ಭ್ರೂಣ ಲಿಂಗ ಪತ್ತೆ ವಿರುದ್ಧ ಕಠಿಣ ಕ್ರಮ

Team Udayavani, Dec 9, 2020, 5:51 PM IST

TK-TDY-1

ತುಮಕೂರು: ಪ್ರಸವಪೂರ್ವ ಲಿಂಗಪತ್ತೆ ಮಾಡುತ್ತಿರುವ ಸ್ಕ್ಯಾನಿಂಗ್‌ ಸೆಂಟರ್‌ಗಳ ವಿರುದ್ಧಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಮತ್ತುಕುಟುಂಬಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಎಚ್ಚರಿಕೆ ನೀಡಿದರು.

ಪ್ರಸವ ಪೂರ್ವ ಲಿಂಗಪತ್ತೆ ನಿಯಂತ್ರಣಕುರಿತ ಜಿಲ್ಲಾ ಮಟ್ಟದ ಸಲಹಾ ಸಮಿತಿಯಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 105 ಸ್ಕ್ಯಾನಿಂಗ್‌ ಸೆಂಟರ್‌ನೋಂದಣಿಯಾಗಿದ್ದು, ಅದರಲ್ಲಿ ಪ್ರಸ್ತುತ 95ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದೆ. ಆನ್‌ ಲೈನ್‌ ಬಾಲಿಕ ಸಾಫ್ಟವೇರ್‌ನಲ್ಲಿ ಎಲ್ಲಾ ಸ್ಕ್ಯಾನಿಂಗ್‌ ‌ಸೆಂಟರ್‌ಗಳ ನೋಂದಣಿ ಕುರಿತ ಮಾಹಿತಿ ಇರುತ್ತದೆ. ಸ್ಕ್ಯಾನಿಂಗ್‌ ಸೆಂಟರ್‌ಗಳ ವೈದ್ಯರಿಗೆ ಪಿಸಿಪಿಎನ್‌ಡಿಟಿ ಕಾಯ್ದೆ ಹಾಗೂ ಅನುಷ್ಠಾನದಬಗ್ಗೆ ತರಬೇತಿ ನೀಡಲಾಗಿದೆ ಎಂದರು.

ಸೆಂಟರ್‌ಗಳು ಫಾರಂ-ಎಫ್ ಅನ್ನು ಅಪ್‌ ಲೋಡ್‌ ಮಾಡುತ್ತಿದ್ದು, ಇದರಿಂದ ಮಾನಿಟರಿಂಗ್‌ ಮಾಡಲು ಅನುಕೂಲವಾಗಿದೆ. ಎಲ್ಲಾಸ್ಕ್ಯಾನಿಂಗ್‌ ಸೆಂಟರ್‌ಗಳಿಗೆ ಜಿಲ್ಲಾ ತಪಾಸಣಾ ಹಾಗೂ ಮೇಲ್ವಿಚಾರಣಾ ಸಮಿತಿ ಅನಿರೀಕ್ಷಿತ ಭೇಟಿ ನೀಡಿ ನ್ಯೂನತೆಗಳ ಬಗ್ಗೆ ಪರಿಶೀಲಿಸಿದೆ. ಅಲ್ಲದೆ ನಿಯಮ ಮೀರಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್‌ಸೆಂಟರ್‌ಗಳ ವಿರುದ್ಧ ಕಾಯ್ದೆ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದರು. ಪ್ರತಿ ಮಾಹೆಯ ಮಾಸಿಕ ಸಭೆಗಳಲ್ಲಿ ವೈದ್ಯಾಧಿಕಾರಿಗಳಿಗೆ ಸಿಬ್ಬಂದಿಯವರಿಗೆ ಹಾಗೂ ಆಶಾಕಾರ್ಯಕರ್ತೆಯರಿಗೆ ಪಿಸಿಪಿಎನ್‌ಡಿಟಿ ಕಾಯ್ದೆಯ ಬಗ್ಗೆ ಜನರಿಗೆಅರಿವು ಮೂಡಿಸುವಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಗರ್ಭಧಾರಣೆ ಮತ್ತು ಪ್ರಸವ ಪತ್ತೆ ತಂತ್ರ ವಿಧಾನಗಳ ಲಿಂಗ ಆಯ್ಕೆಯ ನಿಷೇಧ ಅಧಿ ನಿಯಮ, 1994 ಕಾಯ್ದೆ ಅಡಿ ಪ್ರಸವ ಪೂರ್ವ ಲಿಂಗ ಪತ್ತೆಯಲ್ಲಿ ತೊಡಗಿರುವ ಸ್ಕ್ಯಾನಿಂಗ್‌ ಸೆಂಟರ್‌ಗಳು, ಅಕ್ರಮವಾಗಿ ಸ್ಕ್ಯಾನಿಂಗ್‌ ಮೆಷಿನ್‌ ಮಾರಾಟ ಮಾಡುತ್ತಿರುವವರ, ಪೋರ್ಟಬಲ್‌ ಸ್ಕ್ಯಾನಿಂಗ್‌ ಮೆಷಿನ್‌ ಅನ್ನು ತಂದು ರಾತ್ರಿ ಸಮಯದಲ್ಲಿ ಸ್ಕ್ಯಾನ್ ಮಾಡುತ್ತಿರುವವರ ಬಗ್ಗೆ ನಿಗಾವಹಿಸಲು ತಿಳಿಸಲಾಗಿದೆ. ಮಾಹಿತಿಯನ್ನು ನೀಡಿದವರಹೆಸರನ್ನು ಗೌಪ್ಯವಾಗಿಡಲಾಗುವುದು ಎಂದರು.

ಅಕ್ರಮ ಲಿಂಗ ಪತ್ತೆ ಹಚ್ಚುವ ಸ್ಕ್ಯಾನಿಂಗ್‌ ಸೆಂಟರ್‌ಗಳ ವಿರುದ್ಧ ಸ್ವಯಂ ಪ್ರೇರಿತವಾಗಿ ಗುಪ್ತಕಾರ್ಯಾಚರಣೆಗೆ ಸಹಕರಿಸಲು ಸಿದ್ಧವಿರುವವರ ಮಾಹಿತಿಯನ್ನು ಸಮಿತಿಗೆ ಅಥವಾ ಆರೋಗ್ಯ ಇಲಾಖೆಗೆ ನೀಡಬಹುದು ಎಂದು ತಿಳಿಸಿದರು.ಸಮಿತಿಯ ಅಧ್ಯಕ್ಷರಾದ ಡಾ.ಶಿವರಾಜ್‌ಪ್ರಸೂತಿ ತಜ್ಞರು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹಿಮಾ, ಮಕ್ಕಳ ತಜ್ಞೆ ಡಾ. ಮುಕ್ತಾಂಬ,ವಕೀಲರಾದ ಕುಮಾ ರಸ್ವಾಮಿ, ರಾಣಿ ಚಂದ್ರಶೇಖರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್‌ ಡಿ. ಮತ್ತಿತರು ಹಾಜರಿದ್ದರು.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.