ಶೈಕ್ಷಣಿಕ ಪ್ರಗತಿಗೆ ಸೌಲಭ್ಯ ಹೆಚ್ಚಿಸುವುದು ಅಗತ್ಯ
ವಿವಿಗಳು ಸರ್ಕಾರಿ ಆರ್ಥಿಕ ಸೌಲಭ್ಯ ಬಳಸಿಕೊಳ್ಳಿ: ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ಎ. ಕೋರಿ
Team Udayavani, May 31, 2019, 2:24 PM IST
ತುಮಕೂರು ವಿವಿಯಲ್ಲಿ ರೂಸಾ ನೆರವಿನೊಂದಿಗೆ ನವೀಕರಿಸಲಾದ ಸಭಾಂಗಣವನ್ನು ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ಎ. ಕೋರಿ ಉದ್ಘಾಟನೆ ಮಾಡಿದರು.
ತುಮಕೂರು: ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಕರ್ನಾಟಕದ ವಿವಿಗಳು ಕಾಣಿಸಿ ಕೊಳ್ಳಬೇಕಾದರೆ, ಶೈಕ್ಷಣಿಕ ಪ್ರಗತಿಯೊಂದಿಗೆ ಮೂಲ ಭೂತ ಸೌಕರ್ಯಗಳನ್ನೂ ಹೆಚ್ಚಿಸಿಕೊಳ್ಳುವ ಅಗತ್ಯ ವಿದೆ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ಎ. ಕೋರಿ ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ರೂಸಾ ನೆರವಿನೊಂದಿದೆ ನವೀಕರಿಸಲಾದ ಸಭಾಂಗಣವನ್ನು ಹಾಗೂ ನ್ಯಾಕ್ ಮಾನ್ಯತೆ ಮಾನದಂಡಗಳ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿದ ಅವರು ಮಾತ ನಾಡಿ, ವಿವಿಗಳು ಸರ್ಕಾರದಿಂದ ದೊರೆಯುವ ಹಣಕಾಸು ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ರಾಷ್ಟ್ರ ಮಟ್ಟದ 100 ಟಾಪ್ ವಿವಿಗಳ ಸಾಲಿನಲ್ಲಿ ಅಥವಾ ಪ್ರಪಂಚದ 500 ಟಾಪ್ ವಿವಿಗಳ ಸಾಲಿನಲ್ಲಿ ರಾಜ್ಯದ ವಿವಿಗಳು ಬರುತ್ತಿಲ್ಲ. ಅಂತರ ರಾಷ್ಟ್ರೀಯ ಮಾನದಂಡಗಳ ಪ್ರಕಾರ ನಮ್ಮಲ್ಲಿ ಯೋಜನೆಗಳು ಜಾರಿಗೆ ಬರದಿರುವುದೇ ಇದಕ್ಕೆ ಕಾರಣ ಎಂದು ನುಡಿದರು.
ಅನುದಾನ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ: ಕೇಂದ್ರ ಅನುದಾನಗಳನ್ನು ಪಡೆಯುವಲ್ಲಿ ಮತ್ತು ಬಳಸಿಕೊಳ್ಳುವಲ್ಲಿ ಕರ್ನಾಟಕವು ಮುಂಚೂಣಿ ಯಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ರಾಷ್ಟ್ರೀಯ ಶಿಕ್ಷಣ ಅಭಿಯಾನ ರೂಸಾ ಯೋಜನೆಯ ಅನುದಾನಗಳನ್ನು ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನ್ಯಾಯಯುತವಾಗಿಯೂ ಪರಿ ಣಾಮಕಾರಿಯಾಗಿಯೂ ಬಳಸಿಕೊಳ್ಳಲಾಗಿದೆ. ರೂಸಾ ಎರಡನೇ ಹಂತ ಪೂರ್ಣಗೊಳ್ಳುತ್ತಿದ್ದು, ಮೂರನೇ ಹಂತದ ಯೋಜನೆಯು ಸದ್ಯದಲ್ಲೇ ಆರಂಭವಾಗಲಿದೆ. ಈ ಬಾರಿ ನ್ಯಾಕ್ ಮಾನ್ಯತೆ ಪಡೆಯದ ಕಾಲೇಜುಗಳೂ ಹಣಕಾಸು ನೆರವನ್ನು ಪಡೆಯಲಿವೆ. ಆ ಮೂಲಕ ಅಂತಹ ಕಾಲೇಜುಗಳ ಮೂಲಸೌಕರ್ಯಗಳ ವೃದ್ಧಿಗೆ ಪ್ರಯತ್ನಿಸಲಾಗುತ್ತದೆ ಎಂದು ಹೇಳಿದರು.
ಭಾರತದಲ್ಲಿದೆ ಉನ್ನತ ಶಿಕ್ಷಣ: ಅಧ್ಯಕ್ಷತೆ ವಹಿಸಿದ್ದ ತುಮಕೂರು ವಿವಿ ಕುಲಪತಿ ಪ್ರೊ.ವೈ. ಎಸ್. ಸಿದ್ದೇಗೌಡ ಮಾತನಾಡಿ, ಅಮೇರಿಕ ಹಾಗೂ ಚೀನಾದ ಬಳಿಕ ಭಾರತವೇ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಅತಿದೊಡ್ಡ ದೇಶವಾಗಿದೆ. ಆದರೆ, ಅಂತಾರಾಷ್ಟ್ರೀಯ ಗುಣಮಟ್ಟದ ವಿವಿಗಳನ್ನು ರೂಪಿಸುವಲ್ಲಿ ನಾವು ಹಿಂದುಳಿದಿದ್ದೇವೆ. ವಿವಿಯಿಂದ ಹೊರಬರುವ ವಿದ್ಯಾರ್ಥಿಗಳ ಪೈಕಿ ಶೇ.5ರಷ್ಟು ಮಂದಿ ಮಾತ್ರ ಉದ್ಯೋಗಕ್ಕೆ ಅಗತ್ಯವಿರುವ ಕೌಶಲಗಳನ್ನು ಹೊಂದಿ ದ್ದಾರೆ ಎಂಬ ವರದಿಗಳಿವೆ. ಈ ಕೊರತೆಯನ್ನು ನಿವಾರಿಸಿ, ಯುವ ಪದವೀಧರರು ವ್ಯಾಸಂಗ ಮಾಡುವ, ಬದುಕುವ ಹಾಗೂ ವಿವಿಧ ವೃತ್ತಿಗಳನ್ನು ಕೈಗೊಳ್ಳುವ ಕೌಶಲಗಳನ್ನು ಬೆಳೆಸಬೇಕಿದೆ. ಯುವಕ ರಲ್ಲಿ ಸಾಮರ್ಥ್ಯ, ಸಮಗ್ರತೆ ಹಾಗೂ ಉದ್ಯಮ ಶೀಲತೆಗಳನ್ನು ಬೆಳೆಸುವತ್ತ ಉನ್ನತ ಶಿಕ್ಷಣ ಸಂಸ್ಥೆಗಳು ಗಮನ ನೀಡುವ ಅಗತ್ಯವಿದೆ ಎಂದು ನುಡಿದರು. ನ್ಯಾಕ್ ಉಪ ಸಲಹೆಗಾರ ಡಾ.ದೇವೇಂದರ್ ಕೌಡೆ, ತುಮಕೂರು ವಿವಿ ಕುಲಸಚಿವ ಪ್ರೊ.ಕೆ.ಎನ್.ಗಂಗಾ ನಾಯಕ್, ಆಂತರಿಕ ಗುಣಮಟ್ಟ ಭರವಸೆ ಕೋಶದ ನಿರ್ದೇಶಕ ಪ್ರೊ.ಕೆ.ಜಿ. ಪರಶುರಾಮ, ರೂಸಾ ನೋಡಲ್ ಅಧಿಕಾರಿ ಡಾ.ಎಚ್.ರಾಜೇಂದ್ರ ಬಾಬು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.