ರಾಜಕೀಯ ದೊಂಬರಾಟ ಖಂಡಿಸಿ ರೈತರ ಧರಣಿ

ರಾಜ್ಯ ರೈತ ಸಂಘದಿಂದ ಟೌನ್‌ಹಾಲ್ ವೃತ್ತದಲ್ಲಿ ಜನಪ್ರತಿನಿಧಿಗಳ ವಿರುದ್ಧ ಘೋಷಣೆ, ಛೀ.ಥೂ. ಚಳವಳಿ

Team Udayavani, Jul 16, 2019, 1:16 PM IST

tk-tdy-2..

ತುಮಕೂರು: ರಾಜ್ಯದಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದರೂ ಸಹ ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿ ರಾಜಕೀಯ ದೊಂಬರಾಟದಲ್ಲಿ ತೊಡಗಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿ ಭಟನೆ ನಡೆಸಿದರು. ಇಲ್ಲಿನ ಟೌನ್‌ಹಾಲ್ ವೃತ್ತದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಮಂದಿ ರೈತರು ಸಮ್ಮಿಶ್ರ ಸರ್ಕಾರ ಹಾಗೂ ಶಾಸಕರು, ಸಚಿವರುಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ರೈತ ಸಂಘದ ಆನಂದ್‌ಪಾಟೀಲ್ ಮಾತನಾಡಿ, ರಾಜ್ಯ ವಿಧಾನ ಸಭೆಯಲ್ಲಿ ಎಬ್ಬಿಸಿರುವ ಗಲಭೆಯನ್ನು ಗಮನಿಸಿದರೆ ರಾಷ್ಟ್ರದ ಮುಂದೆ ಕರ್ನಾಟಕದ ಜನತೆ ತಲೆತಗ್ಗಿಸುವಂತಹ ವಾತಾವರಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಮುಂಗಾರು ಮಳೆ ಆಗದೇ ಸಕಾಲಕ್ಕೆ ಬೆಳೆಯೂ ಇಲ್ಲದೆ ರೈತರು ಬರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಶಾಸಕರು, ಸಚಿವ ರುಗಳು ರಾಜ್ಯದ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಗಮನಹರಿಸದೆ ತಮ್ಮ ವೈಯಕ್ತಿಕ ಆಸೆ, ಆಕಾಂಕ್ಷೆ ಗಳಿಗಾಗಿ ರಾಜಕೀಯ ದೊಂಬರಾಟದಲ್ಲಿ ಮುಳುಗಿ ರುವುದು ನಾಚಿಕೆಗೇಡಿನ ಸಂಗತಿ ಎಂದರು.

ತಮ್ಮ ಸ್ವಾರ್ಥ ಹಾಗೂ ಅಧಿಕಾರದ ಆಸೆಗಾಗಿ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದೆ ಪ್ರಜಾಪ್ರಭುತ್ವ ವನ್ನು ಕಗ್ಗೊಲೆ ಮಾಡುತ್ತಿದ್ದಾರೆ. ಕತ್ತೆಗಳ ರೀತಿ ಮಾರಾಟವಾಗುತ್ತಿರುವ, ರೆಸಾರ್ಟ್‌ನಲ್ಲಿ ಮಜಾ ಮಾಡುತ್ತಿರುವ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಎಲ್ಲ ಶಾಸಕರುಗಳಿಗೆ ಛೀ.. ಥೂ.. ಎಂದು ಉಗಿಯುವ ಚಳವಳಿ ಮಾಡುವುದರ ಮೂಲಕ ಅವರ ಮಾನ ಮರ್ಯಾದೆಯನ್ನು ಬೀದಿಯಲ್ಲಿ ಹರಾಜು ಹಾಕಬೇಕಾಗಿದೆ ಎಂದರು.

ರೆಸಾರ್ಟ್‌ ರಾಜಕಾರಣದಲ್ಲಿ ನಿರತರಾಗಿರುವ ಸಚಿವರು, ಶಾಸಕರುಗಳು ಈಗಲಾದರೂ ರಾಜ್ಯದ ಜನರ ಹಿತ ಕಾಯುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗ ಬೇಕು ಎಂದು ಒತ್ತಾಯಿಸಿದರು. ಹಸಿರು ಸೇನೆಯ ಕೆಂಕೆರೆ ಸತೀಶ್‌ ಮಾತನಾಡಿ, ಪ್ರಜಾಪ್ರಭುತ್ವದ ಆಶಯಗಳ ವಿರುದ್ಧವಾಗಿ ನಡೆದು ಕೊಂಡಿರುವ, ಮತದಾರರ ಆಶಯಗಳನ್ನು ನಿರ್ಲಕ್ಷಿ ಸಿರುವ, ಅಧಿಕಾರಕ್ಕಾಗಿ ಹಾತೊರೆಯುತ್ತಿರುವ ರಾಜ ಕೀಯ ಪಕ್ಷಗಳಿಗೆ ಬುದ್ಧಿ ಹೇಳಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಐತಿಹಾಸಿಕ ಸ್ಥಳ ವಿಧಾನಸೌಧದಲ್ಲಿ ನಾಯಿಗಳ ರೀತಿಯಲ್ಲಿ ಕಿತ್ತಾಡಿಕೊಂಡು ಕರ್ನಾಟಕವನ್ನು ಇಡೀ ದೇಶವೇ ನೋಡುವಂತಾಗಿದೆ. ಮೂರು ಪಕ್ಷಗಳ ಶಾಸಕರುಗಳಿಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರೆಸಾರ್ಟ್‌ಗಳನ್ನು ತೊರೆದು ಕ್ಷೇತ್ರಗಳ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದರು. ರಾಜೀನಾಮೆ ಕೊಟ್ಟಿರುವ ಶಾಸಕರುಗಳ ಭಾವಚಿತ್ರವಿರುವ ಫ್ಲೆಕ್ಸ್‌ ಗಳಿಗೆ ಚಪ್ಪಲಿಯಿಂದ ಹೊಡೆದು ಪೆಟ್ರೋಲ್ ಹಾಕಿ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರೈತ ಮುಖಂಡರಾದ ಧನಂಜಯ ಆರಾಧ್ಯ, ದೇವರಾಜು, ಅನಿಲ್ಕುಮಾರ್‌, ಸಿದ್ದರಾಜು, ಲೋಕೇಶ್‌ ಬಂಡಿಮನೆ, ರಾಜಣ್ಣ ಇತರರಿದ್ದರು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.