ತಿಪಟೂರಿಗೆ ಎತ್ತಿನಹೊಳೆ ನೀರು ಹರಿಸಿ
Team Udayavani, Jun 10, 2020, 7:08 AM IST
ತಿಪಟೂರು: ಎತ್ತಿನಹೊಳೆ ಯೋಜನೆಯಿಂದ ತಿಪಟೂರು ತಾಲೂಕಿಗೆ ನೀರು, ಸಂತ್ರಸ್ತರಿಗೆ ನ್ಯಾಯಯುತ ಭೂ ಪರಿಹಾರ ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎತ್ತಿನ ಹೊಳೆ ಹೋರಾಟ ಸಮಿತಿ ಮುಖಂಡರು ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಮಿತಿ ಹೋರಾಟಗಾರರು ಮಾತನಾಡಿ, ಎತ್ತಿನಹೊಳೆ ಯೋಜನೆ ತಿಪಟೂರಿನಲ್ಲಿ ಹಾದು ಹೋಗಿದ್ದು, ಸಾವಿರಾರು ರೂ. ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡಿದ್ದಾರೆ. ಆದರೆ ಈ ಭಾಗದ ರೈತರಿಗೆ ನೀರು ಕೊಡುವುದಿಲ್ಲವೆಂದರೆ ಯಾವ ನ್ಯಾಯ? ಭೂ ಪರಿಹಾರಕ್ಕೆ ಸಂಬಂಧಪಟ್ಟಂತೆ ರೈತರ ಆತಂಕವನ್ನು ನಿವಾರಿಸುವ ದಿಕ್ಕಿನಲ್ಲಿ ಯಾವ ಪ್ರಯತ್ನವೂ ಅಧಿಕಾರಿಗಳಿಂದ ಅಥವಾ ಜಿಲ್ಲಾಡಳಿತದಿಂದ ನಡೆದಿಲ್ಲ ಎಂದು ಆರೋಪಿಸಿದರು.
ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ಮತ್ತು ಬರ ಹಾಗೂ ಅಂತರ್ಜಲ ಕೊರತೆಯಿಂದ ನರಳು ತ್ತಿರುವ ತಿಪಟೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲೂಕು ಗಳಿಗೆ ಅಗತ್ಯ ಪ್ರಮಾಣದ ನೀರನ್ನೂ ಹಂಚಿಕೆ ಮಾಡದೇ ವಂಚನೆ ಮಾಡಲಾಗಿದೆ ಎಂದು ದೂರಿದರು. ಕಳೆದ 2 ತಿಂಗಳಿಂದ ಲಾಕ್‌ಡೌನ್‌ನಿಂದಾಗಿ ಇಡೀ ಜಿಲ್ಲೆಯ ರೈತರ ಸಮುದಾಯ ಸಾಕಷ್ಟು ನಷ್ಟಕ್ಕೆ ಗುರಿ ಯಾಗಿದ್ದು, ಅವರ ಸಮಸ್ಯೆಯನ್ನು ಸರ್ಕಾರ ಪರಿಹರಿ ಸಿಲ್ಲ.
ತರಾತುರಿಯಲ್ಲಿ ಯೋಜನೆ ಮುಗಿಸಲು ಸರ್ಕಾರ ಜಮೀನು ಕಳೆದುಕೊಳ್ಳುವ ಸಂತ್ರಸ್ತರ ಸಮಸ್ಯೆಗಳನ್ನು ಮಾತ್ರ ಕೇಳುತ್ತಿಲ್ಲ ಎಂದರು. ರೈತರಿಗೆ ಸಂಪೂರ್ಣ ಪರಿಹಾರ ಸಂದಾಯವಾದ ನಂತರವಷ್ಟೇ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದರು. ಸಮಿತಿ ಅಧ್ಯಕ್ಷ ದೇವರಾಜು ತಿಮ್ಲಾಪುರ, ಕಾರ್ಯದರ್ಶಿ ಎಸ್.ಎನ್.ಸ್ವಾಮಿ, ಉಪಾಧ್ಯಕ್ಷ ಬಿ.ಬಿ.ಸಿದ್ದಲಿಂಗಮೂರ್ತಿ, ಸಹ ಕಾರ್ಯ ದರ್ಶಿಗಳಾದ ಲೋಕೇಶ್, ಮನೋಹರ್ ಪಟೇಲ್, ಆರ್.ಡಿ. ಯೋಗಾನಂದಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.