ವಿವಿಧ ಬೇಡಿಕೆಗಳ ಈಡೇರಿಕೆಗೆ ಒತಾಯ


Team Udayavani, Jan 18, 2018, 5:35 PM IST

tmk-.jpg

ತುಮಕೂರು: ಆಶಾ, ಅಂಗನವಾಡಿ, ಅಕ್ಷರ ದಾಸೋಹ ಕಾರ್ಯರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಕಾರ್ಯಕರ್ತೆಯರ ಯೋಜನೆಯ ಹಣ ಕಡಿತಗೊಳಿಸುವ ಮೂಲಕ ಯೋಜನೆಯನ್ನು ಸ್ಥಗಿತಗೊಳಿಸಲು ಹೊರಟಿರುವ ಕೇಂದ್ರ ಸರಕಾರದ ಕ್ರಮ ಖಂಡಿಸಿ ಎಐಟಿಯುಸಿ ನೇತೃತ್ವದಲ್ಲಿ ಕಾರ್ಯಕರ್ತೆಯರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಟೌನ್‌ ಹಾಲ್‌ನ ಬಿಜಿಎಸ್‌ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಆಶಾ, ಅಂಗನವಾಡಿ, ಅಕ್ಷರ ದಾಸೋಹ ಕಾರ್ಮಿಕರು ಕೇಂದ್ರ ಸರ್ಕಾರ ಕಾರ್ಮಿಕರಿಗೆ ವಂಚನೆ ಮಾಡುತ್ತಿರುವುದನ್ನು ವಿರೋಧಿಸಿ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಎಐಯುಟಿಯುಸಿ ಮುಖಂಡ ಮಜೀರ್‌ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ ಡಿಎ ಸರ್ಕಾರ ದೇಶದ ಕೋಟ್ಯಂತ ಕಾರ್ಮಿಕರ ಬೇಡಿಕೆಗಳನ್ನು ನಿರ್ಲಕ್ಷಿéಸುತ್ತಿದೆ ಮತ್ತು ಕಾರ್ಮಿಕರ ಹೋರಾಟಗಳಿಗೆ ಸ್ಪಂದಿಸದೆ ಮೌನ ವಹಿಸಿದೆ ಎಂದು ಆರೋಪಿಸಿ ದೇಶವ್ಯಾಪಿ ಅಂಗನವಾಡಿ, ಆಶಾ ಮತ್ತು ಬಿಸಿಯೂಟ ಕಾರ್ಯಕರ್ತೆಯರು ಒಂದು ದಿನ ಮುಷ್ಕರ ನಡೆಸುತ್ತಿದ್ದಾರೆ ಎಂದರು. 

ಕೇಂದ್ರ ಸರಕಾರ ಜಾರಿಗೆ ತಂದ ಬಿಸಿಯೂಟ, ಅಂಗನವಾಡಿ ಹಾಗು ಎನ್‌.ಆರ್‌.ಎಚ್‌.ಎಂ ನ ಆಶಾ ಕಾರ್ಯಕರ್ತೆಯರ ಯೋಜನೆಗೆ ನೀಡುತ್ತಿರುವ ಅನುದಾನ ಕಡಿತ ಮಾಡಬಾರದು, 2011 ರಿಂದ ಗೌರವ ಧನದ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ಕನಿಷ್ಠ 18 ಸಾವಿರ ರೂ. ಕನಿಷ್ಠ ವೇತನ ನೀಡಬೇಕು ಹಾಗೂ 45ನೇ ಅಂತಾರಾಷ್ಟ್ರೀಯ ಕಾರ್ಮಿಕರ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು. 

ಮುಖಂಡರಾದ ರತ್ನಮ್ಮ ಮಾತನಾಡಿ, ಆಶಾ, ಅಂಗನವಾಡಿ ಬಿಸಿಯೂಟ ಕಾರ್ಯಕರ್ತೆಯನ್ನು ಕಾರ್ಮಿಕರೆಂದು ಪರಿಗಣಿಸಬೇಕು ತಿಂಗಳಿಗೆ 18 ಸಾವಿರಕ್ಕಿಂತ ಕಡಿಮೆ ಇರದಂತೆ ವೇತನ ನೀಡಬೇಕು ಮತ್ತು ಮಾಸಿಕ ಮೂರು ಸಾವಿರ ಪೆನ್ಷನ್‌ ಜೊತೆಗೆ ಸಾಮಾಜಿಕ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.

ಕನಿಷ್ಠ ವೇತನದ ಸರಿಸಮ ವೇತನ ನೀಡಲು ಐಸಿಇಡಿಎಸ್‌- ಎನ್‌.ಎಚ್‌.ಎಂ- ಎಂಡಿಎಂ- ಎಸ್‌. ಎಸ್‌.ಎ ಮತ್ತಿತ್ತರ ಕೇಂದ್ರ ಸರ್ಕಾರದ ಪ್ರಯೋಜಿತ ಯೋಜನೆಗಳ ಉತ್ತಮ ಗುಣಮಟ್ಟ ಮತ್ತು ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹಾಗೂ ಯೋಜನೆಯನ್ನು ಸಾರ್ವತ್ರಿಕರಿಸಲು ಬೇಕಾಗಿರುವ ಖರ್ಚು ವೆಚ್ಚವನ್ನು ಸರಿದೂಗಿಸುವ ಹಣವನ್ನು ಮುಂಬರುವ 2018- 19ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಒದಗಿಸಬೇಕೆಂದು ಆಗ್ರಹಿಸಿದರು. ಪತ್ರಿಭಟನೆಯಲ್ಲಿ ತುಮಕೂರು ಗುಬ್ಬಿ ಸೇರಿದಂತೆ ಸುತ್ತಮುತ್ತಲ ತಾಲೂಕುಗಳಿಂದ ನೂರಾರು ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರು ಭಾವಹಿಸಿದ್ದರು. 

ಸರ್ಕಾರದ ಧೋರಣೆ ಖಂಡಿಸಿ ಧರಣಿ
 ಮಧುಗಿರಿ: ಆಶಾ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ತಾಲೂಕು ಶಾಖೆ ಹಾಗೂ ಎಐಯುಟಿಯುಸಿ ಪದಾಧಿಕಾರಿಗಳು ಪಟ್ಟಣದ ಪ್ರಮುಖ
ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ತಿಂಗಳಿಗೆ 18 ಸಾವಿರಕ್ಕಿಂತ ಕಡಿಮೆ ಇರದಂತೆ ವೇತನ ನೀಡಬೇಕು, ಮಾಸಿಕ 3 ಸಾವಿರ ಪಿಂಚಣಿಯ ಜೊತೆಗೆ ಸಾಮಾಜಿಕ ಭದ್ರತೆ ನೀಡಬೇಕೆಂದು ಆಗ್ರಹಿಸಿದರು.

ಗೌರವ ಧನ ಮತ್ತು ಪ್ರೋತ್ಸಾಹ ಧನದ ಹೆಸರಿನಲ್ಲಿ ಸರ್ಕಾರವೇ ನಮ್ಮನ್ನು ಶೋಷಣೆ ಮಾಡುತ್ತಿರುವುದು ಖಂಡನೀಯ. ಅಂಗನ ವಾಡಿ ಕಾರ್ಯಕರ್ತೆಯರು ಹಾಗೂ ಸಹಾಯ ಕರಿಗೆ ಮಾಸಿಕ 3 ಸಾವಿರ ಗೌರವ ಧನ ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಮಾಡುವ ಕೆಲಸಗಳನ್ನಾಧರಿಸಿ ಪ್ರೋತ್ಸಾಹ ಧನದ ನೀಡುವ ವ್ಯವಸ್ಥೆ ಮಾಡಿರುವುದರಿಂದ ಆದಾಯ ಅನಿಶ್ಚಿತವಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರೇಡ್‌ 2 ತಹಶೀಲ್ದಾರ್‌ ಎ.ತಿಪ್ಪೇಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ತಾಲೂಕು ಶಾಖೆಯ ಅಧ್ಯಕ್ಷೆ ತಿಮ್ಮಾಜಮ್ಮ, ಕಾರ್ಯದರ್ಶಿ ಭಾರತಿ, ಪದಾಧಿಕಾರಿಗಳಾದ ಮಲ್ಲಮ್ಮ, ಕಮಲಮ್ಮ, ಸುಜಾತ, ಪುಷ್ಪಲತಾ, ಆಶಾ, ಲಕ್ಷ್ಮಮ್ಮ, ಸುವರ್ಣ, ಮಂಜುಳಾ, ಶ್ರೀರಂಗಮ್ಮ, ಸುಗುಣ, ಎಐಯುಟಿಯುಸಿ ಅಶ್ವಿ‌ನಿ ಇತರರು ಈ ಸಂದರ್ಭದಲ್ಲಿ
ಉಪಸ್ಥಿತರಿದ್ದರು.

ಟಾಪ್ ನ್ಯೂಸ್

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.