ಗುಬ್ಬಿ ಶಾಸಕ ಶ್ರೀನಿವಾಸ್ ಕ್ಷಮೆಗೆ ಮಾಜಿ ಜೆಡಿಎಸ್ ಶಾಸಕ ಸುಧಾಕರ ಲಾಲ್ ಆಗ್ರಹ
Team Udayavani, Jun 16, 2022, 5:49 PM IST
ಕೊರಟಗೆರೆ: ರೈತಪರ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಣ್ಣ ವಿರುದ್ದ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ನೀಡಿರುವ ನಿಂದನೆಯೇ ಹೇಳಿಕೆ ಖಂಡನೀಯ. ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ತಕ್ಷಣ ಜೆಡಿಎಸ್ ಕಾರ್ಯಕರ್ತರ ಕ್ಷಮೆಯಾಚನೆ ಮಾಡಬೇಕು ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರ ಲಾಲ್ ಆಗ್ರಹಿಸಿದ್ದಾರೆ.
ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಾತ್ಯತೀತ ಜನತಾದಳದ ವತಿಯಿಂದ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಗುಬ್ಬಿ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಗೆದ್ದು ಸಚಿವ ಸ್ಥಾನ ಅನುಭವಿಸಿ ಈಗ ಪಕ್ಷದ ವರಿಷ್ಠರ ವಿರುದ್ದವಾಗಿ ಹೇಳಿಕೆ ನೀಡಿರುವುದು ಶೋಭೆ ತರುವುದಿಲ್ಲ. ಪಕ್ಷ ಬಿಡುವುದು ಅವರ ವೈಯಕ್ತಿಕ ವಿಚಾರ. ಆದರೇ ಪಕ್ಷವನ್ನು ನಿಂದನೆ ಮಾಡಿರುವುದೇ ಖಂಡನೀಯ. ರಾಜ್ಯದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಕ್ಷಮೆ ಕೇಳುಬೇಕು ಎಂದರು.
ತುಮಕೂರು ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ, ತುಮಕೂರು ಜಿಲ್ಲೆಯ ನಾಯಕತ್ವವನ್ನು ಜೆಡಿಎಸ್ ಪಕ್ಷದ ವರಿಷ್ಠರು ಶ್ರೀನಿವಾಸ್‌ಗೆ ನೀಡಿ ಗೌರವ ನೀಡಿದ್ದಾರೆ. ಪಕ್ಷದ ಚಿಹ್ನೆಯ ಮೂಲಕ ಶಾಸಕರಾಗಿ, ನಂತರ ಸಚಿವರಾಗಿ ಅಧಿಕಾರ ಅನುಭವಿಸಿದ್ದಾರೆ. ಆದರೆ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವುದು ನೋವಿನ ವಿಚಾರ ಎಂದರು.
ಕೊರಟಗೆರೆ ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು ಮಾತನಾಡಿ, ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಗುಬ್ಬಿ ಶಾಸಕ ಶ್ರೀನಿವಾಸ್‌ಗೆ ನಮ್ಮ ಧಿಕ್ಕಾರವಿರಲಿ. 20 ವರ್ಷದಿಂದ ಜೆಡಿಎಸ್ ಪಕ್ಷದ ಚಿಹ್ನೆಯ ಅಡಿಯಲ್ಲಿ ಶಾಸಕ, ಸಚಿವರಾಗಿ ಈಗ ವರಿಷ್ಠರ ವಿರುದ್ದವಾಗಿ ಮಾತನಾಡುವ ಹಕ್ಕು ಇಲ್ಲ. ಯಾವುದೇ ಪಕ್ಷದ ಚಿಹ್ನೆಯಿಲ್ಲದೇ ಈಗ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.
ಸುದ್ದಿಗೋಷ್ಟಿಯಲ್ಲಿ ಕೊರಟಗೆರೆ ಜೆಡಿಎಸ್ ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಪಪಂ ಅಧ್ಯಕ್ಷ ಕಾವ್ಯ ರಮೇಶ್, ಉಪಾಧ್ಯಕ್ಷ ಭಾರತಿ ಸಿದ್ದಮಲ್ಲಪ್ಪ, ಪಪಂ ಸದಸ್ಯ ಲಕ್ಷ್ಮೀ ನಾರಾಯಣ್, ಪುಟ್ಟನರಸಪ್ಪ ಮುಖಂಡರಾದ ಕಾಮರಾಜು, ಪ್ರಕಾಶ್, ಕೌಶಿಕ್, ಹನುಮಂತರಾಜು, ಕಲೀವುಲ್ಲಾ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.