ಭೋವಿ ಅಭಿವೃದ್ಧಿ ನಿಗಮಕ್ಕೆ 175 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ
Team Udayavani, Aug 28, 2022, 11:00 PM IST
ತುಮಕೂರು: ರಾಜ್ಯದ ಕಾಯಕ ಸಮುದಾಯಗಳ ಪ್ರಗತಿಗೆ ಸರಕಾರ ಬದ್ಧವಾಗಿದೆ. ಬೋವಿ ಅಭಿವೃದ್ಧಿ ನಿಗಮಕ್ಕೆ 175 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ರಾಷ್ಟ್ರೀಯ ಶ್ರೀ ಸಿದ್ದರಾಮೇಶ್ವರ ಓಡ್ಸ್ (ಬೋವಿ) ಯುವ ವೇದಿಕೆ ವತಿಯಿಂದ ರವಿವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಭೋವಿ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಈ ವರ್ಷ ನಿಗಮಕ್ಕೆ ನೀಡಿರುವ 110 ಕೋಟಿ ರೂ. ಅನುದಾನವನ್ನು ಸಮರ್ಪಕವಾಗಿ ಬಳಸಿ ಕಾರ್ಯಕ್ರಮ ರೂಪಿಸಿದರೆ ಮುಂದಿನ ವರ್ಷ ನಿಗಮಕ್ಕೆ 175 ಕೋಟಿ ರೂ. ಅನುದಾನ ನೀಡಲಾಗುವುದು ಹಾಗೂ ಇನ್ನೊಂದು ವಾರದೊಳಗೆ ನಿಗಮಕ್ಕೆ ದಕ್ಷ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದರು.
ಭೋವಿ ಸಮುದಾಯ ಭವನ ನಿರ್ಮಾಣಕ್ಕೆ ಎಸ್‌ಟಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಅನುದಾನ ಒದಗಿಸಲಾಗುವುದು. ಭೋವಿ ಸಮುದಾಯ ದೇಶ ಕಟ್ಟುವ, ನಾಡು ಕಟ್ಟುವ ಮತ್ತು ದೇವರಿಗೆ ಸ್ಥಾನ ಕಲ್ಪಿಸುವ ಮಹತ್ವದ ಕಾಯಕ ಸಮಾಜವಾಗಿದೆ. ಈ ಸಮಾಜ ಮತ್ತಷ್ಟು ಅಕ್ಷರ ಕ್ರಾಂತಿಗೆ ಮುಂದಾಗುವ ಅಗತ್ಯವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.