Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ
Team Udayavani, Jun 27, 2024, 12:01 AM IST
ತುಮಕೂರು: ಅವಿವಾಹಿತರು ಹಾಗೂ ಅಕ್ರಮ ಸಂಬಂಧದಿಂದ ಗರ್ಭ ಧರಿಸಿದ ಮಹಿಳೆಯರನ್ನು ಪತ್ತೆ ಹಚ್ಚಿ ಅವರು ಜನ್ಮ ನೀಡುವ ಮಕ್ಕಳನ್ನು ಪಡೆದು ಮಕ್ಕಳಿಲ್ಲದ ದಂಪತಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಗುಬ್ಬಿ ಪೊಲೀಸರು, 7 ಮಂದಿ ಆರೋಪಿಗಳನ್ನು ಬಂಧಿಸಿ 5 ಮಕ್ಕಳನ್ನು ರಕ್ಷಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.
ಈ ಹಿಂದೆ ಕುಣಿಗಲ್ ಸರಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಎಎನ್‌ಎಂ ಆಗಿ ಕಾರ್ಯನಿರ್ವಹಿಸುತ್ತಿದ್ದ ಸದ್ಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿರುವ ತುಮಕೂರಿನ ಅಶೋಕ ನಗರದ 2ನೇ ಕ್ರಾಸ್ ವಾಸಿ ಮಹೇಶ್ ಯು.ಡಿ. (39), ಹುಳಿಯಾರಿನ ನಿವಾಸಿ, ಫಾರ್ಮಸಿಸ್ಟ್ ಮೆಹಬೂಬ್ ಷರೀಫ್ (52), ಜಾತ್ರೆಗಳಲ್ಲಿ ಟ್ಯಾಟೂ ಬರೆಯುತ್ತಿದ್ದ ಗುಬ್ಬಿ ತಾಲೂಕು ಬಿಕ್ಕೇಗುಡ್ಡ ಗ್ರಾಮದ ಕೆ.ಎನ್. ರಾಮಕೃಷ್ಣ (53), ತುಮಕೂರಿನ ಭಾರತಿ ನಗರದ ನಿವಾಸಿ ಹನುಮಂತರಾಜು (45), ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಬೆಳ್ಳೂರಿನ ಮುಬಾರಕ್ ಪಾಷಾ (44), ಮಧುಗಿರಿ ತಾಲೂಕು ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಫ್ ನರ್ಸ್ ಆಗಿದ್ದ ಪೂರ್ಣಿಮಾ ಎನ್. (39), ಶಿರಾದ ಜ್ಯೋತಿನಗರ ನಿವಾಸಿ, ಹಂಗಾಮಿ ನರ್ಸ್ ಸೌಜನ್ಯಾ (48) ಬಂಧಿತರು ಎಂದು ಎಸ್‌ಪಿ ಹೇಳಿದರು.
2ರಿಂದ 3 ಲಕ್ಷ ರೂ. ವರೆಗೆ ಮಕ್ಕಳ ಮಾರಾಟ
ಆರೋಪಿಗಳು ಮಕ್ಕಳನ್ನು 2ರಿಂದ 3 ಲಕ್ಷ ರೂ. ವರೆಗೆ ಮಾರಾಟ ಮಾಡುತ್ತಿದ್ದರು ಎನ್ನುವುದು ತನಿಖೆಯಿಂದ ಬಹಿರಂಗಗೊಂಡಿದೆ. ಆರೋಪಿಗಳಿಂದ ಮಕ್ಕಳನ್ನು ಹಣ ಕೊಟ್ಟು ಖರೀದಿ ಮಾಡಿದವ ರ ನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಹೇಳಿದರು. ಕೃತ್ಯಕ್ಕೆ ಸಹಕರಿಸಿದ ಆರೋಪಿ ಮೆಹಬೂಬ್ ಷರೀಫ್ ಹುಳಿಯಾರಿನಲ್ಲಿ ಪತ್ನಿಯ ಹೆಸರಿನಲ್ಲಿ ಖಾಸಗಿ ಆಸ್ಪತ್ರೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ ಎಂದವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.