ರೈತರೇ ಮಧ್ಯವರ್ತಿಗಳೊಂದಿಗೆ ವ್ಯವಹಾರ ಮಾಡಬೇಡಿ
Team Udayavani, Jan 7, 2022, 10:42 PM IST
ತುರುವೇಕೆರೆ: ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಮಧ್ಯವರ್ತಿಗಳ ಬಾಯಿಗೆ ಹಾಕದಂತೆ ಮನವೊಲಿಸಿ, ರೈತರೇ ನೇರವಾಗಿ ಎಪಿಎಂಸಿ ರಾಗಿ ಖರೀದಿ ಕೇಂದ್ರದಲ್ಲಿ ವ್ಯವಹಾರ ಮಾಡುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು ಶಾಸಕ ಮಸಾಲ ಜಯರಾಮ್ ಹೇಳಿದರು.
ಪಟ್ಟಣದ ಕೃಷಿ ಮಾರುಕಟ್ಟೆ ಆವರಣದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದಿಂದ ಆರಂಭವಾದ ರಾಗಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ರೈತರ ಹೆಸರಿನಲ್ಲಿ ದಳ್ಳಾಳಿಗಳು ರಾಗಿ ನೀಡಿ, ಸರ್ಕಾರಕ್ಕೆ ಮೋಸ ಮಾಡುತ್ತಾರೆ. ದಳ್ಳಾಳಿಗಳ ಬಗ್ಗೆ ಅಧಿಕಾರಿಗಳು ಎಚ್ಚರವಹಿಸಬೇಕು. ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡಿ, ರಾಗಿ ಖರೀದಿ ಕೇಂದ್ರ ಪ್ರಾರಂಭಿಸಿ ಮಾ.31ರವರೆಗೆ ಗುಣಮಟ್ಟದ ರಾಗಿ ಖರೀದಿಸಲಿದೆ.
ಸರ್ಕಾರ ಪ್ರತಿ ಕ್ವಿಂಟಾಲ್ ರಾಗಿಗೆ 3,377 ರೂ. ನೀಡಲಿದೆ. ರಾಗಿ ಬೆಳೆದ ರೈತರು ಪಹಣಿ, ಹೆಸರು, ವಿಳಾಸದೊಂದಿಗೆ ಬೆಳೆದ ರಾಗಿಯ ಸ್ಯಾಂಪಲ್ ನೀಡಿ, ಒಂದು ಚೀಲಕ್ಕೆ 50 ಕೆ.ಜಿ. ಸಾಮರ್ಥ್ಯದ ಗೋಣಿ ಚೀಲದಲ್ಲಿ ಮಾತ್ರ ನೀಡಬೇಕು ಎಂದು ಹೇಳಿದರು. ತಹಶೀಲ್ದಾರ್ ನಯೀಂಉನ್ನಿಸಾ ಮಾತನಾಡಿ, ರೈತರ ಪಹಣಿಯಲ್ಲಿ ತೆಂಗು, ಅಡಿಕೆ, ಬಾಳೆ ಎಂದು ತಪ್ಪಾಗಿ ನೋಂದಣಿಯಾಗಿದ್ದಲ್ಲಿ ಅಂತಹ ರೈತರು ತಾಲೂಕಿನ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಸರಿಪಡಿಸಿಕೊಳ್ಳುವ ಮೂಲಕ ಇದರ ಸದುಪಯೋಗಪಡಿಸಿಕೊಳ್ಳಿ ಎಂದರು.
ನೋಂದಣಿಗೆ ಅವಕಾಶ: ರಾಗಿ ಖರೀದಿ ಅಧಿಕಾರಿ ರವಿಕುಮಾರ್ ಮಾತನಾಡಿ, ತಾಲೂಕಿನಲ್ಲಿ ರಾಗಿ ಖರೀದಿ ಕೇಂದ್ರ ಪ್ರಾರಂಭವಾಗಿದ್ದು, ಮಾ.31ರ ವರೆಗೆ ನೋಂದಣಿಗೆ ಅವಕಾಶವಿದೆ. ರೈತರು ನೋಂದಣಿ ಮಾಡಿಸಲು ಕೃಷಿ ಇಲಾಖೆಯಿಂದ ನೀಡಿರುವ ಗುರುತಿನ ಚೀಟಿ ಕಡ್ಡಾಯವಾಗಿದೆ. ಪ್ರತಿ ರೈತರಿಂದ ಒಂದು ಎಕರೆಗೆ 10 ಕ್ವಿಂಟಾಲ್‌ನಂತೆ ಗರಿಷ್ಟ 20 ಕ್ವಿಂಟಾಲ್ ರಾಗಿ ಖರೀದಿಸಲಾಗುವುದು ಎಂದರು.
ಕೃಷಿಕ ಸಮಾಜದ ಅಧ್ಯಕ್ಷ ಕೆಂಪರಾಜು, ಎಪಿಎಂಸಿ ಅಧ್ಯಕ್ಷ ನರಸಿಂಹ, ಉಪಾಧ್ಯಕ್ಷ ಪ್ರಸನ್ನ, ಸದಸ್ಯರಾದ ವಿ.ಟಿ.ವೆಂಕಟರಾಮು, ಮಧು, ವಿಜಿಯೇಂದ್ರ, ಕಾಂತರಾಜು, ನರಸಿಂಹರಾಜು, ಚಂದ್ರಣ್ಣ, ಪ್ರಸಾದ್, ವಿ.ಬಿ.ಸುರೇಶ್, ಪಪಂ ಅಧ್ಯಕ್ಷ ಅಂಜನ್‌ಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪೂಜಾ, ಎಪಿಎಂಸಿ ಮಾಜಿ ಅಧ್ಯಕ್ಷ ಕೊಂಡಜ್ಜಿ ವಿಶ್ವನಾಥ್, ಆರ್‌ಎಂಸಿ ಕಾರ್ಯದರ್ಶಿ ವೆಂಕಟೇಶ್, ಬಾಬು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.