ಕುಣಿಗಲ್ :ರಾಹುಲ್‌ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ

ಬಿಜೆಪಿ ಸರ್ಕಾರದಿಂದ ವಿರೋಧಿಗಳ ಧಮನ ನೀತಿ : ಡಾ.ರಂಗನಾಥ್ ಕಿಡಿ

Team Udayavani, Jun 16, 2022, 10:03 PM IST

ರಾಹುಲ್‌ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ

ಕುಣಿಗಲ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ಹಾಗೂ ಸಂಸದ ಡಿ.ಕೆ.ಸುರೇಶ್ ಮೇಲಿನ ಪೊಲೀಸರ ಹಲ್ಲೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಸಂಜೆ ಪಟ್ಟಣದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಸಿದರು.

ಕೇಂದ್ರ ಬಿಜೆಪಿ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಎಐಸಿಸಿ ಅಧ್ಯಕ್ಷ ಸೋನಿಯಾಗಾಂಧಿ, ಮುಖಂಡ ರಾಹುಲ್ ಗಾಂಧಿ ಅವರಿಗೆ ಇಡಿಯಿಂದ ತನಿಖೆ ನಡೆಸುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಡಾ.ಹೆಚ್.ಡಿ.ರಂಗನಾಥ್ ಅವರ ನೇತೃತ್ವದಲ್ಲಿ ಪಟ್ಟಣದ ಹಳೇಯ ರಾಷ್ಟ್ರೀಯ ಹೆದ್ದಾರಿ 48 ರ ಎನ್.ಹುಚ್ಚಮಾಸ್ತಿಗೌಡ ಸರ್ಕಲ್ ಹಾಗೂ ಗ್ರಾಮ ದೇವತೆ ಸರ್ಕಲ್ ಮಾರ್ಗವಾಗಿ ಪುರಸಭಾ ಕಚೇರಿವರೆಗೆ ಬೃಹತ್ ಪಂಜಿನ ಮೆರವಣಿಗೆ ನೆಡೆಸಿ ಕೇಂದ್ರ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು.

ಶಾಸಕ ಡಾ.ಹೆಚ್.ಡಿ.ರಂಗನಾಥ್ ಮಾತನಾಡಿ ದೇಶದ ಸ್ವತಂತ್ರಕ್ಕಾಗಿ 1937 ರಲ್ಲಿ ನೆಹರು, ಸರ್ಧಾರ್‌ವಲ್ಲಬಾಯಿ ಪಟೇಲ್ ಮೊದಲಾದ ನಾಯಕರು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹೊರ ತಂದರು, ಇದನ್ನು 1945 ರಲ್ಲಿ ಅಂದಿನ ಬ್ರಿಟಿಷ್ ಸರ್ಕಾರ ನಿಷೇಧಿಸಿತ್ತು, ನಾಯಕರ ಉಗ್ರ ಹೋರಾಟದಿಂದಾಗಿ ಬ್ರಿಟಿಷ್ ಸರ್ಕಾರ ಪತ್ರಿಕೆ ಮೇಲೆ ಹೇರಿದ ನಿಷೇಧವನ್ನು ಹಿಂಪಡೆಯಿತು, ಕಾಂಗ್ರೆಸ್ ಕಾರ್ಯಕರ್ತರ, ಅಭಿಮಾನಿಗಳ ದೇಣಿಗೆಯಿಂದ 90 ಕೋಟಿ ರೂ ಸಂಗ್ರಹವಾಗಿ 67 ಕೋಟಿ ರೂ. ಪತ್ರಿಕೆಯಲ್ಲಿ ದುಡಿಯುವಂತವರಿಗೆ ಸಂಬಳ ನೀಡಲಾಯಿತು, ಉಳಿದ ಹಣದಲ್ಲಿ ವಿದ್ಯುತ್ ಬಿಲ್, ಕಟ್ಟಡ ನಿರ್ವಹಣೆಗೆ ಬಳಸಲಾಯಿತು, ನ್ಯಾಷನಲ್ ಹೆರಾಲ್ಡ್ ವಿರುದ್ದ ಹಾಗೂ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ದ ಮನಿ ಲಾಂಡರಿಂಗ್ ಪ್ರಕರಣ ದಾಖಲಾಗಿತ್ತು, ತನಿಖೆ ನಡೆಸಿದ ಬಳಿಕ ಇದರಲ್ಲಿ ಸತ್ಯಾಂಶ ಇಲ್ಲ ಎಂದು ಪ್ರಕರಣ ಕೈ ಬಿಡಲಾಗಿತು, ರಾಜಸ್ಥಾನ ಉದಯಪುರದಲ್ಲಿ ನಡೆದ ಕಾಂಗ್ರೆಸ್‌ನ ಚಿಂತನಾ ಶಿಬಿರದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ ಘೋಷಣೆಯಿಂದ ಕಂಗಾಲಾದ ಕೇಂದ್ರ ಬಿಜೆಪಿ ಸರ್ಕಾರ ಮತ್ತೆ ನ್ಯಾಷನಲ್ ಹೆರಾಲ್ಡ್ ಪ್ರಕರಣ ಚಾಲ್ತಿಗೆ ತಂದು ಇಡಿ ಬಳಸಿಕೊಂಡು ರಾಹುಲ್‌ಗಾಂಧಿ ಹಾಗೂ ಸೋನಿಯಾಗಾಂಧಿ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿ ಕಿರುಕುಳ ನೀಡಲು ಯತ್ನಿಸುತ್ತಿದೆ ಬಿಜೆಪಿ ಸರ್ಕಾರದ ಗೊಡ್ಡು ಬೆದರಿಕೆ ಕಾಂಗ್ರೆಸ್ ಕಾರ್ಯಕರ್ತರು ಬಗ್ಗುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಶಿಡ್ಲಘಟ್ಟ: ಭೂಮಿ ಕಂಪನದ ಅನುಭವ, ನಡುಗಿದ ಜನರು

ಬಿಜೆಪಿಯಿಂದ ವಿಪಕ್ಷ ದಮನ ನೀತಿ : ಬಿಜೆಪಿ ದೇಶದಲ್ಲಿ ಧರ್ಮಗಳ, ಜಾತಿಗಳ ನಡುವೆ ವಿಷ ಬೀಜ ಭಿತ್ತಿ ದೇಶದಲ್ಲಿ ಶಾಂತಿ ಕಾದಾಡುವಂತ ಪರಿಸ್ಥಿತಿ ನಿರ್ಮಾಣ ಮಾಡಿದೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಅದಗೆಟ್ಟಿದೆ, ಇದರ ವಿರುದ್ದ ವಿಪಕ್ಷಗಳು ಬೀದಿಗಿಳಿದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆಗೆ ಇಳಿದಿವೆ, ಕೇಂದ್ರ ಸರ್ಕಾರದ ಸಂಸ್ಥೆಗಳ ಮೂಲಕ ವಿಪಕ್ಷಗಳ ನಾಯಕರನ್ನು ದಮನ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಶಾಸಕ ಡಾ.ರಂಗನಾಥ್ ಗಂಭೀರ ಆರೋಪ ಮಾಡಿದರು.

ಪೊಲೀಸರ ದೌರ್ಜನ್ಯ : ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು, ಇದನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಪೊಲೀಸರ ಮೂಲಕ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವ ಮೂಲಕ ದೌರ್ಜನ್ಯ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಂಜಿನ ಮೆರವಣಿಗೆಯಲ್ಲಿ ಪುರಸಭಾ ಅಧ್ಯಕ್ಷ ರಂಗಸ್ವಾಮಿ, ಸದಸ್ಯರಾದ ಬಿ.ಎನ್.ಅರುಣ್‌ಕುಮಾರ್, ಮಂಜುಳ, ಜಯಲಕ್ಷ್ಮಿ, ರಾಮಣ್ಣ, ಸೆಮಿಉಲ್ಲಾ, ಎಸ್.ಕೆ.ನಾಗೇಂದ್ರ, ಮಾಜಿ ಸದಸ್ಯರಾದ ಶಂಕರ್, ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಲೋಹಿತ್, ನಗರ ಘಟಕ ಅಧ್ಯಕ್ಷ ಮಾರುತಿ, ಗ್ರಾ.ಪಂ ಸದಸ್ಯ ಸ್ವಾಮಿ ಹಾಲುವಾಗಿಲು, ವಿಎಸ್‌ಎಸ್‌ಎನ್ ಅಧ್ಯಕ್ಷರಾದ ಹರೀಶ್, ಬೋರೇಗೌಡ, ಕೆಪಿಸಿಸಿ ಸದಸ್ಯ ನಾರಾಯಣ್ ಮತ್ತಿತರರು ಭಾಗವಹಿಸಿದರು,

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.