ಚೀಲಗಾನಹಳ್ಳಿ: ನೆರೆಸಂತ್ರಸ್ತರಿಗೆ ರಾಮಕೃಷ್ಣ ಸೇವಾಶ್ರಮದಿಂದ ಪರಿಹಾರ ಸಾಮಗ್ರಿ ವಿತರಣೆ
Team Udayavani, Aug 11, 2022, 5:32 PM IST
ಕೊರಟಗೆರೆ: ನೆರೆ ಸಂತ್ರಸ್ತರಿಗೆ ರಾಮಕೃಷ್ಣ ಸೇವಾಶ್ರಮ ಸುಮಾರು 35 ವರ್ಷಗಳಿಂದ ಸೇವೆ ಮಾಡಿಕೊಂಡು ಬರುತ್ತಿದೆ ಎಂದು ಪಾವಗಡದ ರಾಮಕೃಷ್ಣ ಸೇವಾಶ್ರಮ ಅಧ್ಯಕ್ಷ ಶ್ರೀ ಜಪಾನಂದ ಸ್ವಾಮೀಜಿ ತಿಳಿಸಿದರು.
ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ಅತೀವೃಷ್ಠಿಯಿಂದ ಹಾನಿಗೊಳಗಾದ 85 ಮನೆಗಳಿಗೆ ಪರಿಹಾರ ನೀಡಿ ಮಾತನಾಡಿ, ಕೊರಟಗೆರೆ ತಾಲೂಕಿನಲ್ಲಿ ಸಹ ಅತೀಯಾದ ಮಳೆಯಿಂದ ಹಲವಾರು ಮನೆಗಳು ಬಿದ್ದುಹೋಗಿದ್ದು, ಕೆಲವು ಮನೆಗಳಿಗೆ ನೀರು ನುಗ್ಗಿದೆ. ಈ ಭಾಗದ ಜನರು ಈ ನೆರೆಹಾವಳಿ ಬಗ್ಗೆ ಊಹೆ ಮಾಡಲು ಸಾಧ್ಯವಾಗಿಲ್ಲ ಹಾಗೂ ಇದಕ್ಕಾಗಿ ಇವರು ಮುಂಜಾಗೃತೆ ಕ್ರಮ ವಹಿಸಿಲ್ಲ. ಈ ತಕ್ಷಣ ಕೆಲವು ದಿನಗಳಿಂದ ಬಂದ ಧಾರಾಕಾರ ಮಳೆಗೆ ರೈತರು ಮತ್ತು ಬಡವರು ಸಂಕಷ್ಠ ಅನುಭವಿಸಿದ್ದಾರೆ. ಅಂತಹ ಜನರ ಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಮಕೃಷ್ಣ ಸೇವಾಶ್ರಮ ಸದಾ ಸಿದ್ದವಿರುತ್ತದೆ. ನಮ್ಮ ಈ ಕಾರ್ಯಕ್ಕೆ ಸದಾ ನಮ್ಮೊಂದಿಗೆ ಇರುವ ಇನ್ಫೋಸಿಸ್ ಮತ್ತು ರೆಡ್ ಕ್ರಾಸ್ ಸಂಸ್ಥೆಗೆ ಧನ್ಯವಾದಗಳನ್ನು ತಿಳಿಸುವುದಾಗಿ ಹೇಳಿದರು.
ಈ ಕಾರ್ಯಕ್ರಮಕ್ಕೆ ಕೊರಟಗೆರೆ ತಹಶೀಲ್ದಾರ್ ರವರು ನಮ್ಮೊಂದಿಗೆ ಸ್ವಯಂ ಅವರೇ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಕ್ರಮದಲ್ಲಿ ನಮ್ಮ ಜತೆಗೂಡಿರುವುದು ಅಪರೂಪದ ವಿಷಯವಾಗಿದೆ ಎಂದರು.
ತಹಶೀಲ್ದಾರ್ ನಾಹಿದಾ ಜಮ್ ಜಮ್ ಮಾತನಾಡಿ, ತಾಲೂಕಿನಲ್ಲಿ ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಹಾನಿಗೊಳಗಾದ ನೆರೆಸಂತ್ರಸ್ತರ ಮನೆಗಳಿಗೆ ಜಪಾನಂದ ಸ್ವಾಮೀಜಿಗಳು ಖುದ್ದಾಗಿ ಟರ್ಪಲ್, ಆಹಾರ ಧಾನ್ಯ, ಹೊದಿಕೆ, ಬಟ್ಟೆಗಳು ಹಾಗೂ ಔಷಧಿ ಕಿಟ್‌ಗಳನ್ನು ನೀಡುತ್ತಿದ್ದಾರೆ. ಈ ಸಮಯದಲ್ಲಿ ನೊಂದವರಿಗೆ ಇಂತಹ ಸ್ವಯಂ ಸೇವಾ ಸಂಘಗಳ ಸೇವೆಯು ಅತ್ಯಗತ್ಯವಾಗಿದೆ. ರಾಮಕೃಷ್ಣಾ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿಗಳು ಸಾಮಾಜಿಕ ಸೇವೆಗಳನ್ನು ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದು ಅವರಿಗೆ ನಮ್ಮ ತಾಲೂಕು ಆಡಳಿತದ ಪರವಾಗಿ ಧನ್ಯವಾದಗಳನ್ನು ತಿಳಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಪ.ಪಂ ಮುಖ್ಯಾಧಿಕಾರಿ ಭಾಗ್ಯಮ್ಮ, ಸದಸ್ಯರಾದ ಲಕ್ಷ್ಮೀನಾರಾಯಣ್, ನಾಗರಾಜು, ನಂದೀಶ್, , ಗ್ರಾಮ ಪಂಚಾಯತಿ ಅಧ್ಯಕ್ಷ ಮಲ್ಲಣ್ಣ, ಸದಸ್ಯ ರಮೇಶ್, ನರೇಂದ್ರಬಾಬು, ಕಂದಾಯ ಇಲಾಖೆಯ ಬಸವರಾಜು, ಪವನ್‌ಕುಮಾರ್, ರಾಕೇಶ್, ಸೇರಿದಂತೆ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.