ತೀರಾ ಹದಗೆಟ್ಟಿದೆ ಸಂಪರ್ಕ ರಸ್ತೆ


Team Udayavani, Oct 23, 2019, 2:04 PM IST

tk-tdy-1

ತಿಪಟೂರು: ನಗರದ ಐಬಿ ಸರ್ಕಲ್‌ನಿಂದ ಗೋವಿನಪುರ ಬಡಾವಣೆ ಮಾರ್ಗವಾಗಿ ಹಾಲ್ಕುರಿಕೆ-ಹುಳಿಯಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರ ಓಡಾಟ ನರಕಯಾತನೆ ಯಾಗಿದೆ.

ಆದರೂ ತಾಲೂಕು ಆಡಳಿತ, ನಗರಸಭೆ ಹಾಗೂ ಲೋಕಪಯೋಗಿ ಇಲಾಖೆ ತಲೆಕೆಡಿಸಿಕೊಂಡಿಲ್ಲ. ನಗರದ ಎನ್‌.ಎಚ್‌. 206ರಲ್ಲಿ ಐ.ಬಿ. ಸರ್ಕಲ್‌ನಿಂದ ಪ್ರಾರಂಭವಾಗುವ ರಸ್ತೆಯು ನಗರದ ಗೋವಿನಪುರ ಸೇರಿ ಆರೇಳು ಬಡಾವಣೆ ಹಾಗೂ ತಾಲೂಕಿನ ನೂರಾರು ಗ್ರಾಮಗಳು ಸೇರಿ ಹುಳಿಯಾರು ಸಂಪರ್ಕಿಸತ್ತದೆ. ದಿನನಿತ್ಯ ನೂರಾರು ಬಸ್‌, ಲಾರಿ, ಸಾವಿರಾರು ದ್ವಿಚಕ್ರ ವಾಹನಗಳು ಸಂಚರಿ ಸುವುದರಿಂದ ಯಾವಾಗಲೂ ವಾಹನ ಸಂಚಾರ ದಟ್ಟವಾಗಿರುತ್ತದೆ. ರಸ್ತೆ ಡಾಂಬರ್‌ ಸಂಪೂರ್ಣ ಹಾಳಾಗಿ ದೊಡ್ಡ ಗುಂಡಿಗಳು ಬಿದ್ದಿವೆ. ಅಲ್ಲದೇ ಮಣ್ಣಿನ ರಸ್ತೆಯಂತಾಗಿ ಬದಲಾಗಿದೆ.

ನಗರದ ಒಳಗಡೆ ಅನೇಕ ಕಡೆ ಆಳ ಕಂದಕಗಳು ಉಂಟಾಗಿ ಸವಾರರು ಸ್ವಲ್ಪ ಎಚ್ಚರ ತಪ್ಪಿದರೂಅಪಘಾತವಾಗಿ ಕೈಕಾಲು, ಪ್ರಾಣ ಕಳೆದು ಕೊಳ್ಳುವ ಅಪಾಯ ಇದೆ. ಮಳೆ ಬಂದರೆ ಕೆಸರು ಗದ್ದೆಯಾದರೆ, ಬಿಸಿಲು ಕಾದರೆ ಧೂಳು ಮಯವಾಗುವ ನಿತ್ಯ ರಸ್ತೆಯಲ್ಲಿ ಸಂಚಾರ ವಾಹನ ಸವಾರರು, ಸಾರ್ವಜನಿಕರು, ರಸ್ತೆ ಅಕ್ಕಪಕ್ಕದ ಮನೆಯವರು ಯಮ ಯಾತನೆ ಎಂಬಂತಾಗಿದೆ. ಇನ್ನಿಲ್ಲದ ಸರ್ಕಸ್‌ ಮಾಡಿಕೊಂಡೆ ವಾಹನ ಚಲಾಯಿಸುವ ಪರಿಸ್ಥಿತಿ ತಲೆ ದೋರಿದೆ. ಇದೇ ರಸ್ತೆಯಲ್ಲಿ ಮೂರ್‍ನಾಲ್ಕು ಶಾಲೆಗಳಿದ್ದು, ಮಕ್ಕಳಿಗೂ ತೊಂದರೆ ಯಾಗಿದೆ. ಮಳೆ ಬಂದರಂತೂ ಗುಂಡಿ ಗಳು ಕಾಣಿಸ ದಂತಾಗಿ ಒಂದಲ್ಲೊಂದು ಅವಘಡಗಳು ಸಂಭವಿಸುತ್ತಿವೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ತಾಲೂಕು ಆಡಳಿತ, ನಗರಸಭೆ ಮತ್ತು ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರಹಿಡಿಶಾಪ ತಪ್ಪಿಲ್ಲ.

ಫುಟ್‌ಪಾತ್‌ ಒತ್ತುವರಿ: ಐ.ಬಿ. ಸರ್ಕಲ್‌, ಗೋವಿನಪುರ ಸರ್ಕಲ್‌ನಿಂದ ಈ ರಸ್ತೆಯ ಎರಡೂ ಬದಿಗಳಲ್ಲಿ 2 ಕಿ.ಮೀ.ನಷ್ಟು ಉದ್ದಕ್ಕೂ ಸಾಕಷ್ಟು ಪೆಟ್ಟಿಗೆ ಅಂಗಡಿಗಳು, ಗುಜರಿ ಅಂಗಡಿ ವ್ಯಾಪಾರಿಗಳು ರಸ್ತೆಯನ್ನೇ ಆಕ್ರಮಿಸಿ ಕೊಂಡು ಪಾದಾಚಾರಿಗಳಿಗೆ ತೀವ್ರ ತೊಂದರೆ ಉಂಟು ಮಾಡುತ್ತಿದ್ದಾರೆ. ನಗರಸಭೆ ಹಾಗೂ ಲೋಕೋಪಯೋಗಿ ಅಧಿಕಾರಿಗಳು ವ್ಯಾಪಾರಿಗಳು ನೀಡುವ ಮಾಮೂಲಿ ಕಾಸಿಗೆ ಯಾವುದೇ ಕ್ರಮ ತೆಗೆದುಕೊಳ್ಳದಿರುವುದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರ, ವಾಹನ ಸವಾರರ ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.

ರಸ್ತೆಯಲ್ಲಿ ನಿತ್ಯ ಒಂದಲ್ಲೊಂದು ಅಪಘಾತ, ಅವಘಡಗಳು ಸಂಭವಿಸುತ್ತಿದ್ದರೂ, ನಗರಸಭೆ, ಪೊಲೀಸ್‌ ಇಲಾಖೆ ನಮಗೂ, ಇದಕ್ಕೂ ಸಂಬಂಧವಿಲ್ಲವೆಂಬಂತೆ ಜಾಣ ಕುರುಡು ತೋರಿಸುತ್ತಿರುವುದು ಪ್ರಯಾಣಿಕರ, ಪಾದಚಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ನಗರಸಭೆ‌ ಗಮನಹರಿಸಿ ರಸ್ತೆ ದುರಸ್ತಿ ಹಾಗೂ ಫುಟ್ ಪಾತ್‌ ತೆರವು ಕಾರ್ಯ ಮಾಡಬೇಕಿದೆ.

 

-ಬಿ. ರಂಗಸ್ವಾಮಿ

ಟಾಪ್ ನ್ಯೂಸ್

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.