ಕೋವಿಡ್ 19: ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ
Team Udayavani, Jul 5, 2020, 6:37 AM IST
ಚಿಕ್ಕನಾಯಕನಹಳ್ಳಿ: ಕೋವಿಡ್ 19 ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂಬ ಭಯ ಬಿಟ್ಟರೆ ಕೋವಿಡ್ 19 ಬಂದರೆ ಸಾವನ್ನಪ್ಪುವ ಸಾಧ್ಯತೆ ಅತಿ ಕಡಿಮೆಯಾಗಿರು ತ್ತದೆ. ಅಧಿಕಾರಿಗಳು ಸಾರ್ವಜನಿಕರಿಗೆ ಕೋವಿಡ್ 19 ಬಗ್ಗೆ ಜಾಗೃತಿ ಮೂಡಿಸಿ ಧೈರ್ಯ ತುಂಬುವ ಕೆಲಸ ಮಾಡ ಬೇಕು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೋವಿಡ್ 19 ವೈರಸ್‌ಗೆ ಔಷಧಿ ವ್ಯಾಕ್ಸಿನೇಷನ್ ಇಲ್ಲವಾಗಿರುವುದ ರಿಂದ, ಕೋವಿಡ್ 19 ಪೀಡಿತ ರೋಗಿಗಳಿಗೆ ಯಾವುದೇ ಚಿಕಿತ್ಸೆ ನೀಡಲಾಗುವುದಿಲ್ಲ ಎಂದರು. ಒಂದು ವೇಳೆ ಆ ವ್ಯಕ್ತಿ ಹೃದಯ ಸಂಬಂಧಿ ರೋಗಗಳು, ಜ್ವರ, ತಲೆನೋವು, ಬಿ.ಪಿ. ಇತರೆ ರೋಗಗಳಿಂದ ಬಳಲುತ್ತಿದ್ದರೆ ಅಂಥ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ವಿನಃ ಯಾವುದೇ ಸಮಸ್ಯೆ ಇಲ್ಲದ ಕೋವಿಡ್ 19 ಪೀಡಿತನಿಗೆ ಚಿಕಿತ್ಸೆ ನೀಡಲಾಗುವುದಿಲ್ಲ.
ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಕೊಂಡರೆ ಕೋವಿಡ್ 19ದಿಂದ ಗುಣಮುಖರಾಗು ತ್ತಾರೆ. ಅನವಶ್ಯಕವಾಗಿ ಸಾರ್ವಜನಿಕರು ಭಯ ಬೀಳುತ್ತಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಂಡು ದಿನನಿತ್ಯದ ಕೆಲಸಗಳಲ್ಲಿ ತೊಡಗಿ ಕೊಳ್ಳಬೇಕು, ಅಧಿಕಾರಿಗಳು ಸಾರ್ವಜನಿಕರಿಗೆ ಕೋವಿಡ್ 19 ಬಗ್ಗೆ ತಿಳಿವಳಿಕೆ ನೀಡಿ ಧೈರ್ಯ ತುಂಬಬೇಕು ಎಂದು ಸೂಚಿಸಿದರು. ಡಿಸಾcರ್ಜ್ ಮಾಡಿದ ವ್ಯಕ್ತಿಗಳಿಗೆ ಕೋವಿಡ್ 19 ಪಾಸಿಟಿವ್ ಬಂದಿದೆ. ಇನ್ನೂ ವರದಿ ಬರದೇ ಯಾಕೆ ಅವರನ್ನು ಡಿಸಾರ್ಜ್ ಮಾಡಲಾಯಿತು.
ಇನ್ನೂ ಎರಡು ಮೂರು ದಿನ ಆಸ್ಪತ್ರೆಯಲ್ಲಿ ಇದ್ದಿದ್ದರೆ, ಆಕಾಶ ಕೆಳಗೆ ಬೀಳುತ್ತಿತ್ತಾ? ಪಾಸಿಟಿವ್ ಬಂದ ವ್ಯಕ್ತಿಗಳು ಓಡಾಡಿದ ಕಡೆ ಪರಿಶೀಲನೆ ಮಾಡಿ, ಸೀಲ್‌ಡೌನ್ ಪ್ರದೇಶದಲ್ಲಿನ ಜನರಿಗೆ ಅವಶ್ಯಕತೆ ಇದ್ದ ವಸ್ತುಗಳನ್ನು ಅವರಿಂದ ಹಣ ಪಡೆದು ಸರಬರಾಜು ಮಾಡಿ, ಸರ್ಕಾರದಿಂದ ಉಚಿತವಾಗಿ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.