ಬಿಜೆಪಿ ಜಯಭೇರಿ: ತಾಲ್ಲೂಕು ಬಿಜೆಪಿ ಮಂಡಲದ ಕಾರ್ಯಕರ್ತರಿಂದ ಸಂಭ್ರಮಾಚರಣೆ
Team Udayavani, Mar 12, 2022, 6:31 PM IST
ಕೊರಟಗೆರೆ : ಉತ್ತರ ಪ್ರದೇಶ, ಉತ್ತರ ಖಾಂಡ ಹಾಗೂ ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಜಯಬೇರಿ ಬಾರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಬಿಜೆಪಿ ಮಂಡಲದ ಕಾರ್ಯಕರ್ತರು ಪಟ್ಟಣದ ಎಸ್.ಎಸ್.ಆರ್. ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಪವನ್‌ಕುಮಾರ್ ಮಾತನಾಡಿ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿರುವುದು ಸಂತಸದ ವಿಚಾರವೆಂದರಲ್ಲದೆ ನಾಲ್ಕು ರಾಜ್ಯಗಳಲ್ಲಿ ಪಕ್ಷವು ಅಧಿಕಾರ ಗದ್ದುಗೆ ಏರುವುದು ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ ಎಂದರು.
ಮುಂಬರುವ 2023 ರ ವಿಧಾನ ಸಭೆ ಚುನಾವಣೆಯಲ್ಲೂ ರಾಜ್ಯದಲ್ಲಿ ಬಿಜೆಪಿ ಪಕ್ಷವು ಮತ್ತೋಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿದ್ದು ಕೇಂದ್ರಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಎಲ್ಲಾ ವರ್ಗದ ಜನರ ಅಭ್ಯುದಯಕ್ಕೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದರುವ ಹಿನ್ನೆಲೆಯಲ್ಲಿ ಮತದಾರರು ಮತ್ತೋಮ್ಮೆ ಪಕ್ಷವನ್ನು ಕೈಹಿಡಿದಿದ್ದಾರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗುರುದತ್ತ್, ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರದೀಪ್‌ಕುಮಾರ್, ನಾಮಿನಿ ಸದಸ್ಯರಾದ ಗೋವಿಂದರಾಜು , ರಂಗನಾಥ್, ಪ್ರೇಮ್ ಕುಮಾರ್, ಕಾರ್ಯಕರ್ತರಾದ ಪ್ರಕಾಶ್‌ರೆಡ್ಡಿ, ಹೇಮಲತಾ ಜಗನ್ನಾಥ್, ಪ್ರಸನ್ನಕುಮಾರ್, ಗೋಪಿ, ಸಿದ್ದರಾಜು, ಅಶೋಕ್, ದಯಾನಂದ್, ಬಿ.ಜೆ.ಪಿ. ಕಾರ್ಯಕರ್ತರಾದ ಆರ್.ಪಿ.ರವಿಶಂಕರ್, ಸೇರಿದಂತೆ ಇನ್ನೂ ಅನೇಕ ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.