ಗುಲಾಬಿ ನೀಡಿ ಹೆಲ್ಮೆಟ್ ಧರಿಸಲು ಜಾಗೃತಿ
Team Udayavani, Feb 21, 2021, 4:20 PM IST
ಹುಳಿಯಾರು: ಹುಳಿಯಾರಿನಲ್ಲಿ ಅಪರಾಧ ಮಾಸಾಚರಣೆ ಅಂಗವಾಗಿ ಪೊಲೀಸ್ ಠಾಣೆ ಎದುರಿನ ನ್ಯಾಷನಲ್ ಹೈವೆಯಲ್ಲಿ ವಾಹನ ಸವಾರರಿಗೆ ಪೊಲೀಸರು ಗುಲಾಬಿ ಹೂ ನೀಡಿಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಹುಳಿಯಾರು ಪಿಎಸ್‌ಐ ಕೆ.ಟಿ. ರಮೇಶ್ ಮಾತನಾಡಿ, ಹೆಲ್ಮೆಟ್ ಇಲ್ಲದೆ ಬೈಕ್ ಸಂಚಾರ ಮಾಡುವುದರಿಂದ ಅಪಘಾತ, ಸಾವು-ನೋವು ಹೆಚ್ಚಾಗುತ್ತಿದ್ದು, ಅವುಗಳನ್ನು ತಡೆಗಟ್ಟುವ ದಿಸೆಯಲ್ಲಿಸಾರ್ವಜನಿಕರಿಗೆ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಮೊದಲಿಗೆ ಗುಲಾಬಿ ನೀಡಿ ಹೆಲ್ಮೆಟ್ ಧರಿಸಿಸಂಚರಿಸುವಂತೆ ಬುದ್ಧಿ ಮಾತು ಹೇಳಲಾಗುವುದು. ನಂತರ ತಪಾಸಣಾ ಸ್ಥಳದಲ್ಲೇ ಹೆಲ್ಮೆಟ್ ಖರೀದಿಸಲು ಅವಕಾಶ ಕೊಡಲಾಗುವುದು. ಕೊನೆಗೆ ಕಡ್ಡಾಯವಾಗಿ 500 ರೂ. ದಂಡ ವಸೂಲಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಅಪಘಾತ ಸಂಭವಿಸಿದ ವೇಳೆ ಒಂದೊಂದು ಸಮಯದಲ್ಲಿ ಸ್ಥಳದಲ್ಲಿಪೊಲೀಸ್ ಅಧಿಕಾರಿಗಳು ಲಭ್ಯವಿರುವುದಿಲ್ಲ. ಅದೇ ಕಾರಣಕ್ಕಾಗಿ ಸಾರ್ವಜನಿಕರಿಗೆ ನ್ಯಾಯ ದೊರಕಿಸಲು112 ಸಂಖ್ಯೆಗೆ ಕರೆ ಮಾಡಿದರೆ ಸಾಕು.ಕೆಲವೇ ಕ್ಷಣದಲ್ಲಿ ತಾವಿದ್ದ ಸ್ಥಳಕ್ಕೆ 112 ವಾಹನ ಜೊತೆ ಸಿಬ್ಬಂದಿ ತಮ್ಮನ್ನು ರಕ್ಷಿಸಲು ಬರಲಿದ್ದಾರೆ ಎಂದರು.
ಇದಲ್ಲದೇ ತೊಂದರೆಯಲ್ಲಿರುವ ಸಾರ್ವಜನಿಕರಿಗೆ ತುರ್ತುಪರಿಸ್ಥಿತಿಯಲ್ಲಿರುವಾಗ ತಕ್ಷಣ ಸ್ಪಂದಿಸುವಸಲುವಾಗಿ ರಾಜ್ಯ ಸರ್ಕಾರ ಒಂದೇ ದೇಶ ಒಂದೇ ರಸ್ತೆ ಕರೆ ಸಂಖ್ಯೆ 112 ಈಸೇವೆಯನ್ನು ಜಾರಿಗೆ ತಂದಿದ್ದಾರೆ.ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು. ಹಂದನಕೆರೆ ಪಿಎಸ್‌ಐ ಶಿವಪ್ಪ, ಚಿಕ್ಕನಾಯಕಹಳ್ಳಿ ಪಿಎಸ್‌ಐ ಹರೀಶ್, ಹುಳಿಯಾರು ಎಎಸ್‌ಐ ಆನಂದಪ್ಪ ಮತ್ತು ನಂಜೇಗೌಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.