ರಾಜಕೀಯ ಪ್ರಾತಿನಿಧ್ಯಕ್ಕೆ ಆದಿಜಾಂಬವರ ಆಗ್ರಹ


Team Udayavani, Apr 13, 2018, 12:48 PM IST

Idukki.jpg

ಮಧುಗಿರಿ: ರಾಜ್ಯದಲ್ಲಿ ಸುಮಾರು 56 ಲಕ್ಷಕ್ಕೂ ಅಧಿಕವಿರುವ ಆದಿಜಾಂಬವ ಜನಾಂಗದ ಪರವಾಗಿ ದನಿ ಎತ್ತುವರನ್ನು ಈ ಬಾರಿ ಚುನಾವಣೆಯಲ್ಲಿ ಆಯ್ಕೆ ಮಾಡಿ ಎಂದು  ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜಾಧ್ಯಕ್ಷ ಪರಶುರಾಮ ಎನ್‌. ಮರೇಗುದ್ದಿ ಹೇಳಿದರು.

ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಬೀದರ್‌ ಜಿಲ್ಲೆಯ ಔರಾದ್‌ ಮೀಸಲು ಕ್ಷೇತ್ರದಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನವರಗೆ ಮಾದಿಗ ಮೀಸಲಾತಿ ಹೋರಾಟ ಸಮಿತಿಯು ಹಮ್ಮಿಕೊಂಡಿರುವ ಮಾದಿಗರ ಮತಜಾಗೃತಿ ಅಭಿಯಾನ ಬೈಕ್‌ ರ್ಯಾಲಿಗೆ ಸ್ವಾಗತಿಸಿದ ಸಮುದಾಯದವರಿಗೆ ಕೃತಜ್ಞತೆ ಸಲ್ಲಿಸಿದರು.

ನ್ಯಾ.ಎ.ಜೆ.ಸದಾಶಿವ ಆಯೋಗದ ಜಾರಿಯಿಂದ ನಮ್ಮ ಜನಾಂಗಕ್ಕೆ ಸಾಮಾಜಿಕನ್ಯಾಯ ದೊರೆಯುತ್ತದೆ.  ಆಯೋಗದ ವರದಿ ಜಾರಿಗಾಗಿ ನಮ್ಮನ್ನು ಬೆಂಬಲಿಸುವ ರಾಜಕಾರಣಿಗಳನ್ನು ಆಯ್ಕೆ ಮಾಡಬೇಕು ಎಂದರು.  

ಸಮಿತಿಯ ಜಿಲ್ಲಾಧ್ಯಕ್ಷ ಸತ್ಯಪ್ಪ ಮಾತನಾಡಿ, ಕೇವಲ ನಮ್ಮ ಜನಾಂಗವನ್ನು ಓಟಿಗಾಗಿ ಬಳಸಿಕೊಳ್ಳುವ ರಾಜಕಾರಣಿಗಳನ್ನು ದೂರವಿಟ್ಟು ನಮಗೆ ಉತ್ತಮ ಸ್ಥಾನ-ಮಾನ ನೀಡಿ ಬದುಕಲು ಅವಕಾಶ ನೀಡುವವರನ್ನು ಈ ಬಾರಿ ಕೈ ಹಿಡಿಯೋಣ ಮತ್ತು ನಮ್ಮ ಪ್ರಾಣ ಇರುವವರೆಗೂ ನಮ್ಮ ಹಕ್ಕಿಗಾಗಿ ಹೋರಾಡೋಣ ಎಂದರು.

ಆಂದಿಜಾಂಬವ ಮಹಾಸಭಾ ತಾಲೂಕು ಅಧ್ಯಕ್ಷ ಮಹರಾಜು ಮಾತನಾಡಿ ನಮಗೂ ಎಲ್ಲರಂತೆ ಬದುಕಲು ಅವಕಾಶ ಕೊಡಿ ಎಂದರು. ದಸಂಸ ಮುಖಂಡ ದೊಡ್ಡೇರಿ ಕಣಿಮಯ್ಯ ಮಾತನಾಡಿ, ಕೇವಲ ಚುನಾವಣೆಗಳು ಬಂದಾಗ ಮಾತ್ರ ನಮ್ಮನ್ನು ರಾಜರಂತೆ ಕಂಡು ಅಧಿಕಾರ ಸಿಕ್ಕ ನಂತರ ನಮ್ಮನ್ನೇ ಒಡೆದು ಆಳುವ ನೀತಿ ಬಿಟ್ಟುಬಿಡಿ. ನಮ್ಮನ್ನು ಉದ್ದಾರ ಮಾಡುವ ವ್ಯಕ್ತಿಯನ್ನು ಅಧಿಕಾರಕ್ಕೆ ತರುವ ಬಗ್ಗೆ ಎಲ್ಲರೂ ಒಗ್ಗಟ್ಟಾಗಿ ಎಂದರು.

ಸಮಿತಿಯ ಪಾವಗಡ ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಬಾಗಲಕೋಟೆಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹನುಮಂತ ಸೀಮೇಕೇರಿ, ರಾಜ್ಯ ಕಾರ್ಯದರ್ಶಿ ಸೋಮುಚೂರಿ, ತಾಲೂಕು ಮುಖಂಡ ಸಂಜೀವಯ್ಯ ಇನ್ನಿತರರು ಮಾತನಾಡಿದರು.

ತಾಲೂಕು ಸಮುದಾಯದ ಮುಖಂಡರಾದ ಪೋಸ್ಟ್‌ ಮರಿಯಣ್ಣ, ಅಖೀಲ್‌ಮಾದರ್‌, ಬಾಲಕೃಷ್ಣ, ರಂಗನಾಥ್‌, ಎಸ್‌.ಕೆ. ಅಶ್ವತ್ಥಪ್ಪ, ಕೃಷ್ಣಪ್ಪ, ಕಸಾಪುರ ರಮೇಶ್‌, ಮಂಜುನಾಥ, ನೀರಕಲ್‌ ನಾಗೇಶ್‌, ಶ್ರೀರಾಮ್‌,ಅಡವೀಶ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

hejjenu

Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.