ಚಿರತೆ ದಾಳಿ: ಅರಣ್ಯ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ
Team Udayavani, Oct 4, 2021, 4:57 PM IST
ಚಿಕ್ಕನಾಯಕನಹಳ್ಳಿ: ತಾಲೂಕಿನ ಹಾಲುಗೊಣ ಸಮೀಪದ ನಾಗೇನಹಳ್ಳಿ ತೋಟದ ಮನೆಯಲ್ಲಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಪೀಪಲ್ ಟ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಚಿರತೆಗಳ ದಾಳಿ ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ನಾಗೇನಹಳ್ಳಿ ಗ್ರಾಮದ ಗಂಗಾಧರ್ ತಮ್ಮ ತೋಟದ ಮನೆಯ ಮುಂಭಾಗ ನಿಂತುಕೊಂಡಿದ್ದ ವೇಳೆ ಚಿರತೆ ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದು, ಗಾಬರಿಗೊಂಡ ಗಂಗಾಧರ್ ಕಿರುಚಿಕೊಂಡಾಗ, ಚಿರತೆ ಓಡಿ ಹೋಗಿದೆ. ತಕ್ಷಣ ಕುಟುಂಬದ ಸದಸ್ಯರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇದನ್ನೂ ಓದಿ;- “ಗರುಡ ಗಮನ ವೃಷಭ ವಾಹನ”ಕ್ಕೆ ರಕ್ಷಿತ್ ಶೆಟ್ಟಿ ಸಾಥ್
ಆತಂಕದಲ್ಲಿ ಜನ: ತಾಲೂಕಿನ ಗಡಿ ಭಾಗವಾಗಿರುವ ಹಾಲುಗೋಣ, ಮಲಗೊಂಡನಹಳ್ಳಿ ಕೆರೆಯಲ್ಲಿ ಹಾಗೂ ಸುತ್ತಮುತ್ತ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಕೆಲ ದಿನಗಳ ಹಿಂದೆ ಮಲಗೊಂಡನಹಳ್ಳಿಯಲ್ಲಿ ಬಳಿ ಚಿರತೆ ಬೋನಿಗೆ ಬಿದ್ದಿತ್ತು. ಇನ್ನೂ ಕೆಲ ಚಿರತೆಗಳು ಸುತ್ತಮುತ್ತ ಪ್ರದೇಶಗಳಲ್ಲಿ ಇದ್ದು, ರೈತರು ತೋಟಗಳಿಗೆ ಹೋಗಲು ಭಯಭೀತರಾಗಿದ್ದಾರೆ.
ಅರಣ್ಯ ಇಲಾಖೆ ನಿರ್ಲಕ್ಷ್ಯ: ಕಳೆದ ಕೆಲ ದಿನಗಳ ಹಿಂದೆ ತಾಲೂಕಿನ ಬುಕ್ಕಪಟ್ಟಣ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಒಬ್ಬ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆದಿತ್ತು. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಗಂಗಾಧರ್ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ. ನಾಗೇನಹಳ್ಳಿ ಸುತ್ತಮುತ್ತ ಚಿರತೆಗಳು ಹೆಚ್ಚಾಗುತ್ತಿದೆ ಎಂಬ ಮಾಹಿತಿ ಸಾರ್ವಜನಿಕರಿಂದ ಸಿಕ್ಕಿದ್ದರೂ ಸಹ, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳದೆ ಇರುವುದು ಇಂತಹ ದಾಳಿಗೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ನಾಗೇನಹಳ್ಳಿ ಸುತ್ತಮುತ್ತ 3ರಿಂದ 4 ಚಿರತೆಗಳು ಇರುವ ಬಗ್ಗೆ ಅನುಮಾನವಿದೆ. ಇಲ್ಲಿನ ರೈತರಿಗೆ ಅರಣ್ಯ ಇಲಾಖೆಯಿಂದ ರಕ್ಷಣೆ ಸಿಗದಂತಾಗಿದೆ. ರೈತರು ಭಯದಿಂದ ಬದುಕುವಂತಾಗಿದೆ. ಅನೇಕ ಬಾರಿ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ ಪ್ರಯೋಜವಿಲ್ಲ. ಒಂದು ಚಿರತೆ ಹಿಡಿದಿದ್ದೇ ದೊಡ್ಡ ಸಾಧನೆ ಎಂಬಂತೆ ಅರಣ್ಯ ಅಧಿಕಾರಿಗಳು ಸುಮ್ಮನಾಗಿದ್ದಾರೆ.”
ರವೀಶ್, ಗ್ರಾಪಂ ಮಾಜಿ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.