ತಾಯಿ ಬೇಡ ಎಂದರೂ ಕೇಳದೆ ಈಜಲು ಹೋದ ಬಾಲಕ ಕಲ್ಯಾಣಿಯಲ್ಲಿ ಮುಳುಗಿ ಸಾವು
Team Udayavani, Jun 20, 2022, 7:19 PM IST
ಕೊರಟಗೆರೆ: ತಾಯಿಯ ಮಾತನ್ನು ಕೇಳದೇ ವೀರನಾಗಮ್ಮ ದೇವಾಲಯದ ಕಲ್ಯಾಣಿಯಲ್ಲಿ ಈಜಾಡಲು ತೆರಳಿದ ಲಕ್ಕೇನಹಳ್ಳಿ ಗ್ರಾಮದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಕೊರಟಗೆರೆ ತಾಲೂಕು ಕಸಬಾ ಹೋಬಳಿ ವಡ್ಡಗೆರೆ ಗ್ರಾಮದ ಶ್ರೀವೀರನಾಗಮ್ಮ ದೇವಾಲಯದ ಕಲ್ಯಾಣಿಯಲ್ಲಿ ದುರ್ಘಟನೆ ನಡೆದಿದೆ. ಗಂಗಾಪೂಜೆ ಮುಗಿಸಿಕೊಂಡು ದೇವಾಲಯಕ್ಕೆ ಹಿಂದಿರುಗುವಾಗ ದುರ್ಘಟನೆ ಜರುಗಿದೆ.
ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿಯ ಲಕ್ಕೇನಹಳ್ಳಿ ಗ್ರಾಮದ ವೀರನಾಗಪ್ಪನ ಮಗನಾದ ತರುಣ್(14) ಮೃತಪಟ್ಟ ದುರ್ದೈವಿ. ತನ್ನ ತಾಯಿಯ ಜೊತೆಯಲ್ಲಿ ವೀರನಾಗಮ್ಮ ದೇವಿಯ ದರ್ಶನಕ್ಕೆ ಬಂದ ವೇಳೆ ಘಟನೆ ನಡೆದಿದೆ.
ಕಲ್ಯಾಣಿಯಲ್ಲಿ ಮುಳುಗಿದ್ದ ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳದ ತಂಡ ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಕೊರಟಗೆರೆ ತಹಶೀಲ್ದಾರ್ ನಾಹೀದಾ, ಆರೋಗ್ಯ ಮತ್ತು ಪೊಲೀಸ್ ಇಲಾಖೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.