ತಂಬಾಕು ಮಾರಾಟ, ಬಳಕೆ ನಿಷೇಧಿಸಿ
Team Udayavani, Oct 6, 2019, 4:12 PM IST
ತುಮಕೂರು: ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆ ನಿಷೇಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗ ಣದಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಭೆಯಲ್ಲಿ ಮಾತ ನಾಡಿ, ತಹ ಶೀಲ್ದಾರ್, ಪೊಲೀಸ್ ಇನ್ಸ್ ಪೆಕ್ಟರ್, ಬಿಇಒ, ತಾಲೂಕು ಆರೋಗ್ಯಾಧಿಕಾರಿಗಳು ಜಂಟಿಯಾಗಿ ಶಾಲೆಗಳ ಸುತ್ತ ಮುತ್ತ 100 ಮೀಟರ್ ವ್ಯಾಪ್ತಿ ಯಲ್ಲಿ ಸಂಪೂರ್ಣವಾಗಿ ಶೇ. 100 ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆ ನಿಷೇಧಿಸಿರುವ ಕುರಿತುಮುಂದಿನ ಸಭೆಯಲ್ಲಿ ದೃಢೀಕೃತ ವರದಿ ನೀಡು ವಂತೆ ಸೂಚನೆ ನೀಡಿದರು.
ಮಾಹಿತಿ, ಶಿಕ್ಷಣ, ಮತ್ತು ಸಂವಹನ ಕಾರ್ಯಕ್ರಮದಡಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಓದುವ ವಿದ್ಯಾರ್ಥಿ ಗಳಿರುವ ಶಾಲೆ ಮತ್ತು ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಅರಿವು ಕಾರ್ಯಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ತಂಬಾಕು ಮಾರಾಟಗಾರರ ಮೇಲೆ ದಾಳಿ ನಡೆಸಿ ವ್ಯಾಪಾರ ಪರವಾನಗಿ ರದ್ದುಗೊಳಿಸಬೇಕು ಎಂದು ಸೂಚಿಸಿದರು.
ಎಸ್‌ಪಿ ಡಾ.ಕೆ. ವಂಶಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ, ಡಿವೈಎಸ್‌ಪಿ ತಿಪ್ಪೇಸ್ವಾಮಿ, ಆರ್‌ಸಿಎಚ್ ಅಧಿಕಾರಿ ಡಾ. ಕೇಶವ ರಾಜ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.