ಭಕ್ತರಹಳ್ಳಿ ಗ್ರಾಪಂ ಅವ್ಯವಹಾರ: ಪ್ರತಿಭಟನೆ


Team Udayavani, Jan 8, 2020, 2:46 PM IST

tk-tdy-1

ಕುಣಿಗಲ್‌: ತಾಲೂಕಿನ ಕೊತ್ತಗೆರೆ ಹೋಬಳಿ ಭಕ್ತರಹಗಳ್ಳಿ ಗ್ರಾಪಂನಲ್ಲಿ ನಡೆದಿರುವ ಭ್ರಷ್ಟಾಚಾರ ಖಂಡಿಸಿ ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳು ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಗ್ರಾಪಂನಲ್ಲಿ ನಡೆದಿರುವ ಅವ್ಯವಹಾರವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಗ್ರಾಪಂ ಸದಸ್ಯ ಕಿಶೋರ್‌ಗೌಡ, ಗ್ರಾಮದ ಮುಖಂಡ ಶ್ಯಾನೇಗೌಡ ಅವರ ನೇತೃತ್ವದಲ್ಲಿ ಒತ್ತಾಯಿಸಿದರು.

ಗ್ರಾಪಂ ಸದಸ್ಯ ಕಿಶೋರ್‌ಗೌಡ ಮಾತನಾಡಿ, ಗ್ರಾಮಗಳನ್ನು ಅಭಿವೃದ್ಧಿ ಪಡಿಸಬೇಕಾಗಿರುವ ಗ್ರಾಪಂ ಕೆಲ ಸದಸ್ಯರು ಸರ್ಕಾರದ ಅನುದಾನ ದುರ್ಬಳಕ್ಕೆ ಮಾಡಿಕೊಂಡು ತಾವು ಅಭಿವೃದ್ಧಿ ಹೊಂದುತ್ತಿದ್ದಾರೆ ಎಂದು ಆರೋಪಿಸಿದರು. 14ನೇ ಹಣ ಕಾಸು ಯೋಜನಡಿಯಲ್ಲಿ ಕಳೆದ ಮೂರು ಅವಧಿಯಿಂದ ಗ್ರಾಪಂಗೆ 60 ಲಕ್ಷ ರೂ. ಬಿಡುಗಡೆಯಾಗಿದೆ, ಈ ಪೈಕಿ ಬೆಸ್ಕಾಂಗೆ ಶೇ. 25, ಎಸ್ಸಿ, ಎಸ್ಟಿಗೆ ಶೇ.25 ರಷ್ಟು ಹಣ ಮೀಸಲಿಡಲಾಗಿದೆ. ಆದರೆ ಬೆಸ್ಕಾಂಗೆ ಮೀಸಲಿಟ್ಟ ಹಣದಲ್ಲಿ ಸುಮಾರು 20 ಲಕ್ಷ ರೂ. ಖರ್ಚಾಗಿದೆ, ಆದರೆ ಗ್ರಾಮಗಳ ವಿದ್ಯುತ್‌ ಕಂಬಗಳಿಗೆ ಸಮರ್ಪಕವಾಗಿ ವಿದ್ಯುತ್‌ ದೀಪ ಅಳವಡಿಸಿಲ್ಲ ಎಂದು ದೂರಿದರು.

ನಕಲಿ ಬಿಲ್‌: ಕೆಲ ಪ್ರಭಾವಿ ಸದಸ್ಯರು ಗ್ರಾಪಂ ಪಿಡಿಒ ಹರೀದ್ರಗೋಪಾಲ್‌ ಅವರನ್ನು ಬೆದರಿಸಿ ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಪಂಪ್‌ ಮೋಟರ್‌ ಹಾಗೂ ವಿದ್ಯುತ್‌ ದೀಪಖರೀದಿಸಲಾಗಿದೆ ಎಂದು ನಕಲಿ ಬಿಲ್‌ ಸೃಷ್ಟಿಸಿ ಲಕ್ಷಾಂತ ರೂ. ದುರ್ಬಳಕೆ ಮಾಡಿಕೊಂಡು, ಆ ಹಣದಲ್ಲಿ ಪ್ರಭಾವಿ ಸದಸ್ಯರು ತಮ್ಮ ಮನೆಗಳಿಗೆ ಯುಪಿಎಸ್‌ಅಳವಡಿಸಿಕೊಂಡಿದ್ದಾರೆ, ಭಕ್ತರಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಕಾಂಪೌಂಡ್‌ ನಿರ್ಮಾಣ ಮಾಡಲಾಗಿದೆ ಎಂದು ಎರಡು ಲಕ್ಷ ರೂ. ಹಾಗೂ 35 ಸಾವಿರ ರೂ. ವೆಚ್ಚದಲ್ಲಿ ಭಕ್ತರಹಳ್ಳಿ ಕೆರೆ ಕೋಡಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಸುಳ್ಳು ದಾಖಲೆ ಸೃಷ್ಟಿಸಿ ಹಣ ಡ್ರಾ ಮಾಡಲಾಗಿದೆ, ಆದರೆ ಅಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ,ಗೋಮಾಳ ರಸ್ತೆ ಅಭಿವೃದ್ಧಿ ಪಡಿಸಲಾಗಿದೆ ಎಂದು ಎನ್‌ಎಂಆರ್‌ ತೆಗೆಯಲಾಗಿದೆ, ಆದರೆ ಅಲ್ಲಿ ರಸ್ತೆಯೇ ನಿರ್ಮಾಣವಾಗಿಲ್ಲ, ಸುಮಾರು 20 ಲಕ್ಷ ರೂ. ದುರ್ಬಳಕೆ= ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಎಲ್ಲಾ ಅವ್ಯವಹಾರ ಅಕ್ರಮಗಳಲ್ಲಿ ಗ್ರಾಪಂ ಉಪಾಧ್ಯಕ್ಷೆ ಸುಮಾ ಅವರ ಪತಿಬಿ.ಡಿ.ಕುಮಾರ್‌ ಅವರ ಕೈವಾಡ ಇರುವುದು ಕೇಳಿ ಬರುತ್ತಿದೆ ಎಂದು ಕಿಶೋರ್‌ಗೌಡ ಗಂಭೀರ ಆರೋಪ ಮಾಡಿದರು.  ಪಂಪು ಮೋಟರ್‌, ಲೈಟ್‌ ಖರೀದಿ, ವರ್ಗ ಒಂದು, 14ನೇ ಹಣಕಾಸು, ನರೇಗಾ ಯೋಜನೆಯಲ್ಲಿ ನಡೆದಿರುವಅವ್ಯವಹಾರದ ಸಂಬಂಧ ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶ್ರೀನಿವಾಸ್‌, ನವೀನ್‌, ಮಂಜುಳಾ, ಮಧು, ನಾಗಭೈರೇಗೌಡ, ಬಾಬು ಪ್ರಕಾಶ್‌, ಕಿರಣ್‌ ನವೀನ್‌ ಇದ್ದರು.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.