ಬಸ್ ಮತ್ತು ಓಮ್ನಿ ಡಿಕ್ಕಿ: ಬೆಂಕಿಗಾಹುತಿಯಾದ ವಾಹನಗಳು: ಮೂವರು ಸಜೀವ ದಹನ

Team Udayavani, Jan 4, 2020, 10:32 AM IST

agni1

ತುಮಕೂರು: ಬಸ್ ಮತ್ತು ಓಮ್ನಿ ವಾಹನದ ನಡುವೆ ಅಪಘಾತ ಸಂಭವಿಸಿ ಮೂವರು ಸಜೀವ ದಹನವಾಗಿರುವ ಘಟನೆ ಶನಿವಾರ ಬೆಳಗಿನ ಜಾವ ಎರಡು ಗಂಟೆಯ ಸಮಯದಲ್ಲಿ ಜಿಲ್ಲೆಯ ದೊಡ್ಡಗುಣಿ ಬಳಿ ಸಂಭವಿಸಿದೆ.

ಬೆಳಗಿನ ಜಾವ ಎರಡು ಗಂಟೆ ಸಮಯದಲ್ಲಿ ನರಸಮ್ಮ ಎಂಬುವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ನಿಟ್ಟೂರು ಆರೋಗ್ಯ ಕೇಂದ್ರಕ್ಕೆ ವ್ಯಾನ್ ನಲ್ಲಿ ಕರೆದುಕೊಂಡು ಹೋಗುತ್ತಿರುವಾಗ ಗುಬ್ಬಿ ತಾಲೂಕು ನಿಟ್ಟೂರು ಹೋಬಳಿ ದೊಡ್ಡಗುಣಿ ರಾಷ್ಟ್ರೀಯ ಹೆದ್ದಾರಿ 206 ರ ದೊಡ್ಡಗುಣಿ ಕೆರೆ ಏರಿ ಮೇಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಓಮ್ನಿ ಮಧ್ಯೆ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಗುಬ್ಬಿ ತಾಲೂಕು ನಿಟ್ಟೂರು ಹೋಬಳಿ ಎನ್  ಹೊಸಹಳ್ಳಿ ಗ್ರಾಮದ ವಸಂತ್ ಕುಮಾರ್ ( 23 ) ರಾಮಯ್ಯ (62 ) ನರಸಮ್ಮ (60 ) ಸಜೀವ ದಹನವಾಗಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.

ಅಪಘಾತದಲ್ಲಿ ರವಿಕುಮಾರ (23) ರಾಧಾಮಣಿ (30 ) ನರಸಿಂಹಮೂರ್ತಿ (40)  ಗೌರಮ್ಮ (28 ) ತೀವ್ರ  ಗಾಯಗೊಂಡಿದ್ಧು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಾಳು ಗೌರಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ.

ಅಪಘಾತದಲ್ಲಿ ಓಮ್ನಿಯೊಂದಿಗೆ ಬಸ್ ಕೂಡಾ ಹೊತ್ತಿ ಉರಿದಿದೆ. ಆದರೆ ಉರಿ ಹೆಚ್ಚಾಗುವ ಮುನ್ನವೇ ಪ್ರಯಾಣಿಕರನ್ನು ಬಸ್ ನಿಂದ ಇಳಿಸಿದ ಕಾರಣ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

ಗುಬ್ಬಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ  ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.