ಸೇತುವೆ, ರಸ್ತೆ ಕಾಮಗಾರಿಗೆ ಚಾಲನೆ
Team Udayavani, Aug 5, 2020, 12:06 PM IST
ಕುಣಿಗಲ್: ಆರು ನೂರ ಹದಿನಾಲ್ಕು ಕೋಟಿ ರೂ. ವೆಚ್ಚದ ಹೇಮಾವತಿ ಲಿಂಕ್ ಕೆನಾಲ್ ಯೋಜನೆಯನ್ನು ರಾಜಕಾರಣಿ ಗಳು ಬೇರೆ ರೀತಿಯ ಬಣ್ಣ ಕಟ್ಟಿ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಡಾ.ಎಚ್.ಡಿ. ರಂಗನಾಥ್ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಉಜ್ಜಿನಿ ಮತ್ತು ದೇವ ಸಂದ್ರ ಗ್ರಾಮದಲ್ಲಿ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಕಳೆದ 20 ವರ್ಷ ಗಳಿಂದ ತಾಲೂಕಿಗೆ ನ್ಯಾಯ ಸಮ್ಮತವಾಗಿ ಹರಿಯಬೇಕಾದ ಹೇಮಾವತಿ ನೀರು ಹರಿಸಿ, ರೈತರಿಗೆ ಹಾಗೂ ನಾಗರಿಕರ ಕುಡಿವ ನೀರಿಗೆ ಅನುಕೂಲ ಮಾಡಿಕೊಡುವಲ್ಲಿ ಅಂದಿನ ವಿಪಕ್ಷ ನಾಯಕರå ಹಾಗೂ ಅಧಿಕಾರಿಗಳು ವಿಫಲಗೊಂಡಿದ್ದಾರೆ ಎಂದು ಆರೋಪಿಸಿದರು.
ಅಂದಿನ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಸಮಿಶ್ರ ಸರ್ಕಾರದಲ್ಲಿ ಲಿಂಕ್ ಕೆನಾಲ್ ಯೋಜನೆಯ ಕಾಮಗಾರಿಗೆ 614 ಕೋಟಿ ವೆಚ್ಚದ ಕ್ರಿಯಾ ಯೋಜನೆ ರೂಪಿಸಿ, ಮಂಜೂರಾತಿ ಪಡೆದು ಟೆಂಡರ್ ಪ್ರಕ್ರಿಯೆ ನಡೆಯಿತು. ಆದರೆ, ಸರ್ಕಾರದ ಬದಲಾವಣೆಯಿಂದ ಕಾಮಗಾರಿ ತಡೆ ಹಿಡಿಯಲಾಗಿದೆ ಮತ್ತೆ ಲಿಂಕ್ ಕೆನಲಾ ಯೋಜನೆಯನ್ನು ತಂದು ತಾಲೂಕಿಗೆ ನೀರು ಹರಿಸಿದ್ದಾಗ ಮಾತ್ರ ನನ್ನ ಜೀವನ ಪಾವನವಾಗುತ್ತದೆ ಎಂದರು.
ಹುಲಿಯೂರುದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಟಕರಾಮು, ತಾಪಂ ಮಾಜಿ ಅಧ್ಯಕ್ಷ ಎಸ್.ಆರ್.ಚಿಕಣ್ಣ, ಗುತ್ತಿಗೆದಾರರಾದ ಮನವಳಯ್ಯ, ಶಿವಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.