ನಿಗದಿತ ಅವಧಿಗೆ ಕಾಮಗಾರಿ ಮುಗಿಸಿ
ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಖಡಕ್ ಎಚ್ಚರಿಕೆ
Team Udayavani, Jun 29, 2019, 11:14 AM IST
ತುಮಕೂರು: ಸರ್ಕಾರದಿಂದ ಮಂಜೂರಾದ ಕಾಮಗಾರಿಗಳನ್ನು ನಿರೀಕ್ಷಿತ ಅವಧಿಗೆ ಪೂರ್ಣಗೊಳಿಸಬೇಕು. ಅನುದಾನ ಯಾವುದೇ ಕಾರಣಕ್ಕೂ ರದ್ದಾಗಬಾರದು. ತಪ್ಪಿದಲ್ಲಿ ಕಠಿಣ ಕ್ರಮ ಅನಿವಾರ್ಯ ಎಂದು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಇಲಾಖೆಗಳು ಪ್ರಸಕ್ತ ಸಾಲಿಗೆ ಮಂಜೂರಾದ ರಸ್ತೆ, ಕಟ್ಟಡ, ಮತ್ತಿತರ ಕಾಮಗಾರಿ ಗಳನ್ನು ಬರುವ 2020ರ ಫೆಬ್ರುವರಿಯೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಅಭಿವೃದ್ಧಿಗೆ ಹೊಡೆತ: ಕಟ್ಟಡ ದುರಸ್ತಿ, ಹೊಸ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿಗದಿತ ಅವಧಿ ಯೊಳಗೆ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಬೇಕು. ಇಲ್ಲದಿದ್ದರೆ ಅನುದಾನ ರದ್ದಾಗುತ್ತದೆ. ನಿಗದಿತ ಸಮಯದಲ್ಲಿ ಬಿಲ್ ಸಲ್ಲಿಸದ ಕಾರಣ ಕೆಲವು ಲೆಕ್ಕ ಶೀರ್ಷಿಕೆಗಳಡಿ ಸುಮಾರು 3 ಕೋಟಿ ರೂ.ಗೂ ಹೆಚ್ಚಿನ ಹಣ ಸರಕಾರಕ್ಕೆ ವಾಪಸ್ಸಾಗಿದೆ. ಇದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹೊಡೆತ ಬೀಳಲಿದ್ದು, ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂದು ಸೂಚಿಸಿದರು.
ಜಿಲ್ಲಾ ಪಂಚಾಯತಿ ಅಧೀನದಲ್ಲಿ ಬರುವ ವಿವಿಧ ಇಲಾಖೆಗಳು 2019-20ನೇ ಸಾಲಿನ ಅಭಿವೃದ್ಧಿ ಕಾಮ ಗಾರಿ ಕೈಗೊಳ್ಳುವ ಸಂದರ್ಭ ಕ್ರಿಯಾ ಯೋಜನೆ ಸಲ್ಲಿಸುವ ಮೊದಲು ಸಂಬಂಧಿಸಿದ ಜಿಲ್ಲಾ ಪಂಚಾಯತಿ ಸದಸ್ಯರ ಗಮನಕ್ಕೆ ತರಬೇಕು. ಇಲ್ಲದಿದ್ದಲ್ಲಿ ಸ್ಥಾಯಿ ಸಮಿತಿಯಿಂದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸ್ಮಶಾನ ಭೂಮಿ ಇಲ್ಲ: ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ದಲಿತರ ಸ್ಮಶಾನ ಭೂಮಿ ಗುರುತಿಸುವ ಕೆಲಸಕ್ಕೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಹಲವಾರು ಹಳ್ಳಿಗಳಲ್ಲಿ ದಲಿತರಿಗೆ ಶವ ಹೂಳಲು ಸ್ಮಶಾನ ಭೂಮಿ ಇಲ್ಲ. ಸಮಾಜ ಕಲ್ಯಾಣ ಇಲಾಖೆಗೆ 2 ಕೋಟಿ ರೂ. ಅನುದಾನ ನೀಡಿ ಎರಡು ವರ್ಷ ಕಳೆದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಜಿಪಂ ಉಪಾಧ್ಯಕ್ಷರು ಅಸಮಾ ಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ದೇವ ರಾಜು, ಕಂದಾಯ ಇಲಾಖೆಯವರು ಹಲವು ಕಡೆ ಭೂಮಿಯ ಚೆಕ್‌ಬಂದಿ ಗುರುತಿಸಿಕೊಡುವಲ್ಲಿ ವಿಳಂಬ ಮಾಡಿದ್ದಾರೆ. ಇದರಿಂದ ಕೆಲವು ಕಡೆಗಳಲ್ಲಿ ಸ್ಮಶಾನ ಅಭಿವೃದ್ಧಿ ಯಾಗಿಲ್ಲ. ಉಪವಿಭಾಗಾಧಿ ಕಾರಿಗಳು ಮತ್ತು ತಹಶೀಲ್ದಾರ್ ಮಟ್ಟದ ಎಸ್ಸಿ-ಎಸ್ಟಿ ಕುಂದುಕೊರತೆ ಸಭೆಯಲ್ಲಿ ಈ ವಿಚಾರ ಚರ್ಚೆ ಯಾಗಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನಿಗಾ ವಹಿಸಿ, ಆದಷ್ಟು ಬೇಗ ಸ್ಮಶಾನ ಭೂಮಿ ಗುರುತಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ವಿಸ್ಕೃತ ಚರ್ಚೆ ನಡೆಸಿ: ಉಪಾಧ್ಯಕ್ಷೆ ಮಾತನಾಡಿ, ಅಧಿಕಾರಿಗಳು ಸ್ಥಾಯಿ ಸಮಿತಿ ಸಭೆಗೆ ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು. ಸಾಮಾನ್ಯ ಸಭೆಗಳಲ್ಲಿ ಯಾವುದೇ ವಿಷಯ ವಿವರವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಕಷ್ಟಕರವಾಗಿರುವುದರಿಂದ ಸ್ಥಾಯಿ ಸಮಿತಿ ರಚಿಸಲಾಗಿದೆ. ಸಂಬಂಧಿಸಿದ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸ್ಥಾಯಿಸ ಸಮಿತಿಗಳ ಸಭೆಗೆ ಹಾಜರಾಗಬೇಕೆಂದರಲ್ಲದೆ, ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಗೆ ಕಡತ ಮಂಡಿಸುವ ಮುನ್ನ ಸ್ಥಾಯಿ ಸಮಿತಿಗಳಲ್ಲಿ ಮಂಡಿಸಿ ವಿಸ್ಕೃತ ಚರ್ಚೆ ನಡೆಸಿ, ಅನುಮೋದನೆ ಪಡೆದರೆ, ಸಾಮಾನ್ಯ ಸಭೆಯಲ್ಲಿ ಸುಲಭವಾಗಿ ಒಪ್ಪಿಗೆ ಪಡೆಯಬಹುದು ಎಂದು ತಿಳಿಸಿದರು.
ಶೌಚಗೃಹದ ವ್ಯವಸ್ಥೆಯಿಲ್ಲ: ಸಮಿತಿ ಸದಸ್ಯ ತಮ್ಮಯ್ಯ ಮಾತನಾಡಿ, ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆ ಗಳಲ್ಲಿ ಶೌಚಗೃಹ ಇಲ್ಲದಿರುವ ಬಗ್ಗೆ ಸಾಕಷ್ಟು ದೂರುಗಳು ಸಾರ್ವಜನಿಕರಿಂದ ಬರುತ್ತಿವೆ. ಕೆಲವು ಕಡೆಗಳಲ್ಲಿ ಶಾಲೆ ಶಿಥಿಲಗೊಂಡು ಮರದ ಕೆಳಗೆ, ದೇವಾಲಯದಲ್ಲಿ ಶಾಲೆ ನಡೆಸಲಾಗುತ್ತಿದೆ. ಪುರವರ ಹೋಬಳಿಯಲ್ಲಿರುವ 5 ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಗೃಹದ ವ್ಯವಸ್ಥೆಯಿಲ್ಲ. ವಿದ್ಯಾರ್ಥಿಗಳು ಬಯಲು ಶೌಚಕ್ಕೆ ಹೋಗುತ್ತಿರುವ ಪರಿಸ್ಥಿತಿಯಿದ್ದು, ಕೂಡಲೇ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.
ಸ್ವಚ್ಛ ಭಾರತ್ ಅಭಿಯಾನದಲ್ಲಿ ಸಾಕಷ್ಟು ಅನುದಾನ ವಿದ್ದು, ಅದನ್ನು ಬಳಸಿ ಶೌಚಗೃಹ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರಿಗೆ ಶಾರದಾ ನರಸಿಂಹಮೂರ್ತಿ ಸಲಹೆ ನೀಡಿದರು.
ವಿಕಲಚೇತನರು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಲು ಅನುವಾಗುವಂತೆ ಎಲ್ಲ ಸರ್ಕಾರಿ ಕಚೇರಿ ಗಳಲ್ಲಿ ರ್‍ಯಾಂಪ್, ಲಿಫ್ಟ್ ವ್ಯವಸ್ಥೆ ಕಲ್ಪಿಸುವ ಮೂಲಕ ವಿಕಲಚೇತನಸ್ನೇಹಿ ಕಚೇರಿಗಳನ್ನಾಗಿಸಬೇಕು. ವಿಕಲ ಚೇತನರಿಗೆ ಮೀಸಲಿರಿಸುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು. ಅಧಿಕಾರಿಗಳು ಯಾವುದೇ ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವ ಸಂದರ್ಭ ಸ್ಥಳೀಯ ಜನಪ್ರತಿ ನಿಧಿಗಳನ್ನು ಆಹ್ವಾನಿಸಿ ಶಿಷ್ಠಾಚಾರ ಪಾಲಿಸಬೇಕಲ್ಲದೆ ಕಾಮಗಾರಿ ಕೈಗೊಳ್ಳುವ ಬಗ್ಗೆ ಗಮನಕ್ಕೆ ತರಬೇಕೆಂದರು.
ಸಾಮಾನ್ಯ ಸ್ಥಾಯಿ ಸಮಿತಿ ಸದಸ್ಯರಾದ ಶಿವಮ್ಮ ಡಾ.ನಾಗರಾಜು, ರೇಣುಕ, ಭಾರತಿ, ಭಾಗ್ಯಮ್ಮ, ಅಂಬುಜ ಎಸ್.ಆರ್.ಗೌಡ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.