ನಡೆದಾಡುವ ದೇವರ ಜನ್ಮದಿನ ಸಂಭ್ರಮ
Team Udayavani, Apr 2, 2018, 6:00 AM IST
ತುಮಕೂರು: ನಡೆದಾಡುವ ದೇವರು ಸಿದ್ಧಗಂಗಾ ಶ್ರೀ ಡಾ.ಶಿವಕುಮಾರ ಸ್ವಾಮೀಜಿ 110 ವಸಂತಗಳನ್ನು ಪೂರೈಸಿ 111 ನೇ ವರ್ಷಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಭಾನುವಾರ ನಗರದ ಎಲ್ಲಾ ಭಾಗಗಳಲ್ಲಿ ಸಂಭ್ರಮದಿಂದ ಜನ್ಮದಿನೋತ್ಸವವನ್ನು ಆಚರಿಸಲಾಯಿತು.
ನಾಡಿನ ವಿವಿಧ ಮಠಾಧೀಶರು, ರಾಜಕೀಯ ಮುಖಂಡರು, ಅಧಿಕಾರಿಗಳು ಸೇರಿದಂತೆ ಲಕ್ಷಾಂತರ ಸಂಖ್ಯೆಯ ಭಕ್ತರು ಮಠಕ್ಕೆ ಆಗಮಿಸಿ, ಶ್ರೀಗಳಿಗೆ ಗುರುವಂದನೆ ಸಲ್ಲಿಸಿದರು.
ಶ್ರೀಗಳಿಂದ ಶಿವಪೂಜೆ: ಸಿದ್ಧಗಂಗಾ ಶ್ರೀಗಳು ಈವರೆಗೆ ಬೆಳಗಿನ ಜಾವ 3 ಗಂಟೆಗೆ ಎದ್ದು 5 ಗಂಟೆಯೊಳಗೆ ಶಿವಪೂಜೆ ಮಾಡುತ್ತಿದ್ದರು. ಆದರೆ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 6.30ಕ್ಕೆ ಎದ್ದ ಶ್ರೀಗಳು, ನಂತರ ತಮ್ಮ ನಿತ್ಯ ಕರ್ಮಗಳನ್ನು ಮುಗಿಸಿ ಶಿವಪೂಜೆಯಲ್ಲಿ ಭಾಗವಹಿಸಿ ಇಷ್ಠಲಿಂಗ ಪೂಜೆ ನೆರವೇರಿಸಿದರು.
ಈ ವೇಳೆ ಆನೆ ಲಕ್ಷ್ಮೀ, ಶ್ರೀಗಳಿಗೆ ಹೂವಿನ ಮಾಲೆ ಹಾಕುವ ಮೂಲಕ ಶುಭ ಕೋರಿತು. ಮಠದ ಆವರಣದಲ್ಲಿನ ಉತ್ಸವ ಮಂಟಪಕ್ಕೆ ಸುಮಂಗಲಿಯರ 111 ಕಲಶದ ಮೆರವಣಿಗೆಯೊಂದಿಗೆ ಬಂದ ಶ್ರೀಗಳು, ಬೆಳ್ಳಿ ಸಿಂಹಾಸನ ಅಲಂಕರಿಸಿದರು.
ಆನಂತರ ವಿವಿಧ ಮಠಗಳ ಶ್ರೀಗಳಿಂದ ಮಠದ ಆವರಣದಲ್ಲಿ ಸಾಮೂಹಿಕ ಪಾದಪೂಜೆ ನಡೆಯಿತು. ಸಿದ್ಧಗಂಗಾ ಮಠಾಧ್ಯಕ್ಷ, ಕಿರಿಯ ಶ್ರೀಗಳಾದ ಶ್ರೀ ಸಿದ್ಧಲಿಂಗಸ್ವಾಮೀಜಿ ನೇತೃತ್ವದಲ್ಲಿ ಸಿದ್ಧಗಂಗೆಯ ಶಾಖಾ ಮಠದ ಸ್ವಾಮೀಜಿ, ವಿವಿಧ ಮಠಗಳ ಪೀಠಾಧ್ಯಕ್ಷರುಗಳು ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರಿಗೆ ಪಾದಪೂಜೆ ನೆರವೇರಿಸಿ, ನೀರಾಂಜನವೆತ್ತಿ ಪುಷ್ಪವೃಷ್ಟಿಗೈದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.