ಬ್ಲಾಕ್ ಕಾಂಗ್ರೆಸ್ ನ ಎಸ್ಸಿ ಘಟಕ: ನೂತನ ಅಧ್ಯಕ್ಷರಾಗಿ ಬಿಡಿಪುರ ಸುರೇಶ್
Team Udayavani, Jul 18, 2022, 9:02 PM IST
ಕೊರಟಗೆರೆ : ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟನೆ ಗೊಳಿಸಲು ಶಾಸಕ ಪರಮೇಶ್ವರ್ ಅವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್ ರಾಮಕೃಷ್ಣ ಅವರು ಕೊರಟಗೆರೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಠ ಜಾತಿ ವಿಭಾಗಕ್ಕೆ ನೂತನ ಅಧ್ಯಕ್ಷರನ್ನಾಗಿ ಬಿಡಿಪುರ ಸುರೇಶ್ ಎಸ್. ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ನೂತನ ಅಧ್ಯಕ್ಷ ಆಯ್ಕೆಯಾದ ಹಿನ್ನೆಲೆಯಲ್ಲಿ ತುಮಕೂರು ಹೊರವಲಯದ ಡಾ.ಜಿ ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಪರಮೇಶ್ವರ್ ಅವರು ನೂತನ ಅಧ್ಯಕ್ಷರಿಗೆ ಶುಭಕೋರಿ ಪಕ್ಷ ಸಂಘಟನೆಯಲ್ಲಿ ಇನ್ನಷ್ಟು ತೊಡಗಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.
ನೂತನ ಅಧ್ಯಕ್ಷರಾದ ಬಿಡಿಪುರ ಸುರೇಶ್ ಮಾತನಾಡಿ, ನಮ್ಮ ಕ್ಷೇತ್ರದ ನಮ್ಮೆಲ್ಲರ ಹೆಮ್ಮೆಯ ಜನಪ್ರಿಯ ಶಾಸಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ಪಕ್ಷದ ಸಂಘಟನಾತ್ಮಕ ಶಕ್ತಿಯನ್ನು ಗುರುತಿಸಿ ನಮಗೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವುದರ ಜೊತೆಗೆ ಮುಂದಿನ ದಿನಗಳಲ್ಲಿ ಕೊರಟಗೆರೆ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಪರಮೇಶ್ವರ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಶ್ರಮವಹಿಸಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಸಂದರ್ಭದಲ್ಲಿ ಕೊರಟಗೆರೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಶ್ವತ್ ನಾರಾಯಣ್, ಅರಕೆರೆ ಶಂಕರ್ ಟಿಸಿ, ಮಾಜಿ ತಾಪಂ ಅಧ್ಯಕ್ಷ ಟಿ.ಸಿ ರಾಮಯ್ಯ, ಕಾಂಗ್ರೆಸ್ ಮುಖಂಡರಾದ ಹೊಳವನಹಳ್ಳಿ ಜಯರಾಮ್, ಪಿಎಲ್ ಡಿ ಬ್ಯಾಂಕ್ ನಿರ್ದೇಶಕರಾದ ವೆಂಕಟೇಗೌಡ, ಬಿಡಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನರಸಿಂಹರಾಜು ಉಪಾಧ್ಯಕ್ಷ ಜಗಣ್ಣ ಬಿಡಿಪುರ ಬೂತ್ ಅಧ್ಯಕ್ಷರಾದ ಬಾಲರಾಜ ಸದಸ್ಯರಾದ ಮಂಜುನಾಥ್ ಸಿದ್ದಲಿಂಗಪ್ಪ ವೆಂಕಟಾಚಲಯ್ಯ ಸುಬ್ಬರಾಯಪ್ಪ ನಾಗರಾಜು ಗೋಪಾಲ್ ನಾಗೇಶ್ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.