ರೈತರು ಮಣ್ಣು ಪರೀಕ್ಷೆ ಮಾಡಿಸಿ ವ್ಯವಸಾಯ ಮಾಡಿ


Team Udayavani, Feb 17, 2019, 7:34 AM IST

raita-soikl.jpg

ಮಧುಗಿರಿ: ಕ್ಷೇತ್ರದ ರೈತರು ತಮ್ಮ ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಿ ವ್ಯವಸಾಯ ಮಾಡಿದರೆ ಸಾಧ್ಯವಾದಷ್ಟು ಲಾಭ ಗಳಿಸಬಹುದು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ಸಲಹೆ ನೀಡಿದರು. ಪಟ್ಟಣದ ತಾಪಂನ ಸಾಮರ್ಥ್ಯಸೌಧ ಕಟ್ಟಡದಲ್ಲಿ ಜಿಪಂ ಹಾಗೂ ತಾಪಂ ಸಹಯೋಗದೊಂದಿಗೆ ತಾಲೂಕು ಕೃಷಿ ಇಲಾಖೆ ಏರ್ಪಡಿಸಿದ್ದ ತಾಲೂಕು ಮಟ್ಟದ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸಾವಯವ ಗೊಬ್ಬರ ಬಳಸಿ: ಪ್ರಸ್ತುತ ದಿನಗಳಲ್ಲಿ ವ್ಯವಸಾಯ ನಶಿಸುತ್ತಿದೆ. ಇದಕ್ಕೆ ಮಳೆಯ ಅಭಾವ, ಬೆಳೆಗೆ ಬೆಂಬಲ ಬೆಲೆ ಸಿಗದಿರುವುದು ಸೇರಿದಂತೆ ಫ‌ಲವತ್ತತೆ ಹಾಗೂ ಮಾನವ ಸಂಪನ್ಮೂಲದ ಕೊರತೆ ಕಾರಣವಾಗಿದೆ. ರೈತರು ಕೃಷಿ ಇಲಾಖೆ ನೀಡುವ ಮಾರ್ಗದರ್ಶನದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಮಣ್ಣಿನ ಗುಣಕ್ಕೆ ತಕ್ಕಂತೆ ಬೆಳೆ ಬೆಳೆದರೆ ಖಂಡಿತ ಲಾಭ ಗಳಿಸಬಹುದು. ತಾಲೂಕಿನಲ್ಲಿನ ರೈತರು ಹಳೇ ವ್ಯವಸಾಯ ಪದ್ಧತಿ ಕೈಬಿಡಬೇಕಿದೆ. ರಾಸಾಯನಿಕ ಗೊಬ್ಬರದ ಬದಲಾಗಿ ಸಾವಯವ ಗೊಬ್ಬರ ಬಳಕೆಯಿಂದ ಲಾಭದ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಉತ್ತಮ ಕೃಷಿ ಕಾಯಕ ಮಾಡಿ: ಸರ್ಕಾರ ಎತ್ತಿನಹೊಳೆ ಕಾಮಗಾರಿಗೆ ಹೆಚ್ಚಿನ ಹಣ ಮೀಸಲಿಟ್ಟಿದ್ದು, 3-4 ವರ್ಷಗಳಲ್ಲಿ ತಾಲೂಕಿನ 52 ಕೆರೆಗಳಿಗೂ ನೀರು ಹರಿಯಲಿದೆ. ಇದಕ್ಕಾಗಿ ಇಂಥ ಕಾರ್ಯಾಗಾರದಲ್ಲಿ ಭಾಗವಹಿಸಿದ ರೈತರು ಇಲಾಖೆ ನೀಡುವ ಮಾರ್ಗದರ್ಶನದಲ್ಲಿ ನಡೆದು ಉತ್ತಮ ಕೃಷಿ ಕಾಯಕ ಮಾಡಬೇಕೆಂದು ಮನವಿ ಮಾಡಿದರು.

ಪ್ರಯೋಜನಾಕಾರಿ ಸಂಗತಿ: ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲೂಕು ಕೃಷಿ ಉಪ ನಿರ್ದೇಶಕ ಅಶೋಕ್‌, ರೈತರು ಮಣ್ಣಿನ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು. ಮಣ್ಣಿನ ಗುಣಲಕ್ಷಣ ಅರಿತರೆ ಬೆಳೆ ಬೆಳೆಯಲು ಸುಲಭ ಸಾಧ್ಯ ಎಂದರು. ಅದಕ್ಕಾಗಿ ಎಲ್ಲಾ ರೈತರು ತಮ್ಮ ಜಮೀನಿನ ಮಣ್ಣಿನ ಆರೋಗ್ಯ ಹಾಗೂ ಗುಣ ಲಕ್ಷಣ ತಿಳಿದು ವ್ಯವಸಾಯ ಮಾಡಬೇಕು. ಇದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಪ್ರಯೋಜನಾಕಾರಿ ಎಂದರು.

ಈ ವೇಳೆ ತಾಪಂ ಇಒ ನಂದಿನಿ, ಸದಸ್ಯ ದೊಡ್ಡಯ್ಯ, ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ರೈತ ಮುಖಂಡರಾದ ಕರಿಯಣ್ಣ, ತುಂಗೋಟಿ ರಾಮಣ್ಣ, ಎಒಗಳಾದ ಶಿವಣ್ಣ, ಕವಿತಾ, ಬೆಂಗಳೂರು ಜಿಕೆವಿಕೆ ಸಂಸ್ಥೆಯ ಯುವ ವಿಜ್ಞಾನಿಗಳಾದ ಅನಿಲ್‌, ನವೀನ್‌, ಡಾ.ನಾಗರಾಜು, ಗ್ರಾಪಂ ಸದಸ್ಯ ಮುತ್ಯಾಲಪ್ಪ, ನೂರಾರು ರೈತರು ಹಾಗೂ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.