15 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದ ಕಾರು ಚಾಲಕನ ಬಂಧನ
Team Udayavani, Jun 14, 2022, 7:13 PM IST
ಕೊರಟಗೆರೆ: ಬೆಂಗಳೂರು ಮೂಲದ ವ್ಯಕ್ತಿಯೋಬ್ಬರು ಜಮೀನು ಖರೀದಿಸಲೆಂದು ಕಾರಿನಲ್ಲಿ ಇಟ್ಟಿದ್ದ15 ಲಕ್ಷ ಹಣವನ್ನು ಕದ್ದು ಪರಾರಿಯಾಗಿದ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕೊರಟಗೆರೆ ಪೋಲೀಸರ ತಂಡ ಯಶಸ್ವಿಯಾಗಿದೆ.
ಬಂಧಿತ ಆರೋಪಿ ಬಿಹಾರ ಮೂಲದ ಡ್ರೈವರ್ ಬಿಪಿನ್ ಎನ್ನುವವನಾಗಿದ್ದಾನೆ
ಬೆಂಗಳೂರು ಮೂಲದ ಸತೀಶ್ ಎನ್ನುವವರು ಕೊರಟಗೆರೆ ಪಟ್ಟಣದ ಊರ್ಡಿಗೆರೆ ಕ್ರಾಸ್ ನ ಬಳಿ ಜಮೀನು ಕೊಳ್ಳಲು ಅಡ್ವಾನ್ಸ್ ನೀಡುವುದಕ್ಕಾಗಿ ತಂದಿದ್ದ 15 ಲಕ್ಷ ರೂ ಹಣದೊಂದಿಗೆ ಡ್ರೈವರ್ ಬಿಪಿನ್ ಪರಾರಿಯಾಗಿದ್ದ. ಆತನನ್ನು ಕೊರಟಗೆರೆ ಪೊಲೀಸರ ತಂಡ ಸೆರೆ ಹಿಡಿದು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ.
ಸತೀಶ್ ಅವರು ಹಣ ಇದೆ ಕಾರಿನಲ್ಲಿಯೇ ಕುಳಿತುಕೋ ಎಂದು ಹೇಳಿ ಪರಿಚಯಸ್ಥರ ಜತೆ ಜಮೀನು ನೋಡಲು ಹೋದಂತಹ ಸಂದರ್ಭ ಬಿಪಿನ್ ಕಾರನ್ನು ಅಲ್ಲಿಯೇ ಬಿಟ್ಟು 15 ಲಕ್ಷ ರೂಪಗಳನ್ನು ತೆಗೆದುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್, ಅಡಿಷನಲ್ ಎಸ್ಪಿ ಉದೇಶ್, ಡಿವೈಎಸ್ಪಿ ರಾಮಕೃಷ್ಣಯ್ಯ ಮಾರ್ಗದರ್ಶನದಂತೆ ಸಿಪಿಐ ಸಿದ್ದರಾಮೇಶ್ವರ ಹಾಗೂ ಅವರ ತಂಡ ಮೋಹನ್ ಕುಮಾರ್ ,ಸಿದ್ದಲಿಂಗ ಪ್ರಸನ್ನ, ಸೈಯದ್ ಅರ್ಪತ್ ಅಲಿ, ಗಂಗಾಧರ್, ರಂಗನಾಥ್, ಶಶಿಧರ್ ಆರೋಪಿ ಬಿಪಿನ್ ನನ್ನು ತಮಿಳುನಾಡಿನಲ್ಲಿ ಸೆರೆಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.