ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ
Team Udayavani, Jul 15, 2019, 4:44 PM IST
ಶಿರಾ ನಗರದ ಪ್ರವಾಸಿಮಂದಿರದಲ್ಲಿ ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟ, ಶಿರಾ ಜಿಲ್ಲಾ ಹೋರಾಟ ಸಮಿತಿ, ದಲಿತ ಸಂಘರ್ಷ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಮುಖಂಡರು.
ಶಿರಾ: ತಾಲೂಕು ಎಆರ್‌ಟಿಒ ಕಚೇರಿಯನ್ನು ಮಧುಗಿರಿಗೆ ವರ್ಗಾಯಿಸಿ ರುವುದು ಸರಿಯಲ್ಲ. ಆದೇಶ ಹಿಂಪಡೆ ಯಬೇಕು ಎಂದು ದಲಿತ ಮುಖಂಡ ರಾಜಸಿಂಹ ಆಗ್ರಹಿಸಿದರು.
ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟ ಮತ್ತು ಶಿರಾ ಜಿಲ್ಲಾ ಹೋರಾಟ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ಶಿರಾ ತಾಲೂಕು ತುಮಕೂರು ಜಿಲ್ಲೆಯಲ್ಲೇ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ರಾಜಧಾನಿಗೆ ಸಮೀಪವಾಗಿರುತ್ತದೆ. ಜಿಲ್ಲಾ ಕೇಂದ್ರವಾಗುವ ಎಲ್ಲಾ ಲಕ್ಷಣಗಳಿದ್ದು, ತಾಲೂಕಿನ ಆದಾಯದ ಮೇಲೆ ಕಣ್ಣಿಟ್ಟು ಮಧುಗಿರಿ ಎಆರ್‌ಟಿಒ ಕಚೇರಿ ವ್ಯಾಪ್ತಿಗೆ ಒಳಪಡಿಸಲಾಗಿದೆ. ಒಂದು ವೇಳೆ ಈ ಆದೇಶ ಹಿಂಪಡೆಯದಿದ್ದರೆ ತಾಲೂಕಿನ ಎಲ್ಲಾ ಕನ್ನಡಪರ ಸಂಘಟನೆಗಳು, ರಾಜಕೀಯ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸೇರಿ ಉಗ್ರ ಪ್ರತಿ ಭಟನೆ ಮಾಡಬೇಕಾ ಗುತ್ತದೆ ಎಂದು ಎಚ್ಚರಿಸಿದರು. ಶಿರಾ ತಾಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷ ಸಿದ್ದೇಶ್ ಯಾದವ್, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ವಿನಯ್ (ಕಿಶೋರ್), ಶಿರಾ ಅಭಿವೃದ್ಧಿ ವೇದಿಕೆ ರಘುರಾವ್, ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ನಿಂಗಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯದರ್ಶಿ ಬಾಬು, ದಾದು, ಜಲೀಲ್, ಪತಿ, ರಮೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.