ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ ಆತಂಕ ಬೇಡ
ವಿದ್ಯಾರ್ಥಿಗಳು ಹತಾಶರಾಗದೆ ಅಧ್ಯಯನಶೀಲರಾಗಿ: ಶಿಕ್ಷಣ ಸಚಿವ ಸುರೇಶ್‌ಕುಮಾರ್
Team Udayavani, Apr 23, 2020, 4:54 PM IST
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಸಂವಾದ ನಡೆಸಿದರು.
ತುಮಕೂರು: ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತದೆ ಹತಾಶರಾಗದೆ ಪರೀಕ್ಷೆ ಬರೆಯಲು ನಿರಂತರ ಅಧ್ಯಯನಶೀಲರಾಗಿರಿ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶ್ರೀಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಬುಧವಾರ ಭೇಟಿನೀಡಿ ಶ್ರೀಗಳ ಆಶೀರ್ವಾದ ಪಡೆದು ನಂತರ ವಸತಿ ಶಾಲೆಯಲ್ಲಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಮೇ 3ರ ನಂತರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ತೆಗೆದು ಕೊಳ್ಳಲಾಗುತ್ತದೆ ಎಂದರು.
ಶ್ರೀ ಮಠದಲ್ಲಿ 1,320 ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇರುವುದನ್ನು ಖಚಿತಪಡಿಸಿಕೊಂಡು ಈ ವಿದ್ಯಾರ್ಥಿಗಳ ಲ್ಲಿರುವ ಸಂಶಯ ಮತ್ತು ಸಂದೇಹಗಳಿಗೆ ಪರಿ
ಹಾರ ಸೂಚಿಸುವ ಸಲುವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರಲ್ಲಿ ಆತ್ಮಸ್ಥೆçರ್ಯ ತುಂಬುವುದರ ಜೊತೆಗೆ ಉತ್ಸಾಹದಿಂದ ಓದಿನಲ್ಲಿ ಪ್ರವೃತ್ತರಾಗುವಂತೆ
ಮನವೊಲಿಸುವ ಸಲುವಾಗಿ ಮಠಕ್ಕೆ ಭೇಟಿ ನೀಡಿದ್ದೇನೆಂದು ತಿಳಿಸಿದರು.
ರಾಜ್ಯದಲ್ಲಿ 8.50 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವವರಿದ್ದು, ಅವ ರೊಂದಿಗೆ ಪೋನ್‌ಇನ್ ಕಾರ್ಯಕ್ರಮದ ಮೂಲಕ ನೇರವಾಗಿ ಮಾತನಾಡಿ ವಿದ್ಯಾರ್ಥಿ
ಗಳಲ್ಲಿ ಆತ್ಮಸ್ಥೆçರ್ಯ ತುಂಬುವುದರ ಜೊತೆಗೆ ಪರೀಕ್ಷೆ ನಡೆಯುವವರೆಗೆ ಸಂಯಮ ಕಾಪಾಡಿಕೊಳ್ಳಲು ಧೈರ್ಯ ಹೇಳಲಾಗುತ್ತಿದೆ. ತಡವಾದರೂ ವಿದ್ಯಾರ್ಥಿಗಳಿಗೆ ಕಾಲಾವಕಾಶ ನೀಡಿ ಹಾಗೂ ಪರೀಕ್ಷೆಯ ಮುನ್ನ ಪುನರ್ ಮನನ ತರಗತಿಗಳನ್ನು ನಡೆಸಿ ಪರೀಕ್ಷೆ ನಡೆಸುವ ದಿನವನ್ನು ಸರ್ಕಾರ ಶಿಕ್ಷಣ ಇಲಾಖೆಯ ಮೂಲಕ ಪ್ರಕಟಿಸಲಿದೆ ಎಂದುರು.
ದೂರದರ್ಶನ ಚಂದನವಾಹಿನಿಯಲ್ಲಿ 2-3 ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಕುರಿತು ವಿಷಯಾಧಾರಿತ ಸರಣಿ ಮಾಲೆಯಲ್ಲಿ ಪ್ರಸಾರಪಡಿಸಲಾಗುವುದು. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಅವುಗಳಿಗೆ ಉತ್ತರಿಸುವ ಅಭ್ಯಾಸ ಮಾಡುತ್ತಿರಬೇಕೆಂದು ಸಲಹೆ ನೀಡಿದರು.
ಸರ್ಕಾರ ನಿರ್ಧಾರ ಪ್ರಕಟಿಸುವ ಮೊದಲು ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳುವುದು ಅಥವಾ ಶುಲ್ಕ ಪಡೆಯುವುದು ಸಮಂ ಜಸವಲ್ಲವೆಂದು, ಪ್ರಸಕ್ತ ಸಮಯದಲ್ಲಿ ಸಮಾಜದ ಎಲ್ಲಾ ತರಹದ ಜನರ ಆರ್ಥಿಕ ಸ್ಥಿತಿ ಜರ್ಜರಿತವಾಗಿದ್ದು, ಇದನ್ನು ಗಮನ ದಲ್ಲಿಟ್ಟುಕೊಂಡು ಶಾಲಾ ಶುಲ್ಕ ವಿಧಿಸುವ ಬಗ್ಗೆ ಸರ್ಕಾರ ಚರ್ಚಿಸಿ ತೀರ್ಮಾನ ಕೈಗೊಂಡು ಪ್ರಕಟಿಸಲಿದೆ ಎಂದು ಹೇಳಿದರು.
ಶಿಕ್ಷಣ ಇಲಾಖೆ ಆಯುಕ್ತ ಡಾ. ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪ್ರಶ್ನೆಪತ್ರಿಕೆಗಳಿಗೆ ಸೀಮಿತವಾಗಿ ಅಧ್ಯಯನ ಮಾಡದೇ ಇಡೀ ಪಠ್ಯಪುಸ್ತಕವನ್ನು ಅರ್ಥ ಮಾಡಿಕೊಳ್ಳುವ ರೀತಿಯಲ್ಲಿ ಅಭ್ಯಾಸ ನಡೆಸಿ ಪರೀಕ್ಷೆ ಯಾವಾಗಲಾದರೂ ನಡೆಯಲಿ ಅದಕ್ಕೆ ನಾವು ಸಿದ್ಧರಾಗಿದ್ದೇವೆ ಎಂಬ ಮನೋಸ್ಥೈರ್ಯ ಮತ್ತು ಆತ್ಮವಿಶ್ವಾಸವನ್ನು ರೂಢಿಸಿಕೊಳ್ಳುವಂತೆ ತಿಳಿಸಿದರು.
ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕಾಮಾಕ್ಷಮ್ಮ ಹಾಗೂ ರೇವಣಸಿದ್ಧಪ್ಪ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.