ಜಿಲ್ಲೆಯಲ್ಲಿ ಕೊರೊನಾ ತಡೆಗೆ ಲಸಿಕಾ ಪ್ರಕ್ರಿಯೆ
Team Udayavani, Jan 11, 2022, 12:44 PM IST
ತುಮಕೂರು: ಜಿಲ್ಲೆಯಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದೆ. ಮೊದಲನೇ ಹಾಗೂ ಎರಡನೇ ಡೋಸ್ ನೀಡುವಲ್ಲಿ ವಿಳಂಬ ಮಾಡದೇ ಲಸಿಕಾ ಪ್ರಕ್ರಿಯೆಯನ್ನು ಶೇ.100ರಷ್ಟು ಸಾಧಿಸಬೇಕು ಎಂದು ಜಿಲ್ಲಾಧಿಕಾರಿವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ,ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಸಕ್ರಿಯ ಪ್ರಕರಣಗಳಸಂಖ್ಯೆ 200ರ ಗಡಿ ದಾಟಿದೆ. ಈ ಸಂದರ್ಭದಲ್ಲಿಲಸಿಕೆ ನೀಡುವಲ್ಲಿ ವಿನಾಕಾರಣ ಮುಂದೂಡದೆ ಲಸಿಕೆನೀಡಬೇಕು. ಎರಡನೇ ಡೋಸ್ ಲಸಿಕಾ ಪ್ರಕ್ರಿಯೆಶೇ.80ರಷ್ಟಾಗಿದ್ದು, ಲಸಿಕೆ ಪಡೆಯಲು ಹಿಂಜರಿಯುವನಿಗದಿತ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಿ, ಲಸಿಕೆಹಾಕಿಸಿಕೊಳ್ಳಲು ಮನವೊಲಿಸುವ ಮೂಲಕಶೀಘ್ರವಾಗಿ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ತಿಳಿಸಿದರು.
ಆರೋಗ್ಯ ಸ್ಥಿತಿ ಪರಿಶೀಲಿಸಿ: ಜಿಲ್ಲೆಯಲ್ಲಿರುವ ಹಾಸ್ಟೆಲ್‌ಗಳಲ್ಲಿ ಕೋವಿಡ್ ಪಾಸಿಟೀವ್ ಪ್ರಕರಣವರದಿಯಾದಲ್ಲಿ ಸೋಂಕಿತ ವಿದ್ಯಾರ್ಥಿಯನ್ನುಪ್ರತ್ಯೇಕ ಕೊಠಡಿಯಲ್ಲಿರಿಸಬೇಕು. ಪ್ರತಿದಿನ 2ಬಾರಿಯಂತೆ ವೈದ್ಯರು ಶಾಲೆ ಹಾಗೂ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ, ಆರೋಗ್ಯ ಸ್ಥಿತಿಯನ್ನುಪರಿಶೀಲಿಸುವುದರ ಜೊತೆಗೆ ಪ್ರಕರಣ ಕಂಡುಬಂದ ಕೂಡಲೇ ಶಾಲೆಯ ಎಲ್ಲರನ್ನೂ ಪರೀಕ್ಷೆ ಗೊಳಪಡಿಸಬೇಕು. ಪ್ರಕರಣ ವರದಿಯಾದ ದಿನದಿಂದ 7 ದಿನಗಳ ಕಾಲ ರಜೆ ಘೋಷಣೆ ಮಾಡಬೇಕು. ಪಾಸಿಟೀವ್ ಪ್ರಕರಣಗಳುಹೆಚ್ಚಾಗಿರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಬೇಕು ಹಾಗೂ ಪರೀಕ್ಷೆ ನಡೆಸಿರುವ ಕುರಿತು 2 ದಿನಗಳೊಳಗೆ ವರದಿನೀಡಬೇಕು. ಜಿಲ್ಲೆಯಲ್ಲಿ ಸ್ಥಾಪಿಸಿರುವ ಎಲ್ಲಾಆಕ್ಸಿಜ‚ನ್ ಘಟಕಗಳನ್ನು ಸಕ್ರಿಯ ಹಾಗೂಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ತಾಲೂಕು ವೈದ್ಯಾಧಿಕಾರಿಗಳಿಗೆ ನಿರ್ದೇಶಿಸಿದರು.
ದೋಷ ಬಗೆಹರಿಸಿಕೊಳ್ಳಿ: ಮಧುಗಿರಿ ತಾಲೂಕಿಗೆ ಬಂಧಿಖಾನೆ ಕಾಮಗಾರಿಗಾಗಿ ಸರ್ಕಾರಿ ಜಮೀನನ್ನು ಕೂಡಲೇ ಮಂಜೂರು ಮಾಡಬೇಕು. ಜಿಲ್ಲೆಯಲ್ಲಿ ಅತಿವೃಷ್ಟಿ ಸಂಬಂಧ ಪರಿಹಾರ ಪೋರ್ಟಲ್‌ಎಂಟ್ರಿಗಳು, ಭೂಮಿ ಪೆಂಡೆನ್ಸಿ, ಪೈಕಿ ಪಹಣಿಒಗ್ಗೂಡಿಸುವಿಕೆ, ಪಹಣಿ ಕಲಂ 3/9 ಮಿಸ್ ಮ್ಯಾಚ್, ಆಧಾರ್ ಸೀಡಿಂಗ್ ಸೇರಿದಂತೆ ಇತರೆ ಯಾವುದೇ ಪ್ರಕರಣಗಳಲ್ಲಿನ ತಾಂತ್ರಿಕ ದೋಷಗಳನ್ನು ಬಗೆಹರಿಸಿಕೊಂಡು ವಿನಾಃ ಕಾರಣ ಮುಂದೂಡದೆ ನಿಗದಿತಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸರಿಯಾಗಿ ಕರ್ತವ್ಯನಿರ್ವಹಿಸಿ: ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಅತಿವೃಷ್ಟಿಯಿಂದ ಸಂಭವಿಸಿದ ಮನೆ ಹಾನಿ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ನಿಗದಿಪಡಿಸಿರುವ ಎ, ಬಿ ಹಾಗೂ ಸಿ ಗ್ರೂಪ್‌ಗ್ಳಿಗೆ ಸೇರದ ಪ್ರಕರಣಗಳನ್ನು ಕೈಬಿಡ ಬೇಕು. ನೈಜ ಫಲಾನುಭವಿಗಳಿಗೆ ಶೀಘ್ರ ಪರಿಹಾರ ಚೆಕ್ ವಿತರಣೆ ಮಾಡಬೇಕು. ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದಲ್ಲಿ ಅಂತಹವರ ವಿರುದ್ಧ ಯಾವುದೇ ರೀತಿಯ ದೂರುಗಳು ಕೇಳಿಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾಅರಣ್ಯಾಧಿಕಾರಿ ಡಾ.ಎಸ್.ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನಾ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.