ಬೋರನಕಣಿವೆ ದುರಸ್ತಿ ಕಾರ್ಯ ಆರಂಭ

ಜಲಾಶಯದ ಒಳಗೋಡೆಯ ಗಾರೆ ಸಂಪೂರ್ಣ ಹಾಳು ; ನೀರಿನಲ್ಲಿ ಕರಗುತ್ತಿದೆ ಇಟ್ಟಿಗೆ

Team Udayavani, Sep 23, 2021, 5:30 PM IST

ಬೋರನಕಣಿವೆ ದುರಸ್ತಿ ಕಾರ್ಯ ಆರಂಭ

ಹುಳಿಯಾರು: ಕೆಆರ್‌ಎಸ್‌ ಜಲಾಶಯ ಕ್ಕಿಂತಲೂ ಮೊದಲೇ ನಿರ್ಮಾಣಗೊಂಡ 125 ವರ್ಷಗಳ ಇತಿಹಾಸವುಳ್ಳ ಹುಳಿಯಾರು ಹೋಬಳಿಯ ಬೋರನಕಣಿವೆ ಜಲಾಶಯದ ಒಳಗೋಡೆಗಳು ಶಿಥಿವಾಗಿದ್ದು, ಸಣ್ಣ ನೀರಾವರಿ ಇಲಾಖೆಯಿಂದ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

1892ರಲ್ಲಿ ಮೈಸೂರು ಮಹಾರಾಜರು ಕಲ್ಲು, ಮಣ್ಣಿನ ಇಟ್ಟಿಗೆ ಮತ್ತು ಗಾರೆಯಿಂದ ಈ ಜಲಾಶಯವನ್ನು ಕಟ್ಟಿಸಿದ್ದರು. ಜಲಾಶಯ ಕಟ್ಟಿ ನೂರಾರು ವರ್ಷವಾಗಿರುವುದರಿಂದ ಸಹಜವಾಗಿ ಜಲಾಶಯದ ಒಳ ಗೋಡೆಯ ಗಾರೆ ಸಂಪೂರ್ಣ ಹಾಳಾಗಿತ್ತು. ಅಲ್ಲದೆ, ಗೋಡೆಯ ಇಟ್ಟಿಗೆಯೂ ಸಹ ನೂರಾರು ವರ್ಷಗಳಿಂದ ನೀರಿನಲ್ಲಿ ನೆನೆದು ಕರಗುತ್ತಿತ್ತು. ಹೀಗೆ ನಿರ್ಲಕ್ಷ್ಯದಿಂದ ಇಡೀ ಜಲಾಶಯವೇ ಶಿಥಿಲವಾಗುವ ಆತಂಕ ಎದುರಾಗಿತ್ತು.

ಕೆಳಮಟ್ಟದಲ್ಲಿದೆ ನೀರು: ಅಲ್ಲದೆ ಜಲಾಶಯದ ಗೋಡೆಯಲ್ಲಿ ಅರಳಿಗಿಡ ಸೇರಿದಂತೆ ವಿವಿಧ ಗಿಡಗಳು ಬೆಳೆದಿದ್ದು, ಇವುಗಳ ಬೇರುಗಳು ಜಲಾಶಯ ಕೊರೆದು ಜಲಾಶಯಕ್ಕೆ ಭಾರಿ ಹಾನಿ ಮಾಡುವ ಸಂಭವವಿತ್ತು. ಕಳೆದ ಎರಡು- ಮೂರು ವರ್ಷಗಳಿಂದ ಬೋರನ ಕಣಿವೆ ಜಲಾಶಯ ಪ್ರದೇಶದಲ್ಲಿ ಉತ್ತಮ ಮಳೆಯಾಗದ ಪರಿಣಾಮ, ಈಗ ಜಲಾಶಯದಲ್ಲಿ ಡೆಡ್‌ ಸ್ಟೋರೇಜ್‌ ಮಟ್ಟಕ್ಕಿಂತಲೂ ಕೆಳಮಟ್ಟದಲ್ಲಿ ನೀರಿದ್ದು, ಶಿಥಿಲಗೊಂಡ ಗೋಡೆಗಳನ್ನು ಅನಾಯಾಸ ವಾಗಿ ದುರಸ್ತಿ ಮಾಡಬಹುದಾಗಿತ್ತು.

ಇದನ್ನೂ ಓದಿ:ನಾಗಾಲೋಟ: ಸಾರ್ವಕಾಲಿಕ ದಾಖಲೆ – 60 ಸಾವಿರ ಸನಿಹಕ್ಕೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಜಲಾಶಯದಲ್ಲಿ ನೀರು ಸಂಗ್ರಹ: ಈ ಜಲಾಶಯಕ್ಕೆ ಶೀಘ್ರದಲ್ಲೇ ಹೇಮೆ ಮತ್ತು ಭದ್ರೆಯ ನೀರು ಹರಿಯುವುದರಲ್ಲದೆ ಹುಳಿಯಾರು, ಗಾಣಧಾಳು, ಹೊಯ್ಸಲಕಟ್ಟೆ, ಕೆಂಕೆರೆ ಗ್ರಾಪಂ ವ್ಯಾಪ್ತಿಗೆ ಕುಡಿಯುವ ನೀರು ಪೂರೈಸಲು ಜಲಾಶಯದಲ್ಲಿ ನೀರು ಸಂಗ್ರಹಿಸಿಟ್ಟುಕೊಳ್ಳಬೇಕಿದೆ. ಹೀಗಾಗಿ ಈ ಅವಕಾಶವನ್ನು ಬಿಟ್ಟರೆ, ಇನ್ನೆಂದೂ ದುರಸ್ತಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಸಾರ್ವಜನಿಕರು ದುರಸ್ತಿಗೆ ಒತ್ತಡ ಹಾಕಿದ್ದರು. ಈಗ ಸಣ್ಣ ನೀರಾವರಿ ಇಲಾಖೆಯಿಂದ ಜಲಾಶಯದ ದುರಸ್ತಿ ಕಾರ್ಯ ಆರಂಭವಾಗಿದ್ದು, ಯಂತ್ರೋಪಕರಣಗಳು ಜಲಾಶಯದ ಬಳಿ ತೆರಳಲು 3 ಕಿ.ಮೀ ದೂರದಿಂದ ಹೊಸದಾಗಿ ಮಣ್ಣು ಹೊಡೆದು ರಸ್ತೆ ಮಾಡಲಾಗುತ್ತಿದೆ. ಅಲ್ಲದೆ, ಶಿಥಿಲಗೊಂಡ ಗೋಡೆಗಳ ಬಳಿ ಯಂತ್ರಗಳು ನಿಲ್ಲಲು ಅಲ್ಲಿನ ನೀರು ಹಾಗೂ ಹೂಳು ತೆರವು ಮಾಡಿ, ಬಂಡ್‌ ಹಾಕಲಾಗುತ್ತಿದೆ. ಎರಡು- ಮೂರು ಜೆಸಿಬಿ, ಏಳೆಂಟು ಟಿಪ್ಪರ್‌ಗಳು, ಅನೇಕ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳಲಾಗಿದ್ದು, ಬಿರುಸಿನಿಂದ ಕಾಮಗಾರಿ ನಡೆಯುತ್ತಿದೆ.

10 ದಿನದಲ್ಲಿ ದುರಸ್ತಿ ಪೂರ್ಣ
ಬೋರನಕಣಿವೆ ಗೋಡೆಗಳ ದುರಸ್ತಿ ಕಾರ್ಯವನ್ನು ಸಣ್ಣ ನೀರಾವರಿ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿದೆ. ನದಿ ನೀರು ಹರಿಯುವ ಮುನ್ನ ದುರಸ್ತಿ ಮಾಡಲೇ ಬೇಕಿರುವುದರಿಂದ ತುರ್ತು ಕಾಮಗಾರಿ ಎಂದು ಪರಿಗಣಿಸಿ, ಟೆಂಡರ್‌ ಕರೆಯದೆ ಕಾಮಗಾರಿ ಮಾಡಿಸಲಾಗುತ್ತಿದೆ. ಜಲಾಶಯದ ಕೆಳಗೆ ಮೂರು- ನಾಲ್ಕು ಅಡಿಯಿಂದಲೂ ವಾಟರ್‌  ಪ್ಲಾಸ್ಟ್ರಿಂಗ್‌ ಮಾಡಲಾಗುತ್ತಿದೆ. ಗೋಡೆಗಳ ಮೇಲೆ ಬೆಳೆದಿರುವ ಗಿಡಗಳನ್ನೂ ಸಹ ತೆರವು ಮಾಡಲಾಗುವುದು. 10 ದಿನಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆಯ ಜೆಇ ಪ್ರಭಾಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.