ರೈತ, ಜನವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
Team Udayavani, Nov 6, 2020, 6:49 PM IST
ತುಮಕೂರು: ಕೇಂದ್ರದ ರೈತ, ಜನವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘ ಮತ್ತು ಹಸಿರು ಸೇನೆಯಕಾರ್ಯಕರ್ತರು ರಸ್ತೆ ತಡೆಗೆ ಮುಂದಾದಾಗ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದಪಟೇಲ್ ನೇತೃತ್ವದಲ್ಲಿ ನೂರಾರು ರೈತರು ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ಕಾಯ್ದೆಗಳ ಜಾರಿಯನ್ನು ವಿರೋಧಿಸಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮದ ಅಂಗವಾಗಿ, ಕ್ಯಾತ್ಸಂದ್ರದಿಂದ ಜಾಸ್ ಟೋಲ್ ವರೆಗೂ ಮೆರವಣಿಗೆ ಹೊರಟ ರೈತರನ್ನು ಕ್ಯಾತ್ಸಂದ್ರ ಸರ್ಕಲ್ ನಲ್ಲಿ ತಡೆದ ಪೊಲೀಸರು, ಅವರನ್ನು ಬಂಧಿಸಿ, ಸಂಜೆಯವರೆಗೆ ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಮೈದಾನದಲ್ಲಿರಿಸಿ, ಸಂಜೆಯ ವೇಳೆಗೆ ಬಿಡುಗಡೆ ಮಾಡಿದರು.
ಪೊಲೀಸರ ವಿರುದ್ಧ ರೈತರ ಆಕ್ರೋಶ: ಕ್ಯಾತ್ಸಂದ್ರ ಬಳಿ ಸಮಾವೇಶಗೊಂಡಿದ್ದ ರೈತರನ್ನು ಉದ್ದೇಶಿಸಿ ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಆನಂದ ಪ ಟೇಲ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸುಗ್ರೀವಾಜ್ಞೆ ಗಳ ಮೂಲಕ ಜಾರಿಗೆ ತಂದಿರು ರೈತ ವಿರೋಧಿ ಮಸೂದೆಗಳಾದ ಎಪಿಎಂಸಿ ತಿದ್ದುಪಡಿ ಕಾಯ್ದೆ, ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ, ವಿದ್ಯುತ್ ಖಾಸಗೀಕರಣ ಮಸೂದೆಗಳು ಅತ್ಯಂತ ಜನವಿರೋಧಿ ಮತ್ತು ರೈತ ವಿರೋಧಿಯಾಗಿವೆ. ಇದರ ವಿರುದ್ಧ ರಾಷ್ಟ್ರದ್ಯಂತ ಹೋರಾಟಗಳು ನಡೆಯುತ್ತಿದ್ದು, ಇದರ ಭಾಗವಾಗಿ ನಾವು ರಾಜ್ಯದಲ್ಲಿ ಹೆದ್ದಾರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದರೆ ಪೊಲೀಸರು ಇಲ್ಲಸಲ್ಲದ ನೆಪ ಹೇಳಿ ನಮನ್ನು ತಡೆಯುತ್ತಿದ್ದಾರೆ. ಇದು ಪೊಲೀಸ್ ಇಲಾಖೆಗೆ ಶೋಭೆ ತರುವಂತಹದ್ದಲ್ಲ ಎಂದರು.
ಪೊಲೀಸರಿಂದ ಇಬ್ಬಗೆ ನೀತಿ: ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ರೈತರು ಮತ್ತು ರಾಜಕಾರಣಿಗಳ ನಡುವೆ ತಾರತಮ್ಯ ಅನುಸರಿಸುತ್ತಿದೆ. ಈ ಹಿಂದೆ ರಾಜ್ಯ ಬಂದ್‌ಗೆ ಕರೆ ನೀಡಿದ ಸಂದರ್ಭದಲ್ಲಿ ಬೈಕ್ ರ್ಯಾಲಿಗೆ ಅವಕಾಶ ನೀಡಿದೆ ಪ್ರತಿಭಟನೆ ಹತ್ತಿಕ್ಕುವ ಕೆಲಸವನ್ನು ಮಾಡಿದರೂ, ಆದರೆ ರಾಜಕಾರಣಿಯೊಬ್ಬರ ಮನೆಯ ಮೇಲೆ ಇಡಿ ರೈಡ್ ಆದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಯಾವುದೇ ಅನುಮತಿ ಇಲ್ಲದೆ ಬೈಕ್ ರ್ಯಾಲಿ ನಡೆಸಲು ಅವಕಾಶ ಕಲ್ಪಿಸಿದರು. ಇದು ಪೊಲೀಸ್ ಇಲಾಖೆಯ ಇಬ್ಬಗೆಯೇ ನೀತಿ. ಇದನ್ನು ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ನುಡಿದರು.
ಪೊಲೀಸ್ ಠಾಣೆಯ ಮುಂದೂ ಪ್ರತಿಭಟನೆ: ರೈತರನ್ನು ಬಂಧಿಸಿ, ಡಿ.ಆರ್ ಕಚೇರಿ ಬಳಿ ಕರೆ ತಂದ ನಂತರ ಅಲ್ಲಿಯೂ ಪ್ರತಿಭಟನೆ ಮುಂದುವರಿಸಿದ ರೈತರು, ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳು, ಅವುಗಳಿಂದ ರೈತರಿಗೆ ಆಗುವ ತೊಂದರೆಗಳ ಕುರಿತು ವಿವರ ನೀಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್, ಜಿಲ್ಲಾ ಕಾರ್ಯಾಧ್ಯಕ್ಷ ಧನಂಜಯ ಆರಾಧ್ಯ, ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಕಾರ್ಯದರ್ಶಿ ರುದ್ರೇಶಗೌಡ, ಜಿಲ್ಲಾ ಸಂಘಟನಾಕಾರ್ಯದರ್ಶಿ ಹಳೆ ಸಂಪಿಗೆ ಕೀರ್ತಿ, ಕುಣಿಗಲ್ ತಾ. ಅಧ್ಯಕ್ಷ ಅನಿಲ್ ಕುಮಾರ್, ತುರುವೇಕೆರೆ ತಾ. ಅಧ್ಯಕ್ಷ ತಾಳೆಕೇರೆ ನಾಗೇಂದ್ರ, ಶಿರಾ ಉಪಾಧ್ಯಕ್ಷ ಕುದುರೆ ಕುಂಟೆ ಲಕ್ಕಣ್ಣ, ಗುಬ್ಬಿ ತಾಲೂಕು ಅಧ್ಯಕ್ಷ ಚಿದಾನಂದಮೂರ್ತಿ, ಲಂಕೇನಹಳ್ಳಿ ಕಾಂತರಾಜು ಸೇರಿದಂತೆ ನೂರಾರು ರೈತರು, ರೈತ ಮಹಿಳೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.