ನಕಲಿ ವೈದ್ಯ ದಂಪತಿ ನೀಡಿದ್ದ ಚಿಕಿತ್ಸೆಗೆ ಮಹಿಳೆ ಬಲಿ
ಮಂಡ್ಯದ ಮಂಜುನಾಥ್, ಉಡುಪಿಯ ವಾಣಿ ನಕಲಿ ವೈದ್ಯ ದಂಪತಿ
Team Udayavani, Apr 21, 2022, 7:48 AM IST
ನಕಲಿ ವೈದ್ಯ ದಂಪತಿ.
ತಿಪಟೂರು: ಮಕ್ಕಳಿಲ್ಲದ ದಂಪತಿಗೆ ಸಂತಾನ ಭಾಗ್ಯ ಕಲ್ಪಿಸುವುದಾಗಿ ಹಣ ಪಡೆದು ನಕಲಿ ವೈದ್ಯ ದಂಪತಿ ನೀಡಿದ್ದ ನಕಲಿ ಐವಿಎಫ್ (ಕೃತಕ ಗರ್ಭಧಾರಣೆ) ಚಿಕಿತ್ಸೆಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ತಾಲೂಕಿನ ನೊಣವಿನಕೆರೆ ಹೋಬಳಿ ಬೆಳಗರಹಳ್ಳಿಯಲ್ಲಿ ಸಂಭವಿಸಿದೆ.
ಬೆಳಗರಹಳ್ಳಿಯ ಮಲ್ಲಿಕಾರ್ಜುನ್ ಅವರ ಪತ್ನಿ ಮಮತಾ (34) ಮೃತ ದುರ್ದೈವಿ. 15 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಮಕ್ಕಳಿರಲಿಲ್ಲ.
ನಾಲ್ಕು ತಿಂಗಳು ಚಿಕಿತ್ಸೆ
ದಂಪತಿಯ ಬಗ್ಗೆ ಮಾಹಿತಿ ಪಡೆದುಕೊಂಡ ನಕಲಿ ವೈದ್ಯ ದಂಪತಿ, ಐವಿಎಫ್ ಚಿಕಿತ್ಸೆ ನೀಡುತ್ತೇವೆ ಎಂದು ನಂಬಿಸಿ ದಂಪ 4 ಲಕ್ಷ ರೂ. ಪಡೆದು 4 ತಿಂಗಳ ಕಾಲ ಅವೈಜ್ಞಾನಿಕವಾಗಿ ನಕಲಿ ಐವಿಎಫ್ ಚಿಕಿತ್ಸೆ ನೀಡಿದ್ದಾರೆ.
ಅನಂತರ ಗರ್ಭದಲ್ಲಿ ಮಗು ಬೆಳೆಯುತ್ತಿದೆ ಎಂದು ನಂಬಿಸಿ ಮತ್ತಷ್ಟು ಹಣ ಪಡೆದಿದ್ದಾರೆ. ಆದರೆ ಕೆಲವು ದಿನಗಳ ಬಳಿಕ ಮಮತಾಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆ ದಾಖಲಾದಾಗ ನಕಲಿಗಳ ಅಸಲಿ ಸತ್ಯ ಬಯಲಾಗಿ ಮಮತಾ ಗರ್ಭಿಣಿಯಾಗಿಲ್ಲ ಎಂಬುದು ತಿಳಿಯಿತು.
ಚಿಕಿತ್ಸೆ ಫಲಿಸದೆ ಸಾವು
ತೀವ್ರ ಅನಾರೋಗ್ಯಕ್ಕೆ ಒಳಗಾದ ಮಮತಾ ನಕಲಿ ಚಿಕಿತ್ಸೆ ಪರಿಣಾಮವಾಗಿ ಗರ್ಭಕೋಶ, ಕಿಡ್ನಿ, ಹೃದಯ ಹಾಗೂ ಮೆದುಳು ಸಂಬಂಧಿಸಿದ ಕಾಯಿಲೆಗೆ ತುತ್ತಾಗಿದ್ದು, ಬೆಂಗಳೂರು ಸೈಂಟ್ ಜಾನ್ ಆಸ್ಪತ್ರೆ ಹಾಗೂ ತುಮಕೂರಿನ ಶ್ರೀದೇವಿ ಆಸ್ಪತ್ರೆಯಲ್ಲಿ ಸತತ ಮೂರು ತಿಂಗಳು ಲಕ್ಷಾಂತರ ಖರ್ಚು ಮಾಡಿ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದ ಕಾರಣ ನಗರದ ಸರಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅಲ್ಲಿ ಶನಿವಾರ ಮೃತಪಟ್ಟಿದ್ದಾರೆ.
ಹಲವರಲ್ಲಿ ಆತಂಕ
ಮೃತ ಮಮತಾ ಜತೆ ಇದೇ ಗ್ರಾಮದ ಹಲವು ದಂಪತಿ ಈ ನಕಲಿ ವೈದ್ಯರಿಂದ ಐವಿಎಫ್ ಚಿಕಿತ್ಸೆ ಪಡೆದಿದ್ದು, ಅವರೆಲ್ಲರೂ ಆತಂಕಕ್ಕೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.