ಉಜ್ಜನಿ ಚೌಡೇಶ್ವರೀ ದೇವಿ ‘ಅಗ್ನಿಕೊಂಡ ಉತ್ಸವ’ದಲ್ಲಿ ಸಜ್ಜೆ ಕುಸಿತ : ಹಲವರಿಗೆ ಗಾಯ
Team Udayavani, Apr 24, 2019, 11:33 AM IST
ತುಮಕೂರು: ಕುಣಿಗಲ್ ತಾಲೂಕಿನ ಉಜ್ಜನಿ ಚೌಡೇಶ್ವರೀ ದೇವಿ ಸನ್ನಧಿಯಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ‘ಅಗ್ನಿಕೊಂಡ’ ವೀಕ್ಷಿಸಲು ಭಕ್ತರು ಕಟ್ಟಡವೊಂದರ ಮೇಲೆ ನಿಂತಿದ್ದ ಸಂದರ್ಭದಲ್ಲಿ ಸಜ್ಜೆ ಕುಸಿದು 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬುಧವಾರ ಬೆಳಿಗ್ಗೆ ಈ ದುರ್ಘಟನೆ ನಡೆದಿದೆ.
ದೇವಸ್ಥಾನದ ಅಕ್ಕಪಕ್ಕವಿರುವ ಕಟ್ಟಡಗಳನ್ನು ಏರಿನಿಂತು ಭಕ್ತರು ಚೌಡೇಶ್ವರಿ ದೇವಿಯ ಅಗ್ನಿಕೊಂಡ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದರು. ಈ ಸಂದರ್ಭದಲ್ಲಿ ಹಳೆಯ ಕಟ್ಟಡವೊಂದರ ಸಜ್ಜೆ ಕುಸಿದಿದೆ. ಜನರ ಭಾರವನ್ನು ತಾಳಲಾರದೆ ಸಜ್ಜೆ ಕುಸಿದಿರುವುದಾಗಿ ತಿಳಿದುಬಂದಿದೆ.
ಗಾಯಾಳುಗಳನ್ನು ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾಯಗೊಂಡವರನ್ನು ಮಂಡ್ಯ ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.