ಕೊರಟಗೆರೆ: ಹೊಟ್ಟೆ ನೋವು ತಾಳಲಾರದೆ ಮಹಿಳೆ ಆತ್ಮಹತ್ಯೆ
Team Udayavani, Dec 13, 2021, 4:59 PM IST
ಸಾಂದರ್ಭಿಕ ಚಿತ್ರ
ಕೊರಟಗೆರೆ: ಹೊಟ್ಟೆ ನೋವಿನ ಬಾಧೆ ತಾಳಲಾರದೆ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ತಾಲೂಕಿನ ಹೊಳವನಹಳ್ಳಿ ಯ ಆಂಜಿನಪ್ಪನ ಮಡದಿ ಮಮತಾ (35 ವರ್ಷ) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ.
ಈಕೆ ಒಂದೂವರೆ ವರ್ಷದ ಹಿಂದೆ ಅಪೆಂಡಿಕ್ಸ್ ಖಾಯಿಲೆಗೆ ಅಪರೇಷನ್ ಮಾಡಿಸಿದಾಗಿನಿಂದಲೂ ಆಗಾಗ್ಗೆ ಬರುತ್ತಿದ್ದ ತೀವ್ರ ಹೊಟ್ಟೆ ನೋವು ಬಾದೆಯನ್ನು ತಾಳಲಾರದೇ ಅಥವಾ ಬೇರೆ ಇನ್ನಾವುದೋ ಕಾರಣದಿಂದಲೂ ತನ್ಮೂಲಕ ತಾನೆ ಮನೆಯ ಹಾಲ್ ನಲ್ಲಿರುವ ಪ್ಯಾನ್ ಗೆ ಸೀರೆಯನ್ನು ಕಟ್ಟಿ ಕುತ್ತಿಗೆಗೆ ಕಟ್ಟಿಕೊಂಡು ನೇಣು ಹಾಕಿ ಕೊಂಡು ಮೃತ ಪಟ್ಟಿದ್ದಾಳೆ. ಈಕೆಯನ್ನು ವಿವಿಧ ಆಸ್ಪತ್ರೆಗಳಿಗೆ ತೋರಿಸಲಾಗಿತ್ತು. ಅಪೆಂಡಿಕ್ಸ್ ಆದ ಕಾರಣ ತೀವ್ರ ಹೊಟ್ಟೆನೋವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಊಹಿಸಲಾಗಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ಮಂಜುಳಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.