ಇವಿಎಂ ಕೂಡ “ಮಾಹಿತಿ’!
Team Udayavani, Feb 25, 2019, 12:30 AM IST
ಹೊಸದಿಲ್ಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ) ಕೂಡ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯಲ್ಲಿ “ಮಾಹಿತಿ’ ಎಂದು ಪರಿಗಣಿಸಲ್ಪಟ್ಟಿದ್ದು, ಅಗತ್ಯವಿದ್ದರೆ ಅರ್ಜಿದಾರನು 10 ರೂ.ಗಳನ್ನು ನೀಡಿ ಇವಿಎಂ ಅನ್ನು ಪಡೆಯಬಹುದಾಗಿದೆ ಎಂದು ಕೇಂದ್ರ ಮಾಹಿತಿ ಆಯೋಗ ತಿಳಿಸಿದೆ.
ಯಾರಾದರೂ ಇವಿಎಂ ಕುರಿತು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದರೆ, ಇವಿಎಂ ಅನ್ನು ಅರ್ಜಿದಾರನಿಗೆ ನೀಡುವ ಅಥವಾ ಸೂಕ್ತ ಕಾರಣಗಳನ್ನು ನೀಡಿ ಅದನ್ನು ನಿರಾಕರಿಸುವ ಅಧಿಕಾರ ಚುನಾವಣಾ ಆಯೋಗಕ್ಕಿರುತ್ತದೆ. ನಿರಾಕರಿಸಿದರೆ, ಅದನ್ನು ಪ್ರಶ್ನಿಸಿ ಸಿಐಸಿ ಮೆಟ್ಟಿಲೇರುವ ಅವಕಾಶವೂ ಅರ್ಜಿದಾರನಿಗಿದೆ ಎಂದು ಆಯೋಗ ತಿಳಿಸಿದೆ. ಇತ್ತೀಚೆಗೆ ಅರ್ಜಿದಾರರೊಬ್ಬರು ಇವಿಎಂವೊಂದನ್ನು ಕೋರಿ ಚುನಾವಣಾ ಆಯೋಗಕ್ಕೆ ಆರ್ಟಿಐ ಅಡಿ ಅರ್ಜಿ ಸಲ್ಲಿಸಿದ್ದರು. ಆದರೆ, ಇವಿಎಂ “ಮಾಹಿತಿ’ ವ್ಯಾಪ್ತಿಗೆ ಬರಲ್ಲ ಎಂದು ಹೇಳಿ ಆಯೋಗವು ಅರ್ಜಿಯನ್ನು ನಿರಾಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.