ಎಸ್ಮಾ ಜಾರಿ, ಬಂಧನ ಭೀತಿ: ಮನೆ ತೊರೆದ ಸಾರಿಗೆ ಸಂಸ್ಥೆಯ ನೌಕರರು
ಅಧಿಕಾರಿಗಳ ಮನವೊಲಿಕೆ ವಿಫಲ: ಎರಡನೇ ದಿನಕ್ಕೆ ಮುಂದುವರಿದ ಮುಷ್ಕರ
Team Udayavani, Apr 9, 2021, 9:04 PM IST
ಕುಣಿಗಲ್: ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ 2ನೇ ದಿನಕ್ಕೆ ಮುಂದುವರಿದಿದ್ದು, ವಿಪ್ ಜಾರಿ ಮಾಡಿ ಬಂಧಿಸಲಿದ್ದಾರೆ ಎಂಬ ಭೀತಿಯಿಂದ ಹಲವು ನೌಕರರು ಮನೆ ತೊರೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಾಗಿ ಒತ್ತಾಯಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಕುಣಿಗಲ್ ತಾಲೂಕು ಸಾರಿಗೆ ಸಂಸ್ಥೆಯ ಘಟಕದ ನೌಕರರು ಗುರುವಾರವೂ ಕೆಲಸಕ್ಕೆ ಹಾಜರಾಗಿರಲಿಲ್ಲ. ಈ ನಿಟ್ಟಿನಲ್ಲಿ ಘಟಕದ ವ್ಯವಸ್ಥಾಪಕ ಮಂಜುನಾಥ್ ಆದಿಯಾಗಿ ಅಧಿಕಾರಿಗಳು ಸಂಸ್ಥೆಯ ವಸತಿ ಗೃಹದಲ್ಲಿ ವಾಸವಾಗಿರುವ ನೌಕರರ ಮನೆಗೆ ಬರಲಿದ್ದಾರೆ ಎಂಬ ವಿಷಯ ತಿಳಿದ ನೌಕರರು ಎಸ್ಮಾ ಜಾರಿ ಮಾಡಿ ಬಂಧಿಸಲಿದ್ದಾರೆ ಎಂಬ ಭೀತಿಯಿಂದ ಮನೆ ತೊರೆದು ಬೇರೆಡೆಗೆ ತೆರಳಿದರು.
ತರಾಟೆ: ಘಟಕದ ವ್ಯವಸ್ಥಾಪಕ ಮಂಜುನಾಥ್ ಮತ್ತು ಅವರ ಅಧಿಕಾರಿಗಳ ತಂಡ ಗುರುವಾರ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಗೆ ತೆರಳಿ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರ ಮನವೊಲಿಸಲು ಪ್ರಯತ್ನಿಸಿದರು. ಆದರೆ, ಗರಂ ಆದ ನೌಕರರ ಕುಟುಂಬಸ್ಥರು, ನಿಮಗೆ ಸರ್ಕಾರ ಸಾಕಷ್ಟು ಸಂಬಳ ಕೊಡುತ್ತಿದೆ. ನಮಗೇನು ಕೊಡುತ್ತಿದ್ದಾರೆ. ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ ಎಂದು ತರಾಟೆ ತೆಗೆದುಕೊಂಡರು. ಇದು ಹೀಗೆ ಮುಂದುವರಿದರೆ ಗಂಡ, ಮಕ್ಕಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದರು ಎನ್ನಲಾಗಿದೆ. ಆದರೂ ಅಧಿಕಾರಿಗಳು ನೌಕರರ ಕುಟುಂಬಸ್ಥರೊಂದಿಗೆ ಸೌಮ್ಯದಿಂದ ನಡೆದುಕೊಂಡು ಮತ್ತೂಮ್ಮೆ ಮನವೊಲಿಸಲು ಯತ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.