಮಕೂರು ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಯಂ ಪ್ರೇರಿತ ಬೆಂಬಲ ನೀಡಿ: ತುಮಕೂರು ನಗರದ ಎಲ್ಲಾ ವಾಣಿಜ್ಯ ಮಳಿಗೆಗಳ ಮಾಲೀಕರು ಅಂದು ತಮ್ಮ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ, ತುಮಕೂರು ಬಂದ್‌ಗೆ ಸ್ವಯಂ ಪ್ರೇರಿತ ಬೆಂಬಲ ನೀಡಬೇಕು ಎಂದು ತುಮಕೂರು ನಗರದ ಜನರಿಗೆ ಮನವಿ ಮಾಡಿದ್ದಾರೆ. ಬಂದ್‌ಗೆ ವಿವಿಧ ಸಂಘ- ಸಂಸ್ಥೆಗಳ ಮುಖಂ ಡರು ಬೆಂಬಲ ವ್ಯಕ್ತ ಪಡಿಸಿದ್ದಾರೆ ಎಂದಿರುವ ಅವರು, ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಬಿಗಿ ಭದ್ರತೆ: ತುಮಕೂರಿನಲ್ಲಿ ಭಜರಂಗದಳದ ಕಾರ್ಯಕರ್ತರ ಮೇಲೆ ಒಂದು ಗುಂಪಿನವರು ಹಲ್ಲೆ ಮಾಡಿರುವ ಹಿನ್ನಲೆ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ. ತುಮಕೂರು ನಗರದಲ್ಲಿ ನಡೆದ ಗುಂಪು ಗಲಭೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ನಗರದಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ;- ಚೀನಾ ಬೆದರಿಕೆ: ಎಲ್‌ಎಸಿ ಬಳಿ ಭಾರತೀಯ ಸೇನೆಯ ಕಠಿಣ ಸಮರಾಭ್ಯಾಸ
ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ತುಮಕೂರು: ನಗರದ ಗುಬ್ಬಿ ಗೇಟ್ ಸಮೀಪ ಸಂಜೆ 4.30 ಗಂಟೆಯಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಏಕಾಏಕಿ ಗುಂಪು ಕಟ್ಟಿಕೊಂಡು ಗಲಾಟೆ ಮಾಡಿರುವ ಸಂಬಂಧ ಐದು ಜನರನ್ನು ಬಂಧಿಸ ಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ತಿಳಿಸಿದ್ದಾರೆ. ಈ ಘಟನೆಯಲ್ಲಿ ರಕ್ತ ಗಾಯವಾಗಿದ್ದು, ಘಟನೆ ಸಂಬಂಧಪಟ್ಟಂತೆ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ಗಂಭೀರ ಸ್ವರೂಪದಲ್ಲಿ ಇದ್ದುದರಿಂದ ಆರೋಪಿಗಳನ್ನು ದಸ್ತಗಿರಿ ಮಾಡಲು ಎರಡು ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣ ತನಿಖೆ ಹಂತದಲ್ಲಿ ಇರುವುದರಿಂದ ಆರೋಪಿಗಳ ಹೆಸರು ಬಹಿರಂಗ ಮಾಡಿಲ್ಲ. ಇನ್ನು ಉಳಿದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವಾಗಿ ಪತ್ತೆ ಮಾಡಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತ್ಯೇಕ ತಂಡ ರಚನೆ: ಈ ಘಟನೆಗೆ ಸಂಬಂಧ ಪಟ್ಟಂತೆ ನಗರದ ಹೊರ ವಲಯ ರಿಂಗ್ ರೋಡ್ ಮತ್ತು ನಗರ ರಸ್ತೆಗಳಲ್ಲಿ ವೀಲಿಂಗ್ ಮಾಡುತ್ತಿರು ವುದರಿಂದ ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತಿರು ವುದರಿಂದ ಪ್ರತ್ಯೇಕವಾಗಿ ತಂಡವನ್ನು ರಚನೆ ಮಾಡಲಾಗಿದ್ದು, ಬೈಕ್ ವೀಲಿಂಗ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.