ಕಾರ್ಯನಿರ್ವಹಿಸದ ಸಾಂತ್ವನ ಕೇಂದ್ರಗಳ ರದ್ದುಗೊಳಿಸಿ
Team Udayavani, Sep 18, 2019, 1:56 PM IST
ತುಮಕೂರು: ಜಿಲ್ಲೆಯಲ್ಲಿ ಅಗತ್ಯ ಸಿಬ್ಬಂದಿಯಿಲ್ಲದೆ ಸಮರ್ಪಕವಾಗಿ ಕಾರ್ಯನಿರ್ವಹಿಸದ ಸಾಂತ್ವನ ಕೇಂದ್ರಗಳನ್ನು ರದ್ದುಪಡಿಸಿ ನಿಯಮಾನುಸಾರ ಹೊಸ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಾಂತ್ವನ ಯೋಜನೆ, ಸ್ತ್ರೀಶಕ್ತಿ ಯೋಜನೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣೆ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ತ್ತೈಮಾಸಿಕ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸಮಾಲೋಚನೆಗೆ ಮಹಿಳಾ ಸಿಬ್ಬಂದಿ ಇರಲಿ: ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನಡೆಯುತ್ತಿರುವ ಸಾಂತ್ವನ ಕೇಂದ್ರಗಳಲ್ಲಿ ಕಡ್ಡಾಯವಾಗಿ ಒಬ್ಬ ಸಮಾ ಲೋಚಕರು, ಮೂರು ಮಂದಿ ಸಮಾಜ ಸೇವಾ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು.
ಸಮಸ್ಯೆ ಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರಕ್ಕೆ ಬರುವ ದೌರ್ಜ ನ್ಯಕ್ಕೊಳಗಾದ ಮಹಿಳೆಯರಿಗೆ ಪರಿಹಾರ ದೊರೆಯ ಬೇಕೇ ಹೊರತು ನಿರಾಶರಾಗಿ ಹೋಗುವಂತಿರ ಬಾರದು. ಶೋಷಣೆಗೊಳಗಾದ ಮಹಿಳೆಯರ ಸಮಾ ಲೋಚನೆ ನಡೆಸಲು ಕೆಲ್ಲಿ ಪ್ರತ್ಯೇಕ ಕೊಠಡಿ ಇರಬೇಕು. ಸಮಾ ಲೋಚನೆಗಾಗಿ ಮಹಿಳಾ ಸಿಬ್ಬಂದಿಯನ್ನೆ ನಿಯೋ ಜಿಸಬೇಕು ಎಂದು ಹೇಳಿದರು.
ಸಾಂತ್ವನ ಕೇಂದ್ರಗಳ ರದ್ದತಿಗೆ ಕ್ರಮ: ಅಗತ್ಯ ಸೌಲಭ್ಯ ಹಾಗೂ ಸಿಬ್ಬಂದಿಯಿಲ್ಲದ ಸಾಂತ್ವನ ಕೇಂದ್ರ ರದ್ದು ಪಡಿಸಲು ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಸಾಂತ್ವನ ಕೇಂದ್ರಗಳನ್ನು ನಡೆಸುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಕುಣಿಗಲ್, ಮಧುಗಿರಿ ಹಾಗೂ ತುರುವೇಕೆರೆ ಸಾಂತ್ವನ ಕೇಂದ್ರಗಳಲ್ಲಿ ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಕೇಳಿ ಬಂದಿವೆ. ಇದರಂತೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ಕಳೆದ ಸಭೆಯಲ್ಲಿ ಸೂಚಿಸಲಾಗಿತ್ತು.
ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಕೇಳಿದಾಗ ಮಾಹಿತಿ ಒದಗಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶನ ಎಸ್. ನಟರಾಜ್, ಕೇಂದ್ರಗಳಿಗೆ ಪೊಲೀಸ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ್ದಾರೆ.
ವರದಿಯನುಸಾರ ಕುಣಿಗಲ್, ಮಧುಗಿರಿ ಹಾಗೂ ತುರುವೇಕೆರೆ ಸಾಂತ್ವನ ಕೇಂದ್ರಗಳಲ್ಲಿ ಅಧಿಕಾರಿಗಳ ಭೇಟಿ ಸಂದರ್ಭದಲ್ಲಿ ಕೇಂದ್ರದಲ್ಲಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದ ಪ್ರತ್ಯೇಕ ದಾಖಲೆ, ಕಡತ, ವಹಿವಾಟುಗಳನ್ನು ನಿರ್ವಹಿಸಿರುವುದಿಲ್ಲ.
ಸಿಬ್ಬಂದಿಯೂ ನಿಗದಿತ ವೇಳೆಯಲ್ಲಿ ಸಮರ್ಪಕ ವಾಗಿ ಕಾರ್ಯನಿರ್ವಹಿಸುತ್ತಿ ಲ್ಲದಿರುವುದು ಕಂಡು ಬಂದಿದೆ ಎಂದು ತಿಳಿಸಿದರು.
ಮಹಿಳೆಯರಿಗೆ ಅರಿವು ಮೂಡಿಸಿ: ನಂತರ ಮಾತನಾಡಿದ ಸಿಇಒ ಶುಭಾ ಕಲ್ಯಾಣ್ ಸಾಂತ್ವನ ಕೇಂದ್ರದ ಕಾರ್ಯಚಟುವಟಿಕೆ ಬಗ್ಗೆ ಎಲ್ಲ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಾಸಿಕ ತಾಯಂದಿರ ಸಭೆ, ಅಂಗನವಾಡಿ ಕಾರ್ಯಕರ್ತೆಯರ ಸಭೆ, ಗ್ರಾಮ ಸಭೆಗಳನ್ನು ನಡೆಸಿ ಮಹಿಳೆಯರಿಗೆ ಅರಿವು ಮೂಡಿಸಬೇಕೆಂದರು.
ಮಹಿಳಾ ಸಹಾಯ ವಾಣಿ ಸಂಖ್ಯೆ 1091 ಮೂಲಕ ಸ್ವೀಕರಿಸಿದ ಕರೆಗಳ ತಾಲೂಕುವಾರು ಮಾಹಿತಿ ಪಡೆದರು. ಮಹಿಳೆಯರು ಎಚ್ಚೆತ್ತುಕೊಳ್ಳುವಂತೆ ಮಹಿಳೆಯರ ಮತ್ತು ಮಕ್ಕಳ ಅನೈತಿಕವಾಗಿ ಸಾಗಾಣಿಕೆ ತಡೆ ಕಾಯ್ದೆ ಕುರಿತು ಜಿಲ್ಲೆ ಯಲ್ಲಿರುವ ಎಲ್ಲ ಲಂಬಾಣಿ ತಾಂಡ, ಗಾರ್ಮೆಂಟ್ಸ್ ಹಾಗೂ ಮಹಿಳೆಯರು ಕಾರ್ಯನಿರ್ವಹಿಸುವ ಮತ್ತಿತರ ಸ್ಥಳಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸ ಬೇಕೆಂದು ನಿರ್ದೇಶನ ನೀಡಿದರು.
ನಂತರ ಮಾತನಾಡಿದ ನಟರಾಜ್ ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ, ಬಹುಪತ್ನಿತ್ವ, ಅತಾ ಚಾರ, ಬಾಲ್ಯವಿವಾಹ, ಲೈಂಗಿಕ ಶೋಷಣೆ, ವಿಚ್ಛೇದನೆ, ಮತ್ತಿತರ ಮಹಿಳಾ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹಿಳಾ ಸಹಾಯ ವಾಣಿ 1091 ಮೂಲಕ ಸ್ವೀಕರಿಸುವ ಕರೆಗಳು ನೇರವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯುಕ್ತರ ಕಚೇರಿ ಗಮನಕ್ಕೆ ಹೋಗುತ್ತಿ ರುವುದರಿಂದ ಜಿಲ್ಲೆ ಯಿಂದ ಸ್ವೀಕರಿಸಿದ ಕರೆಗಳ ಮಾಹಿತಿ ನಮಗೆ ದೊರೆ ಯುತ್ತಿಲ್ಲ.
ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಕರಣಗಳಿಗೆ ಮಾತ್ರ ಸೀಮಿತಗೊಳಿಸಿ ಹೊಸ ಮಹಿಳಾ ಸಹಾಯ ವಾಣಿ ಸಂಖ್ಯೆ 181ನ್ನು ಸ್ಥಾಪಿಸಲಾಗಿದ್ದು, ಶೋಷಣೆ ಗೊಳಗಾದ ಮಹಿಳೆಯರು ಈ ಸಂಖ್ಯೆಗೆ ಕರೆ ಮಾಡುವ ಮೂಲಕ ದೂರನ್ನು ದಾಖಲಿಸಬಹು ದಾಗಿದೆ ಎಂದು ತಿಳಿಸಿದರು. ವಿವಿಧ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಾಂತ್ವನ ಕೇಂದ್ರದ ಸಿಬ್ಬಂದಿ ಗಳು, ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.