ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ತ್ಯಜಿಸಿ


Team Udayavani, Nov 29, 2020, 4:38 PM IST

ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ತ್ಯಜಿಸಿ

ತುಮಕೂರು: ಪ್ಲಾಸ್ಟಿಕ್‌ ಬಳಕೆ ಆರೋಗ್ಯಕ್ಕೆ ಹಾನಿಕರ. ಇದನ್ನು ಪ್ರತಿಯೊಬ್ಬರೂ ಅರಿತು ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ತ್ಯಜಿಸಬೇಕು ಎಂದು ಮಹಾನಗರ ಪಾಲಿಕೆ ಮೇಯರ್‌ ಫ‌ರೀದಾ ಬೇಗಂಕರೆ ನೀಡಿದರು.

ಮಹಾನಗರ ಪಾಲಿಕೆ ಕಚೇರಿ ಸಭಾಂ ಗಣದಲ್ಲಿ ಸಂಕಲ್ಪ ಫೌಂಡೇಶನ್‌ ಮತ್ತು ಮಹಾ ನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿ ಕೊಂಡಿದ್ದ ಹೋಟೆಲ್‌ ಆಹಾರ ವಿತರಣೆಯಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆಯ ಬಗ್ಗೆ ಅರಿವುಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ಲಾಸ್ಟಿಕ್‌ ಆರೋಗ್ಯಕ್ಕೆ ಹಾನಿಕಾರಕ: ಪ್ಲಾಸ್ಟಿಕ್‌ ಬಳಕೆಯಿಂದ ಆರೋಗ್ಯಕ್ಕೆ ಹಾನಿಕರ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಹೋಟೆಲ್‌ನವರು, ಅಂಗಡಿಗಳ ವರ್ತ ಕರು ತಮ್ಮ ದಿನನಿತ್ಯ ವ್ಯಾಪಾರ ವಹಿವಾ ಟಿನಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದರು.

ಪ್ಲಾಸ್ಟಿಕ್‌ ಬಳಸಬೇಡಿ: ನಿಷೇಧಿತ ಪ್ಲಾಸ್ಟಿಕ್‌ ಬಳಕೆ ವಿರುದ್ಧ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ಹಾಕಲಾಗುತ್ತಿದ್ದರೂ ದಂಡಕಟ್ಟಿದ ತದ ನಂತರ ಮತ್ತೆ ಪ್ಲಾಸ್ಟಿಕ್‌ ಬಳಕೆಮಾಡುತ್ತಿರುವ ಬಗ್ಗೆ ದೂರು ಬರುತ್ತಿವೆ. ಇದಕ್ಕೆ ಅವಕಾಶ ನೀಡದೆ ಹೋಟೆಲ್‌ನವರು, ವರ್ತಕರು ಸ್ವಯಂ ಪ್ರೇರಿತರಾಗಿಯೇ ನಿಷೇಧಿತ ಪ್ಲಾಸ್ಟಿಕ್‌ ಬಳಕೆಯನ್ನುಕೈಬಿಡಬೇಕು ಎಂದು ಸಲಹೆ ಮಾಡಿದರು.

ಪ್ಲಾಸ್ಟಿಕ್‌ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪ್ರತಿಯೊಬ್ಬರೂ ಅರಿವು ಮೂಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ನಗರಪಾಲಿಕೆ ಜತೆ ಕೈ ಜೋಡಿಸಿ: ಪ್ಲಾಸ್ಟಿಕ್‌ ಬಳಕೆಯಿಂದಾಗುವ ದುಷ್ಪರಿಣಾಮಗಳು ಜಾಸ್ತಿಯೇ ಇದೆ. ಹಾಗಾಗಿ ಹೋಟೆಲ್‌ ಮಾಲೀಕರು ಮಹಾನಗರ ಪಾಲಿಕೆ ಜೊತೆ ಕೈಜೋಡಿಸಿ ಪ್ಲಾಸ್ಟಿಕ್‌ ಮುಕ್ತ ತುಮಕೂರು ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದರು. ನಾಗರಿಕರು ಸಹ ತಾವಾಗಿಯೇ ಈ ಬಗ್ಗೆ ಅರಿತು ಪ್ಲಾಸ್ಟಿಕ್‌ ತ್ಯಜಿಸಿದರೆ ಮಾತ್ರ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ನಿಷೇಧಿಸಬಹುದಾಗಿದೆ ಎಂದರು.

ಸ್ವಯಂ ಪ್ರೇರಿತರಾಗಿ ಪ್ಲಾಸ್ಟಿಕ್‌ ನಿಷೇಧಿಸಿ: ಪಾಲಿಕೆ ಆಯುಕ್ತ ರೇಣುಕಾ ಮಾತನಾಡಿ, ಹೋಟೆಲ್‌ ಅಸೋಸಿಯೇಷನ್‌ ಮೂಲಕವೂ ಪ್ಲಾಸ್ಟಿಕ್‌ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ. ಪಾಲಿಕೆ ಅಧಿಕಾರಿಗಳು ದಾಳಿ ಮಾಡಿ ದಂಡ ಹಾಕುವ ಹಂತಕ್ಕೆ ಪರಿಸ್ಥಿತಿಯನ್ನು ಹೋಟೆಲ್‌ ಗಳವರು, ವರ್ತಕರು ತಂದುಕೊಳ್ಳಬಾರದು. ಸ್ವಯಂ ಪ್ರೇರಿತರಾಗಿಯೇ ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಮುಂದಾಗಬೇಕು ಎಂದರು.

ಪ್ಲಾಸ್ಟಿಕ್‌ನಿಂದ ಕ್ಯಾನ್ಸರ್‌: ಕೆಲ ಹೋಟೆಲ್‌ ಗಳಲ್ಲಿ ಪ್ಲಾಸ್ಟಿಕ್‌ಬಳಕೆ ಮಾಡುತ್ತಿರುವುದರಿಂದ ಮನುಷ್ಯರಿಗೆ ಕ್ಯಾನ್ಸರ್‌ ರೋಗ ಬರಲು ಕಾರಣವಾಗುತ್ತಿದೆ. ಕೆಲ ಫ‌ುಟ್‌ಪಾತ್‌ ಹೋಟೆಲ್‌ಗ‌ಳಲ್ಲಿ ಹೆಚ್ಚು ಹೆಚ್ಚು ಪ್ಲಾಸ್ಟಿಕ್‌ ಬಳಕೆ ಮಾಡಲಾಗುತ್ತಿದೆ. ಮನುಷ್ಯನ ಆರೋಗ್ಯ ದೃಷ್ಟಿಯಿಂದ ಹಾಗೂ ಸ್ವತ್ಛಪರಿಸರ ನಿರ್ಮಾಣಕ್ಕಾಗಿ ಪ್ಲಾಸ್ಟಿಕ್‌ ಬಳಕೆ ತ್ಯಜಿಸಬೇಕು ಎಂದು ಹೇಳಿದರು.

ಪ್ಲಾಸ್ಟಿಕ್‌ನಿಂದ ಮನುಷ್ಯನ ಆರೋಗ್ಯವನ್ನೇ ಹಾಳಾಗುತ್ತಿದೆ. ಬಿ.ಪಿ., ಶುಗರ್‌ ಇನ್ನಿತರೆಕಾಯಿಲೆಗಳಿಗೆ ಈ ಪ್ಲಾಸ್ಟಿಕ್‌ ಬಳಕೆ ಕಾರಣವಾಗುತ್ತಿದೆ. ಹೋಟೆಲ್‌ ಅಸೋಸಿಯೇಷನ್‌ನವರು ಕಡ್ಡಾಯವಾಗಿ ಪ್ಲಾಸ್ಟಿಕ್‌ ನಿಷೇಧವನ್ನು ಪಾಲಿಸಬೇಕು. ಜತೆಗೆ ಇತರೆ ಹೋಟೆಲ್‌ಗ‌ಳವರಿಗೂ ಈ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ಪಾಲಿಕೆ ಉಪಮೇಯರ್‌ ಶಶಿಕಲಾ ಗಂಗಹನುಮಯ್ಯ,ಜಿ.ಎಸ್‌.ಮಂಜುನಾಥ್‌, ಡಾ. ನವೀನ್‌, ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗೇಶ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.