![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 20, 2022, 5:55 PM IST
ತಿಪಟೂರು: ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಬೇಕು. ಪ್ರತಿ ಮಗುವಿಗೂ ಉತ್ತಮ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರಗಳು ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದು, ಪೋಷಕರು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಿ ಸರ್ಕಾರಿ ಶಾಲೆ ಉಳಿಸಿ-ಬೆಳೆಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ತಾಲೂಕಿನ ಹೊನ್ನವಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ ನಿರ್ಮಾಣವಾದ ಕೊಠಡಿ ಹಾಗೂ ಪ್ರಯೋಗಾಲಯ ಉದ್ಘಾಟನೆ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ಇಲ್ಲಿನ ದಾನಿಗಳು ಭೂಮಿ ದಾನ ಮಾಡಿದ್ದು, ಸರ್ಕಾರದ ಅನುದಾನದಲ್ಲಿ ಶಾಲೆ, ಕಾಲೇಜು ತೆರೆಯಲಾಗಿದೆ. ಎಲ್‌ಕೆಜಿ ಯಿಂದ ದ್ವಿತೀಯ ಪಿಯುಸಿವರೆಗೂ
ಒಂದೇ ಕಡೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದ್ದು, ಗ್ರಾಮಾಂತರ ಪ್ರದೇಶದ ಪೋಷಕರು ತಮ್ಮ ಮಕ್ಕಳನ್ನು ನಗರಗಳಿಗೆ ಕಳುಹಿಸದೆ, ಸ್ಥಳೀಯ ಸರ್ಕಾರಿ ಶಾಲೆಗಳಿಗೆ ಸೇರಿಸ ಬೇಕು ಎಂದು ಮನವಿ ಮಾಡಿದರು.
ಶಿಕ್ಷಣದ ಗುಣಮಟ್ಟಕ್ಕೆ ಆದ್ಯತೆ: ಇಲ್ಲಿ ನುರಿತ ಶಿಕ್ಷಕರಿದ್ದು, ಉತ್ತಮ ಫಲಿತಾಂಶ ಬರುತ್ತಿದೆ. ಮಕ್ಕಳು ಪ್ರಯೋಗಾಲಯ, ಹೆಚ್ಚುವರಿ ಕೊಠಡಿ ಸೌಲಭ್ಯ ಪಡೆದು ಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಶಿಕ್ಷಕರು ಸಿದ್ಧರಾಗಿ, ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು. ಶಾಲಾ ಶಿಕ್ಷಕ ಕೊರತೆ ಕಡಿಮೆ ಮಾಡಲು ಸರ್ಕಾರ ಕಾರ್ಯೋನ್ಮುಖವಾಗಿದ್ದು, ಪ್ರಾಥಮಿಕ ಶಾಲೆಗೆ 15 ಸಾವಿರ ಹಾಗೂ ಪ್ರೌಢಶಾಲೆಗೆ 2 ಸಾವಿರ ಶಿಕ್ಷಕರನ್ನು ನೇಮಕ ಮಾಡಿ ಕೊಳ್ಳಲಿದೆ. ಶಿಕ್ಷಣದ ಗುಣಮಟ್ಟಕ್ಕೆ ಆದ್ಯತೆ ನೀಡುವ ಉದ್ದೇಶವಿದೆ ಎಂದರು.
ತಹಶೀಲ್ದಾರ್ ಚಂದ್ರಶೇಖರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಾಧರ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಹೊನ್ನೇಶ್, ತಿಮ್ಮಣ್ಣ, ಬಿಇಒ ಪ್ರಭುಸ್ವಾಮಿ, ಪ್ರಾಂಶುಪಾಲ ಬಿ.ನಾಗರಾಜು, ಎಸ್ ಡಿಎಂಸಿ ಅಧ್ಯಕ್ಷ ಶ್ರೀಕಂಠಮೂರ್ತಿ, ಪಿಡಿಒ ಲತಾ, ಪೊಲೀಸ್ ಇನ್ಸ್‌ಫೆಕ್ಟರ್ ಸರ್ದಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಸಲೇಹಳ್ಳಿ ಜಗದೀಶ್ ಹಾಜರಿದ್ದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.