ಕೊರಟಗೆರೆ: ಹೊಳವನಹಳ್ಳಿ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ

Team Udayavani, Mar 9, 2022, 6:33 PM IST

ಕೊರಟಗೆರೆ: ಹೊಳವನಹಳ್ಳಿ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಆರೋಗ್ಯ ಕೇಂದ್ರದಲ್ಲಿ ಬುಧವಾರ  ಏರ್ಪಡಿಸಿದ್ದ ಗರ್ಭಿಣಿಯರಿಗೆ ಹೆಚ್ ಐವಿ ಏಡ್ಸ್  ಬಗ್ಗೆ ಅರಿವು ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ತಾಲ್ಲೂಕು ಸಾರ್ವಜನಿಕ ಆರೋಗ್ಯ ಇಲಾಖೆಯಿಂದ ಏರ್ಪಡಿಸಲಾಗಿತ್ತು.

ಹೊಳವನಹಳ್ಳಿ ಹೋಬಳಿಯ ಆರೋಗ್ಯ ಇಲಾಖೆ ವತಿಯಿಂದ ಸುತ್ತಮುತ್ತಲ ಗ್ರಾಮದ ಐವತ್ತಕ್ಕೂ ಹೆಚ್ಚು ಗರ್ಭಿಣಿ ಮಹಿಳೆಯರಿಗೆ ಬಳೆ, ರವಿಕೆ, ಹಣ್ಣು, ಹೂವು ಉಡಿತುಂಬಿ ಹಾರೈಸಿದರು.

ವೈದ್ಯರಾದ ಡಾ ಗಣೇಶ್  ಮಾತನಾಡಿ,  ಗರ್ಭಿಣಿ ಮಹಿಳೆಯರು ತರಕಾರಿ, ಹಣ್ಣು ,ಪೌಷ್ಟಿಕ ಆಹಾರ ಸೇವಿಸಬೇಕು.ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸದೆ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಉತ್ತಮ ಆರೋಗ್ಯ ಹೊಂದಲು ಪೌಷ್ಟಿಕಾಂಶದ ಆಹಾರವನ್ನು ಮನೆಯಲ್ಲಿಯೇ ತಯಾರಿಸಿ ಸೇವಿಸಬೇಕು. ಪ್ರತಿ ತಿಂಗಳು  ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ   ವಿಜಯ್ ಕುಮಾರ್  ಮಾತನಾಡಿ, ಮಹಿಳೆಯರು ಮತ್ತು ಗರ್ಭಿಣಿಯರ ಅನುಕೂಲಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ರಾಷ್ಟ್ರೀಯ ಪೋಷಣಾ ಮಾಸಾಚರಣೆ ಹಮ್ಮಿಕೊಂಡಿದೆ. ಆರೋಗ್ಯ ಸಮಸ್ಯೆಯಿಂದ ಯಾವುದೆ ಗರ್ಭಿಣಿ, ತಾಯಂದಿರು ಮತ್ತು ಶಿಶು ಮರಣ ಆಗದಂತೆ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪದ್ಮಿನಿ.ಎನ್ ಮಾತನಾಡಿ, ಮಾತೃಪೂರ್ಣ ಯೋಜನೆಯಲ್ಲಿ ಗರ್ಭಿಣಿಯರಿಗೆ ಪ್ರತಿ ದಿನ ಅಂಗನವಾಡಿ ಕೇಂದ್ರದಲ್ಲಿ ಮಧ್ಯಾಹ್ನ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದರು.

ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ  ಇದ್ದರು.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.