ಹೊರರೋಗಿಗಳ ಸಂಖ್ಯೆ ಇಳಿಮುಖ
Team Udayavani, Mar 22, 2020, 5:17 PM IST
ತುಮಕೂರು: ಜಗತ್ತಿನಾದ್ಯಂತ ಮಹಾಮಾರಿ ಕೋವಿಡ್ 19 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿಯೂ ಗಣನೀಯವಾಗಿ ಇಳಿಮುಖವಾಗಿದೆ.
ತಲ್ಲಣ ಮೂಡಿಸಿರುವ ವೈರಸ್ ರಾಜ್ಯದಲ್ಲೂ ಹರಡುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜನ ಜಾಗೃತಿ ಮೂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಕಾಯಿಲೆ ತೋರಿಸಲು ಆಸ್ಪತ್ರೆಗಳಿಗೆ ತೆರಳುತ್ತಿದ್ದ ರೋಗಿಗಳ ಸಂಖ್ಯೆ ತಾನಾಗಿಯೇ ಕ್ಷೀಣಿಸಿದೆ. ಸದಾ ಜನದಟ್ಟಣೆ ಜಾಸ್ತಿ ಇರುವ ಕಡೆ ಈ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜನಸಂಪರ್ಕ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಜನಸಾಮಾನ್ಯರೂ ಜನ ಸಂದಣಿ ಇರುವಲ್ಲಿ ಹೆಚ್ಚು ಸಮಯ ಬೆರೆಯಬಾರದು ಎಂಬ ಅಂಶ ಅರಿತಿರುವುದರಿಂದ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಗಣ ನೀಯವಾಗಿ ಇಳಿಕೆಯಾಗಿದೆ.
ಪ್ರತಿನಿತ್ಯ ಜಿಲ್ಲಾಸ್ಪತ್ರೆ ಹೊರ ರೋಗಿಗಳ ವಿಭಾಗಕ್ಕೆ 1,500 ರೋಗಿಗಳ ಬರುತ್ತಿದ್ದರು. ಹೊರ ರೋಗಿಗಳ ವಿಭಾಗದ ನೋಂದಣಿ ಕೌಂಟರ್‌ನಲ್ಲಿ ಐದಾರು ಸಾಲಿನಲ್ಲಿ ನೂರಾರು ಜನ ನೋಂದಣಿಗೆ ನಿಲ್ಲುತ್ತಿದ್ದರು. ಆದರೆ ಕೋವಿಡ್ 19 ಹರಡುತ್ತಿರುವ ಭೀತಿ ಹೆಚ್ಚುತ್ತಿರುವುದರಿಂದ ಅವಶ್ಯ ಇರುವ ರೋಗಿಗಳಷ್ಟೇ ಆಸ್ಪತ್ರೆಗೆ ಬರುತ್ತಿದ್ದಾರೆ.
ಕೋವಿಡ್ 19 ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಅವಶ್ಯವಿದ್ದರಷ್ಟೇ ಆಸ್ಪತ್ರೆಗೆ ಬನ್ನಿ, ಸಣ್ಣ ಪುಟ್ಟ ಕಾಯಿಲೆಗಳಿಗೆ ಬರಬೇಡಿ ಎಂದು ಆರೋಗ್ಯ ಇಲಾಖೆ ಅಪರ ಪ್ರಧಾನ ಕಾರ್ಯದರ್ಶಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ಬರುತ್ತಿದ್ದ ರೋಗಿಗಳ ಸಂಖ್ಯೆಯೂ ಗಣನೀಯವಾಗಿ ಇಳಿಮುಖವಾಗಿದೆ. ಅಗತ್ಯ ಇರುವ ರೋಗಿಗಳಷ್ಟೇ ಆಸ್ಪತ್ರೆಗೆ ಬರುತ್ತಿದ್ದಾರೆ. – ಡಾ.ಟಿ.ಎ.ವೀರಭದ್ರಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.