ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ
Team Udayavani, Sep 15, 2019, 2:25 PM IST
ತುಮಕೂರು: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಪ್ರಮಾಣ ತಗ್ಗಿಸಿ ಸುಗಮ ಸಂಚಾರ ಒದಗಿಸುವ ಸಲುವಾಗಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕ್ಯಾತಸಂದ್ರದಿಂದ ಗುಬ್ಬಿ ಗೇಟ್ವರೆಗೆ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ 10.5 ಕಿ.ಮೀ ಉದ್ದದ ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲು ಮುಂದಾಗಿದೆ.
ರಾಜಧಾನಿ ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಂತೆ ಬೆಳವಣಿಗೆಯಾಗುತ್ತಿರುವ ಶೈಕ್ಷಣಿಕ ನಗರದಲ್ಲಿ ದಿನೆದಿನೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಬೆಂಗಳೂರಿನ ನಂತರ ವೇಗವಾಗಿ ವಿಸ್ತಾರಗೊಳ್ಳುತ್ತಿರುವ ತುಮಕೂರಿನ ಪ್ರವಾಸಿ ತಾಣ, ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ಹಾಗೂ ಜಿಲ್ಲಾದ್ಯಂತ ಕೈಗಾರಿಕಾ ವಲಯದ ಅಭಿವೃದ್ಧಿಯಿಂದ ನಗರದ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದೆ. ಇದನ್ನು ಮನಗಂಡ ಸ್ಮಾರ್ಟ್‌ಸಿಟಿ ಲಿಮಿಟೆಡ್ ನಗರದಲ್ಲಿ ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಮಾಡಲು ಸಿದ್ಧತೆ ನಡೆಸಿದೆ.
85 ಕೋಟಿ ರೂ. ವೆಚ್ಚದಲ್ಲಿ ಪಿಆರ್‌ಆರ್: ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷೆ ಡಾ. ಶಾಲಿನಿ ರಜನೀಶ್ ಮಾರ್ಗದರ್ಶನದಲ್ಲಿ ಯೋಜನಾ ನಿರ್ವಹಣ ಸಲಹೆದಾರ ಸಂಸ್ಥೆಯಾದ ಐಪಿಇ ಗ್ಲೋಬಲ್ ಲಿ. ಈಗಾಗಲೇ ಪಿಆರ್‌ಆರ್ ಕಾಮಗಾರಿ ಕೈಗೊಂಡಿದ್ದು, ಪ್ರಗತಿಯಲ್ಲಿದೆ. ನಗರದ ಹೊರವಲಯದ ಕ್ಯಾತಸಂದ್ರದಿಂದ ಗುಬ್ಬಿ ಗೇಟ್ವರೆಗೆ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ 10.5 ಕಿ.ಮೀ ಉದ್ದದ ಈ ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲಾಗುತ್ತಿದೆ.
ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣದಿಂದ ಸಂಚಾರ ದಟ್ಟಣೆ ಕಡಿಮೆಯಾಗುವುದಲ್ಲದೆ ನಗರವನ್ನು ಕಾಡುತ್ತಿರುವ ವಾಯುಮಾಲಿನ್ಯ ಪ್ರಮಾಣವೂ ಕಡಿಮೆಯಾಗಲಿದೆ.
ಪ್ರಸ್ತುತ ಉತ್ತರ-ದಕ್ಷಿಣ ರಾಜ್ಯಗಳಿಗೆ ಸೇರಿದ ಸರಕು ಸಾಗಣೆ ವಾಹನಗಳು ತುಮಕೂರು ಮೂಲಕವೇ ಹಾದು ಹೋಗುತ್ತಿದ್ದು, ಪೆರಿಫೆರಲ್ ರಸ್ತೆ ಪೂರ್ಣಗೊಂಡ ನಂತರ ಶೇ.25 ಸಂಚಾರದ ಒತ್ತಡ ಕಡಿಮೆಯಾಗಲಿದೆ.
ಕಾರಿಡಾರ್ ಮಾದರಿ: ಹಾಲಿ ಕೈಗೊಂಡಿರುವ ವರ್ತುಲ ರಸ್ತೆ ಎರಡೂ ದಿಕ್ಕಿನಲ್ಲಿ ಎರಡು ಲೇನ್ ಹಾಗೂ ಸರ್ವಿಸ್ ರಸ್ತೆ ಹೊಂದಿದೆ. ಪಿಆರ್ ರಸ್ತೆಯು 75 ಮೀ. ಅಗಲ ಹೊಂದಲಿದ್ದು,ಚತುಷ್ಪಥ ರಸ್ತೆಯಾಗಲಿದೆ.
ರಸ್ತೆಯು ಕಾರಿಡಾರ್ ಮಾದರಿಯಲ್ಲಿರುತ್ತದೆ. ಜೊತೆಗೆ ಎರಡೂ ಬದಿ ಸರ್ವಿಸ್ ರಸ್ತೆಯನ್ನೂ ನಿರ್ಮಿಸಲಾಗುವುದು. ಜೊತೆಗೆ ವಿಶಾಲ ಪಾದಚಾರಿ ಮಾರ್ಗದೊಂದಿಗೆ ನೀರಿನ ಕೊಳವೆ, ಕೇಬಲ್ ಸಹಿತ ವಿವಿಧ ಯುಟಿಲಿಟಿ ಸೌಲಭ್ಯ ಕಲ್ಪಿಸಲಾಗುತ್ತದೆ. ಈ ಹೊಸ ಮಾರ್ಗದಲ್ಲಿ ಗಂಟೆಗೆ 100 ಕಿ.ಮೀ. ವೇಗದಲ್ಲಿ ಸಂಚರಿಸಬಹುದು. ಇದಲ್ಲದೆ ಭವಿಷ್ಯದಲ್ಲಿ ರೈಲು ಸಂಚರಿಸಲು ಸ್ಥಳಾವಕಾಶ ಕಾಯ್ದಿರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.