ಆಗಸ್ಟ್ ತಿಂಗಳಿಂದ ಉಚಿತ ವಿದ್ಯುತ್‌ಗೆ ಕಲಬುರಗಿಯಲ್ಲಿ ಚಾಲನೆ:ಡಾ.ಜಿ.ಪರಮೇಶ್ವರ

2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ

Team Udayavani, Jul 28, 2023, 9:41 PM IST

1-sadasdasd

ಕೊರಟಗೆರೆ: ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣವು ಯಶಸ್ವಿಯತ್ತ ಸಾಗುತ್ತಿದೆ.. ಅನ್ನಭಾಗ್ಯದ ಗೊಂದಲಕ್ಕೆ ಈಗಾಗಲೇ ತೆರೆಬಿದ್ದಿದೆ.. ಆಗಸ್ಟ್ ಮಾಹೆಯಿಂದ ರಾಜ್ಯದ ಜನತೆಗೆ 200 ಯೂನಿಟ್ ವಿದ್ಯುತ್ ಉಚಿತ ‘ಗೃಹ ಜ್ಯೋತಿ’ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡುತ್ತೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪಟ್ಟಣ, ಕಸಬಾ, ಕೋಳಾಲ ಮತ್ತು ಕೋರಾ ಹೋಬಳಿ ವ್ಯಾಪ್ತಿಯಲ್ಲಿ ಅರಣ್ಯ, ಪ್ರವಾಸೋಧ್ಯಮ, ಜಿಪಂ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ 17 ಕೋಟಿಗೂ ಅಧಿಕ ಅನುಧಾನದ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ಬಯಲುಸೀಮೆ ರೈತರ ಬಹುದೊಡ್ಡ ಕನಸಾದ ಎತ್ತಿನಹೊಳೆ ಯೋಜನೆಯು 2 ವರ್ಷದಲ್ಲಿ ಪೂರ್ಣ ಆಗಲಿದೆ. ಕಾಮಗಾರಿ ಪೂರ್ಣಕ್ಕೆ ಅನುದಾನ ಬಿಡುಗಡೆ ಮಾಡಲು ನಮ್ಮ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಕೊರಟಗೆರೆ ಕ್ಷೇತ್ರದ ಮನೆ ಮನೆಗೆ ನೀರಿನ ಸಂಪರ್ಕಕ್ಕಾಗಿ ಜಲಜೀವನ್ ಮಿಷನ್ ಯೋಜನೆಯಡಿ 198 ಕೋಟಿ ರೂ. ಕಾಮಗಾರಿ ಈಗಾಗಲೇ ಪ್ರಾರಂಭ ಆಗಿದೆ. ಕೊರಟಗೆರೆ ಕ್ಷೇತ್ರದ ಜನತೆಗೆ 5 ಸಾವಿರ ಸೈಟ್ ನೀಡಲು ಅಂಕಿಅಂಶದ ರೂಪರೇಷೆ ತಯಾರಿಸಲು ಜಿಪಂ ಸಿಇಓಗೆ ಸೂಚನೆ ನೀಡಲಾಗಿದೆ ಎಂದರು.

ಕೇಂದ್ರ ಸರಕಾರದ ಬಳಿ ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ರಾಜ್ಯದ ಜನರಿಗೆ ಅಕ್ಕಿ ನೀಡಲು ನಿರಾಕರಿಸಿದೆ. ನಮ್ಮ ಸರಕಾರ ನೀಡಿದ್ದ ಮಾತಿನಂತೆ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿ ಅಕ್ಕಿಗೆ 34ರೂ ಹಣ ನೀಡುತ್ತಿದ್ದೇವೆ. ಪದವಿ ಪಡೆದವರಿಗೆ 3 ಸಾವಿರ ಮತ್ತು ಡಿಪ್ಲೋಮೊ ಮಾಡಿದವರಿಗೆ 2500 ರೂ ನೀಡಲು ರಾಜ್ಯ ಸರಕಾರ ಈಗಾಗಲೇ ಯುವನಿಧಿಗೂ ರೂಪುರೇಷೆ ತಯಾರಿಸಿದೆ ಎಂದು ಮಾಹಿತಿ ನೀಡಿದರು.

ವಿಧಾನಸಭಾ ಚುನಾವಣೆ ವೇಳೆ ನಾವು ರಾಜ್ಯದ ಜನತೆಗೆ ನೀಡಿದ ಭರವಸೆಯಲ್ಲಿ 5 ಗ್ಯಾರಂಟಿಗೆ ಈಗಾಗಲೇ ಸಂಪುಟದ ಒಪ್ಪಿಗೆಯು ಸಿಕ್ಕಿದೆ. ರಾಜ್ಯದ ಜನರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳುತ್ತೇನೆ ಯಾವುದೇ ಅನುಮಾನ ಬೇಡ. ನನ್ನ ಕ್ಷೇತ್ರದಲ್ಲಿ 3 ಕೋಟಿ 50 ಲಕ್ಷ ವೆಚ್ಚದ 2 ಆಸ್ಪತ್ರೆಗಳು ಈಗಾಗಲೇ ನಿರ್ಮಾಣ ಆಗಿವೆ. ಕೋಳಾಲದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್, ಜಿಪಂ ಸಿಇಓ ಪ್ರಭು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಅರಣ್ಯ ಇಲಾಖೆಯ ಸರಂಕ್ಷಣಾ ಅಧಿಕಾರಿ ರಮೇಶ್, ಉಪ ಸರಂಕ್ಷಣಾ ಅಧಿಕಾರಿ ಅನುಫಮಾ, ತಹಶೀಲ್ದಾರ್ ಮುನಿಶಾಮಿರೆಡ್ಡಿ, ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥನಾರಾಯಣ್, ಅರಣ್ಯಾಧಿಕಾರಿ ಸುರೇಶ್, ಸತೀಶಚಂದ್ರ, ಮಲ್ಲಿಕಾರ್ಜುನಪ್ಪ, ಸುಬ್ಬರಾವ್, ಮಹೇಶ್‌ಮಲ್ಲಗಟ್ಟಿ, ಚಿಕ್ಕರಾಜೇಂದ್ರ, ನಾಗರಾಜು ಸೇರಿದಂತೆ ಇತರರು ಇದ್ದರು.

17 ಕೋಟಿ ರೂ. ಕಾಮಗಾರಿಗೆ ಚಾಲನೆ

ಅರಣ್ಯ ಇಲಾಖೆಯ ವೃಕ್ಷೋಧ್ಯಾನ ಯೋಜನೆಯಡಿ ೨ಕೋಟಿ ೫೦ಲಕ್ಷ ವೆಚ್ಚದ ಟ್ರೀಪಾರ್ಕ್ ಲೋಕಾರ್ಪಣೆ, ಪ್ರವಾಸೋದ್ಯಮ ಇಲಾಖೆಯ 9 ಕೋಟಿ ವೆಚ್ಚದ ಗೋಕುಲಕೆರೆಯ ಉದ್ಯಾನವನ, ಸಮಾಜ ಕಲ್ಯಾಣ ಇಲಾಖೆಯ 2 ಕೋಟಿ 75 ಲಕ್ಷ ವೆಚ್ಚದ 14 ಅಂಬೇಡ್ಕರ್ ಭವನ, ಜಿಪಂಯ 2 ಕೋಟಿ ರೂ. ವೆಚ್ಚದಲ್ಲಿ ಕಾವರ್ಗಲ್ ಕಂಬದಹಳ್ಳಿ ಕೆರೆಯ ಅಭಿವೃದ್ದಿ ಕಾಮಗಾರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೂಮಿಪೂಜೆ ನೇರವೆರಿಸಿದರು.

ಅವೈಜ್ಞಾನಿಕ ಕೌನ್ಸಿಲಿಂಗ್ ರದ್ದತಿಗೆ ಮನವಿ

ಟಿಸಿಎಂಎಸ್ ಕಾಯ್ದೆಯು ಅರಣ್ಯ ಇಲಾಖೆಯ ನೌಕರರಿಗೆ ಮಾರಕವಾಗಿದೆ. ಕೆಳಹಂತದ ನೌಕರರಿಗೆ ಸ್ವಂತ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಸೀಗೋದಿಲ್ಲ. ಅಪರಾಧ ತಡೆಗೆ ಕಾಯ್ದೆಯಿಂದ ಹಿನ್ನಡೆಯಾಗುವ ಸಾಧ್ಯತೆಯು ಹೆಚ್ಚಿದೆ. ಭವಿಷ್ಯದ ಅರಣ್ಯ ಸಂಪತ್ತು ಸಂರಕ್ಷಣೆಗಾಗಿ ಕೌನ್ಸಿಲಿಂಗ್ ಪದ್ದತಿ ರದ್ದಾಗಬೇಕಿದೆ. ಅವೈಜ್ಞಾನಿಕ ಕೌನ್ಸಿಲಿಂಗ್ ವರ್ಗಾವಣೆ ಪದ್ದತಿ ರದ್ದು ಮಾಡುವಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ವೃಕ್ಷೋಧ್ಯಾನ ಕಾರ್ಯಕ್ರಮದ ವೇಳೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.