ತೆನೆಹೊತ್ತ ಮಹಿಳೆಗೆ ಪಾಲಿಕೆ ಪಟ್ಟ…

Team Udayavani, Mar 5, 2017, 4:50 PM IST

Protest in Manipal.jpg

ತುಮಕೂರು: ತುಮಕೂರು ಮಹಾನಗರಪಾಲಿಕೆಯ ಮೇಯರ್‌, ಉಪಮೇಯರ್‌ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಮೇಯರ್‌ ಆಗಿ ಜೆಡಿಎಸ್‌ ನ ಎಚ್‌.ರವಿಕುಮಾರ್‌, ಉಪಮೇಯರ್‌ ಆಗಿ ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಸದಸ್ಯೆ ಫ‌ಜಾìನಾ ಖಾನಂ ಅವಿರೋಧ ಆಯ್ಕೆಯಾದರು. ನಗರದ ಮಹಾನಗರಪಾಲಿಕೆ ಸಭಾಂಗಣದಲ್ಲಿ ನಡೆದ 4ನೇ ಅವಧಿಯ ಮುಂದಿನ ಒಂದು ವರ್ಷಕ್ಕೆ ಮೇಯರ್‌ ಮತ್ತು ಉಪಮೇಯರ್‌ ಹಾಗೂ ನಾಲ್ಕು ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಿತು. 

ಬೆಂಗಳೂರು ವಿಭಾಗೀಯ ಕಾರ್ಯದರ್ಶಿ ಎಂ.ವಿ.ಜಯಂತಿ ಅವರು ಚುನಾವಣಾಧಿ ಕಾರಿಗಳಾಗಿದ್ದ ಮೇಯರ್‌, ಉಪಮೇಯರ್‌ ಮತ್ತು ಸ್ಥಾಯಿಸಮಿತಿ ಸದಸ್ಯರ ಆಯ್ಕೆಗೆ ಬೆಳಗ್ಗೆ 11.30ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಿದ್ದರು. ಮೇಯರ್‌ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಉಪಮೇಯರ್‌ ಸ್ಥಾನ ಬಿಸಿಎಂ ಎ ಗೆ ಮೀಸಲಾಗಿದ್ದು, ಈ ಮೀಸಲಾತಿಗೆ ಸಂಬಂಧಿಸಿದಂತೆ ಜೆಡಿಎಸ್‌ನ ಎಚ್‌.ರವಿಕುಮಾರ್‌ ಮಾತ್ರ ನಾಮಪತ್ರ ಸಲ್ಲಿಸಿದರು. ಹೀಗಾಗಿ ಮೇಯರ್‌ ಪಟ್ಟ ಅನಾಯಾಸವಾಗಿ ಒಲಿದು ಬಂದಿತು.

ಇನ್ನು ಉಪಮೇಯರ್‌ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಸದಸ್ಯೆ ಫ‌ಜಾìನಾ ಖಾನಂ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರೂ ಅವಿರೋಧ ಆಯ್ಕೆಯಾದರು.
ತುಮಕೂರು ಮಹಾನಗರಪಾಲಿಕೆಯಲ್ಲಿ ಕಳೆದ 3 ಅವಧಿಯಲ್ಲೂ ಕಾಂಗ್ರೆಸ್‌, ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಒಂದು ಅವಧಿ ಅಧಿಕಾರ ಮಾಡಿದರು. ಕಳೆದ ಮೇಯರ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿತ್ತು. ಕಳೆದ ಅವಧಿಯಲ್ಲೂ ಜೆಡಿಎಸ್‌, ಕಾಂಗ್ರೆಸ್‌, ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿತ್ತು.

ಈಗ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಮೂರು ಪಕ್ಷಗಳೂ ಒಟ್ಟಾಗಿ ಮೇಯರ್‌, ಉಪಮೇಯರ್‌ ಮತ್ತು ಸ್ಥಾಯಿ ಸಮಿತಿಗಳ ಸದಸ್ಯರನ್ನು ಅವಿರೋಧ ಆಯ್ಕೆ ಮಾಡಿವೆ.  ಮಹಾನಗರಪಾಲಿಕೆ 4 ಸ್ಥಾಯಿ ಸಮಿತಿ ಸದಸ್ಯರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಸದಸ್ಯರು ಒಗ್ಗಟ್ಟಾಗಿ ಎಲ್ಲಾ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದರು. 

 ಈ ವೇಳೆ ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್‌, ಅಪರ ಜಿಲ್ಲಾಧಿಕಾರಿ ಸಿ.ಅನಿತಾ, ಪಾಲಿಕೆ ಆಯುಕ್ತ ಅಷಾದ್‌ ಷರೀಫ್ ಉಪಸ್ಥಿತರಿದ್ದರು. ಚುನಾವಣೆಯಲ್ಲಿ ಮೇಯರ್‌ ಆಗಿ ಆಯ್ಕೆಯಾದ ಎಚ್‌.ರವಿಕುಮಾರ್‌ ಹಾಗೂ ಉಪಮೇಯರ್‌ ಫ‌ಜಾìನಾ ಖಾನಂ ರನ್ನು ಶಾಸಕ ಡಾ.ಎಸ್‌.ರಫೀಕ್‌ ಅಹಮದ್‌, ಸಂಸದ ಎಸ್‌.ಪಿ.ಮುದ್ದಹನುಮೇಗೌಡ, ಅಧಿಕಾರಿಗಳು ಅಭಿನಂದಿಸಿದರು. ಚುನಾವಣೆ ನಂತರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.  

ಟಾಪ್ ನ್ಯೂಸ್

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.