ಯಾವ ಪುರುಷಾರ್ಥಕ್ಕಾಗಿ ಜನಸ್ಪಂದನ? : ಈಶ್ವರ್ ಖಂಡ್ರೆ
Team Udayavani, Sep 12, 2022, 5:54 PM IST
ತುಮಕೂರು: ರಾಜ್ಯದ ಜನ ಸಂಕಷ್ಟದಲ್ಲಿರುವಾಗ ಬಿಜೆಪಿಯವರು ಯಾವ ಪುರುಷಾರ್ಥಕ್ಕಾಗಿ ಜನಸ್ಪಂದನ, ಜನೋತ್ಸವ ಕಾರ್ಯಕ್ರಮ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರಶ್ನಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆ ಹಾವಳಿಯಿಂದಾಗಿ ಲಕ್ಷಾಂತರ ಭೂಮಿಯಲ್ಲಿ ರೈತರು ಬೆಳೆದಿದ್ದ ಬೆಳೆ ನಾಶವಾಗಿದೆ, ಸಾವಿರಾರು ಮನೆಗಳು ನೆಲಸಮ ವಾಗಿವೆ, ರಸ್ತೆಗಳು ಕೊಚ್ಚಿ ಹೋಗಿವೆ.,ಇಂತಹ ಸಂಕಷ್ಟದ ಸಮಯದಲ್ಲಿ ಜನಸ್ಪಂದನೆ ಅಗತ್ಯ ಇತ್ತೆ ಎಂದು ಹರಿಹಾಯ್ದರು. ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ನಿರು ದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಯುವಕ ರೆಲ್ಲರೂ ದಾರಿ ತಪ್ಪಿ ಹೋಗುತ್ತಿದ್ದಾರೆ. ಜತೆಗೆ ಸರ್ಕಾ ರವೂ ದಾರಿ ತಪ್ಪಿದೆ. ಈ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತು ಛೀಮಾರಿ ಹಾಕುತ್ತಿದ್ದಾರೆ ಎಂದರು.
ಭೇಟಿ ನೀಡಿಲ್ಲ: ನೆರೆ ಹಾವಳಿಯಿಂದ ಮನೆ, ಬೆಳೆ ಕಳೆದುಕೊಂಡಿರುವವರಿಗೆ ಇದುವರೆಗೂ ಪರಿಹಾರ ಕೊಟ್ಟಿಲ್ಲ. ಮಳೆಯಿಂದ ಆಗಿರುವ ಅನಾಹುತ ಗಳನ್ನು ಸರಿಪಡಿಸಲು ಪರಿಹಾರ ಕಾರ್ಯಗಳನ್ನು ಕೈಗೊಂಡಿಲ್ಲ. ಅನಾಹುತ ಉಂಟಾಗಿರುವ ಸ್ಥಳಗಳಿಗೆ ಇದುವರೆಗೂ ಸಚಿವರುಗಳು ಭೇಟಿ ನೀಡಿಲ್ಲ ಎಂದು ಆರೋಪಿಸಿದರು.
ಉದ್ಯೋಗ ಸೃಷ್ಟಿ ಇಲ್ಲ: ದಾರಿಯಲ್ಲಿ ನಡೆಯುತ್ತಿದ್ದಾಗ ಎಡವಿದರೆ ಅದಕ್ಕೆ ಕಾಂಗ್ರೆಸ್‌ನವರು ಕಲ್ಲಿಕ್ಕಿದ್ದಾರೆ ಎಂದು ದೂರುವ ಚಾಳಿ ಬಿಪಿಯವರದ್ದಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 8 ವರ್ಷ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 4 ವರ್ಷ ಆಗಿದೆ. ಆದರೂ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಾಗಿಲ್ಲ ಎಂದು ದೂರಿದರು.
ಆರ್ಥಿಕತೆ ಸಂಪೂರ್ಣ ಕುಸಿತ: ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ 1 ಲಕ್ಷದವರೆಗೆ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಆದರೆ ಈವರೆಗೆ ಯಾವುದೇ ರೀತಿಯ ರೈತರ ಸಾಲ ಮನ್ನಾ ಮಾಡ ಲಾಗಿಲ್ಲ. ನೀರಾವರಿ ಯೋಜನೆಗೆ ಒಂದೂವರೆ ಲಕ್ಷ ಕೋಟಿ ಕೊಡುವುದಾಗಿ ಹೇಳಿದ್ದರು. ಈಗ ನೀರಾವರಿ ಯೋಜನೆಗೆ ಎಷ್ಟು ಕೋಟಿ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದ ಅವರು, ಆಪರೇಷನ್ ಕಮಲದಿಂದ ದುರಾ ಡಳಿತ ಮಾಡಿ ದೇಶ ಮತ್ತು ರಾಜ್ಯದ ಆರ್ಥಿಕತೆ ಸಂಪೂರ್ಣ ಕುಸಿದು ಹೋಗಿದೆ ಎಂದರು.
ಆಂತರಿಕ ವಿಚಾರ: ಸರ್ಕಾರದ ಜನೋತ್ಸವ ಸಮಾ ವೇಶಕ್ಕೆ 7 ಮಂದಿ ಸಚಿವರ ಗೈರು ಹಾಜರಿ ಬಗ್ಗೆ ಪತ್ರ ಕರ್ತರು ಕೇಳಿದ ಪ್ರಶ್ನೆಗೆ ಅದು ಅವರ ಪಕ್ಷದ ಆಂತರಿಕ ವಿಚಾರ. ನಾನು ಆ ಬಗ್ಗೆ ಮಾತನಾಡುವುದಿಲ್ಲ. ಆದರೆ ಅನೇಕ ಮುಖಂಡರು ಬಿಜೆಪಿ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ ಎಂದರು.
ಸಿದ್ದರಾಮಯ್ಯ ಬಗ್ಗೆ ಬಿಜೆಪಿಗೆ ಹೆದರಿಕೆ : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿ ಯವರಿಗೆ ಹೆದರಿಕೆ ಇದೆ. ಹಾಗಾಗಿ ವಿನಾಕಾರಣ ಟೀಕೆ ಮಾಡುತ್ತಾರೆ ಎಂದು ಈಶ್ವರ್ ಖಂಡ್ರೆ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ದೊಡ್ಡ ಸ್ಥಾನದಲ್ಲಿದ್ದುಕೊಂಡು ತಾಕತ್ತು ಮತ್ತು ಧಮ್ ಬಗ್ಗೆ ಮಾತನಾಡುವುದು ಎಷ್ಟು ಸರಿ ಎಂದು ಜನಸ್ಪಂದನ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿಯವರು ಜನರ ಸಮಸ್ಯೆಗೆ ಸ್ಪಂದಿಸುವ ಕಳಕಳಿ ಮನೋ ಭಾವವನ್ನು ಕಲಿಯಲಿ. ಬಿಜೆಪಿಯವರಿಗೆ ಸರಿಯಾದ ಸಮಯದಲ್ಲಿ ರಾಜ್ಯದ ಜನತೆ ತಕ್ಕ ಶಾಸ್ತಿ ಮಾಡುತ್ತಾರೆ ಎಂದು ಹೇಳಿದರು.
ಕೇಂದ್ರದವರು ರಾಜ್ಯದವರ ಮೇಲೆ ಪ್ರಹಾರದ ಮೇಲೆ ಪ್ರಹಾರ ಮಾಡುತ್ತಿ ದ್ದಾರೆ. ನೀರಾವರಿಯಲ್ಲಿ ಅನ್ಯಾಯ, ಪ್ರವಾಹ ಪರಿಹಾರದಲ್ಲಿ ಅನ್ಯಾಯ, ಜಿಎಸ್‌ಟಿಯಲ್ಲಿ ಅನ್ಯಾಯ, ಕೊರೊನಾ ಸಂದರ್ಭದಲ್ಲಿ ಆಕ್ಸಿ ಜನ್ ಒದಗಿಸುವಲ್ಲೂ ಅನ್ಯಾಯವಾಗಿದೆ. ಆದರೂ ಅಂಜು ಬುರುಕ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಈ ಧೋರಣೆ ವಿರುದ್ಧ ಧ್ವನಿ ಎತ್ತಿಲ್ಲ. – ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.